Breaking News

ಯಲ್ಲಮ್ಮನಗುಡ್ಡದಲ್ಲಿ ಎರಡು ದಿನ ನಡೆದ ಯಲ್ಲಮ್ಮ ದೇವಸ್ಥಾನದ ಹುಂಡಿ ಎಣಿಕೆ ಕಾರ್ಯ ಗುರುವಾರ ಮುಕ್ತಾಯಗೊಂಡಿದ್ದು, ₹1.04 ಕೋಟಿ ಕಾಣಿಕೆ ಸಂಗ್ರಹ

Spread the love

ಸಮೀಪದ ಯಲ್ಲಮ್ಮನಗುಡ್ಡದಲ್ಲಿ ಎರಡು ದಿನ ನಡೆದ ಯಲ್ಲಮ್ಮ ದೇವಸ್ಥಾನದ ಹುಂಡಿ ಎಣಿಕೆ ಕಾರ್ಯ ಗುರುವಾರ ಮುಕ್ತಾಯಗೊಂಡಿದ್ದು, ₹1.04 ಕೋಟಿ ಕಾಣಿಕೆ ಸಂಗ್ರಹವಾಗಿದೆ.
ಇದರಲ್ಲಿ ₹5.22 ಲಕ್ಷ ಮೌಲ್ಯದ 53 ಗ್ರಾಂ ಚಿನ್ನಾಭರಣ, ₹1.27 ಲಕ್ಷ ಮೌಲ್ಯದ 1,276 ಗ್ರಾಂ ಬೆಳ್ಳಿ ಆಭರಣ, ₹98.23 ಲಕ್ಷ ನಗದು ಸೇರಿದೆ ಎಂದು ಯಲ್ಲಮ್ಮ ದೇವಸ್ಥಾನ ಪ್ರಾಧಿಕಾರದ ಕಾರ್ಯದರ್ಶಿ ಅಶೋಕ ದುಡಗುಂಟಿ ತಿಳಿಸಿದರು.
ಸಪ್ತಗುಡ್ಡ, ಸಪ್ತ ಕೊಳ್ಳಗಳ ನಡುವೆ ನೆಲೆ ನಿಂತ ಯಲ್ಲಮ್ಮನ ಸನ್ನಿಧಿಗೆ ದೇಶದ ನಾನಾ ಭಾಗಗಳಿಂದ ಲಕ್ಷಾಂತರ ಭಕ್ತರು ಆಗಮಿಸುತ್ತಾರೆ. ತಮ್ಮ ಇಷ್ಟಾರ್ಥಗಳು ಈಡೇರಿದ ಹಿನ್ನೆಲೆಯಲ್ಲಿ ದೇವಸ್ಥಾನದ ಹುಂಡಿಯಲ್ಲಿ ನಗದು ಮಾತ್ರವಲ್ಲದೆ, ಚಿನ್ನಾಭರಣ, ಬೆಳ್ಳಿ ಆಭರಣ ಹಾಕಿ ಭಕ್ತಿ ಸಮರ್ಪಿಸುತ್ತಾರೆ.
ಹೀಗೆ ಭಕ್ತರು ಹುಂಡಿಯಲ್ಲಿ ಹಾಕಿದ ಕಾಣಿಕೆಗಳ ಎಣಿಕೆ ಮಾಡಲಾಯಿತು.
ಯಲ್ಲಮ್ಮ ದೇವಸ್ಥಾನ ಪ್ರಾಧಿಕಾರದ ಕಾರ್ಯದರ್ಶಿಗಳು, ದೇವಸ್ಥಾನ ಅಧಿಕಾರಿಗಳು, ಬೆಳಗಾವಿ ಜಿಲ್ಲಾಧಿಕಾರಿ, ಧಾರ್ಮಿಕ ದತ್ತಿ ಇಲಾಖೆ ಕಚೇರಿ, ಸವದತ್ತಿಯ ತಹಶೀಲ್ದಾರ್‌ ಕಚೇರಿ ಸಿಬ್ಬಂದಿ ಹಾಗೂ ಸವದತ್ತಿ ಪೊಲೀಸರ ಸಮ್ಮುಖದಲ್ಲಿ ಹುಂಡಿಗಳನ್ನು ಒಡೆಯಲಾಯಿತು

Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ