Breaking News

ಮೂವರು ಐಪಿಎಸ್​ ಆಧಿಕಾರಿಗಳ ಅಮಾನತು ಅಂಗೀಕರಿಸಿದ ಕೇಂದ್ರ ಸರ್ಕಾರ

Spread the love

ಬೆಂಗಳೂರು: ಚಿನ್ನಸ್ವಾಮಿ ಕಾಲ್ತುಳಿತ ಪ್ರಕರಣ ಸಂಬಂಧ ಮೂವರು ಐಪಿಎಸ್ ಅಧಿಕಾರಿಗಳನ್ನು ಅಮಾನತುಗೊಳಿಸಿ ರಾಜ್ಯ ಸರ್ಕಾರ ಸಲ್ಲಿಸಿದ್ದ ವರದಿಯನ್ನು ಕೇಂದ್ರ ಸರ್ಕಾರ ಅಂಗೀಕರಿಸಿದೆ.

ಆರ್‌ಸಿಬಿ ವಿಜಯೋತ್ಸವ ವೇಳೆ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಕಾಲ್ತುಳಿತ ಉಂಟಾಗಿ 11 ಮಂದಿ ಸಾವನ್ನಪ್ಪಿದ ಹಿನ್ನೆಲೆ ಕರ್ತವ್ಯ ಲೋಪ ಆರೋಪದಡಿ ರಾಜ್ಯ ಸರ್ಕಾರ ಮೂವರು ಐಪಿಎಸ್ ಅಧಿಕಾರಿಗಳನ್ನು ಅಮಾನತು ಮಾಡಿ ಕೇಂದ್ರ ಸರ್ಕಾರಕ್ಕೆ ಮಾಹಿತಿ ರವಾನೆ ಮಾಡಿತ್ತು.

ಇದೀಗ ರಾಜ್ಯ ಸರ್ಕಾರದ ವರದಿಯನ್ನು ಅಂಗೀಕರಿಸಿ ಕೇಂದ್ರ ಡಿಪಿಎಆರ್‌ಗೆ ಮಾಹಿತಿ ರವಾನೆ ಮಾಡಿದೆ. ದಯಾನಂದ್, ವಿಕಾಸ್ ಕುಮಾರ್ ಮತ್ತು ಶೇಖರ್ ಎಂಬ ಐಪಿಎಸ್ ಅಧಿಕಾರಿಗಳನ್ನು ರಾಜ್ಯ ಸರ್ಕಾರ ಅಮಾನತು ಮಾಡಿತ್ತು.

ಈ ಬಗ್ಗೆ ಮಾತನಾಡಿರುವ ಗೃಹ ಸಚಿವ ಪರಮೇಶ್ವರ್, ಚಿನ್ನ ಸ್ವಾಮಿ ಸ್ಟೇಡಿಯಂನಲ್ಲಿ ನಡೆದ ದುರಂತ ಹಿನ್ನಲೆ ಮೂವರು ಐಪಿಎಸ್ ಅಧಿಕಾರಿಗಳನ್ನ ಅಮಾನತು ಮಾಡಲಾಗಿತ್ತು. ಈ ಬಗ್ಗೆ ಕೇಂದ್ರ ಸರ್ಕಾರಕ್ಕೆ ಮಾಹಿತಿ ನೀಡಲಾಗಿತ್ತು. ಈ ಬಗ್ಗೆ ಕೇಂದ್ರ ಸರ್ಕಾರ ಅಂಗೀಕರಿಸಿದೆ. ಸದ್ಯ ಮ್ಯಾಜಿಸ್ಟ್ರಿಯಲ್ , ನ್ಯಾಯಾಂಗ ಹಾಗೂ ಸಿಐಡಿಗೆ ತನಿಖೆಗೆ ವಹಿಸಲಾಗಿದೆ ಎಂದರು.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ