Breaking News

ಪೆಟ್ರೋಲ್ ಸುರಿದು ಎಟಿಎಂ ದರೋಡೆಗೆ ಯತ್ನ

Spread the love

ದಾವಣಗೆರೆ: ಪೆಟ್ರೋಲ್ ಸುರಿದು ಎಟಿಎಂ ಒಡೆಯಲು ಖದೀಮರು ಮುಂದಾಗಿದ್ದು, ಶಾರ್ಟ್‌ ಸರ್ಕ್ಯೂಟ್‌ನಿಂದ ಬೆಂಕಿ ಹೊತ್ತಿಕೊಂಡ ಬಳಿಕ ಪರಾರಿಯಾದ ಘಟನೆ ಜಗಳೂರು ತಾಲೂಕಿನ ಬಿಳಿಚೋಡು ಗ್ರಾಮದಲ್ಲಿ ಕಳೆದ ಮಧ್ಯರಾತ್ರಿ ನಡೆದಿದೆ. ಘಟನೆಯ ದೃಶ್ಯ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ.

ಕಳ್ಳರು ಮಧ್ಯರಾತ್ರಿ ಕೆನರಾ ಬ್ಯಾಂಕ್ ಎಟಿಎಂ ಕೇಂದ್ರಕ್ಕೆ ನುಗ್ಗಿದ್ದಾರೆ.‌ ಮೊದಲು ಕಬ್ಬಿಣದ ಸರಳು ಬಳಸಿ ಎಟಿಎಂ ಒಡೆಯಲು ಯತ್ನಿಸಿದ್ದಾರೆ. ಅದು ಸಾಧ್ಯವಾಗದೇ ಇದ್ದಾಗ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದಾರೆ. ಈ ವೇಳೆ ಶಾರ್ಟ್‌ ಸರ್ಕ್ಯೂಟ್​ನಿಂದ ಬೆಂಕಿ ಹೊತ್ತಿಕೊಂಡಿದೆ. ದಟ್ಟ ಹೊಗೆ ಆವರಿಸುತ್ತಿದ್ದಂತೆ ಎಸ್ಕೇಪ್ ಆಗಿದ್ದಾರೆ.ವಿಚಾರ ತಿಳಿಯುತ್ತಿದ್ದಂತೆ ಬ್ಯಾಂಕ್ ಸಿಬ್ಬಂದಿ ಪೊಲೀಸರ ಸಮೇತ ಎಟಿಎಂ ಬಳಿಗೆ ಧಾವಿಸಿದ್ದಾರೆ. ಬಿಳಿಚೋಡು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಎಫ್ಐಆರ್ ದಾಖಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ