Breaking News

ಹೃದಯಾಘಾತಕ್ಕೆ ಬಲಿ: ಒಂದೇ ತಿಂಗಳಲ್ಲಿ 14 ಜನ ಸಾವು

Spread the love

ಬೆಂಗಳೂರು/ಹಾಸನ, (ಜೂನ್ 26): ಹಾಸನ (Hassan) ಮೂಲದ ಯುವಕ-ಯುವತಿಯರು(Youths) ಹೃದಯಾಘಾತದಿಂದ (Heart Attack) ಸಂಭವಿಸುತ್ತಿರುವ ಸಾವಿನ ಸರಣಿ ಮುಂದುವರಿದಿದೆ. ಚಿಕ್ಕವರಿಂದ ಹಿಡಿದು ವಯಸ್ಕರು ದಿಢೀರ್​ ಸಾವನ್ನಪ್ಪುತ್ತಿದ್ದಾರೆ. ಒಂದೇ ದಿನ ಹಾಸನದ ಮತ್ತಿಬ್ಬರು ಹೃದಯಾಘಾತಕ್ಕೆ ಬಲಿಯಾಗಿದ್ದಾರೆ. ನಿನ್ನೆ (ಜೂನ್ 25) ಸಂಜೆ ಅಷ್ಟೇ ಹಾಸನ ಮೂಲದ ಯುವಕ ಬೆಂಗಳೂರಿನಲ್ಲಿ ಹೃದಯಾಘಾತದಿಂದ ಸಾವನ್ನಪ್ಪಿದ್ದರೆ, ಮತ್ತೋರ್ವ ಹಾಸನ ಮೂಲದ ಯುವತಿ ಬೆಂಗಳೂರಿನಲ್ಲಿ ಹೃದಯಘಾತಕ್ಕೆ ಬಲಿಯಾಗಿದ್ದಾರೆ. ಇದರೊಂದಿಗೆ ಹಾಸನದವರು ಒಂದೇ ತಿಂಗಳಲ್ಲಿ ಹೃದಯಾಘಾತದಿಂದ ಮೃತಪಟ್ಟವರ ಸಂಖ್ಯೆ 14ಕ್ಕೆ ಏರಿಕೆಯಾಗಿದೆ.

32 ವರ್ಷದ ಆಟೋ ಚಾಲಕ ಸಾವು

ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲೂಕಿನ ಎಂ ಹೊನ್ನೇನಹಳ್ಳಿ ಗ್ರಾಮದ 32 ವರ್ಷದ ಯೋಗೇಶ್​ ಬೆಂಗಳುರಿನಲ್ಲಿ ನಿನ್ನೆ(ಜೂನ್ 25) ಹೃದಯಾಘಾತದಿಂದ ಸಾವನ್ನಪ್ಪಿದ್ದರು. ನಾಲ್ಕು ವರ್ಷಗಳ ಹಿಂದೆ ಅಷ್ಟೇ ವಿವಾಹವಾಗಿದ್ದ ಯೋಗೇಶ್​ ಬೆಂಗಳೂರಿನಲ್ಲಿ ಆಟೋ ಓಡಿಸಿಕೊಂಡು ಲಗ್ಗೆರೆಯಲ್ಲಿ ವಾಸವಿದ್ದ. ಆದ್ರೆ, ಬುಧವಾರ ಬೆಳಗ್ಗೆ ಆಟೋ ಓಡಿಸಿ ಮನೆಗೆ ಬಂದು ಮಲಗಿದ್ದು, ಕೊಠಡಿಯಲ್ಲೇ ಮಲಗಿದ್ದಲ್ಲಿಯೇ ಸಾವನ್ನಪ್ಪಿದ್ದಾನೆ. ಬಳಿಕ ಆಸ್ಪತ್ರೆಗೆ ಹೋದಾಗ ವೈದ್ಯರು ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ ಎಂದು ಖಚಿತಪಡಿಸಿದ್ದಾರೆ.


Spread the love

About Laxminews 24x7

Check Also

ಬಂಗಾರ ಪ್ರಿಯರಿಗೆ ಗುಡ್‌ ನ್ಯೂಸ್‌ – 10 ಗ್ರಾಂ ಚಿನ್ನದ ಬೆಲೆ 2,900 ರೂ. ಇಳಿಕೆ

Spread the loveಬೆಂಗಳೂರು: ಕೊಲ್ಲಿ ರಾಷ್ಟ್ರಗಳ ಯುದ್ಧದ ಬಿಸಿ ನಡುವೆಯೂ ಬಂಗಾರ ಪ್ರಿಯರಿಗೆ ಗುಡ್‌ನ್ಯೂಸ್‌ ಸಿಕ್ಕಿದೆ. ಸತತ ಏರುಗತಿಯಲ್ಲಿ ಸಾಗುತ್ತಿದ್ದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ