Breaking News

ಅಂಬೇಡ್ಕರ್‌ ಬರೆದ ಸಂವಿಧಾನದಲ್ಲಿ ಜಾತ್ಯತೀತ ಹಾಗೂ ಸಮಾಜವಾದ ಪದಗಳು ಎಲ್ಲಿವೆ?: ಆರ್.ಅಶೋಕ

Spread the love

ಸಂವಿಧಾನಕ್ಕೆ 68 ಬಾರಿ ತಿದ್ದುಪಡಿ ತಂದ ಕಾಂಗ್ರೆಸ್‌, ಜಾತ್ಯತೀತ ಪದದ ಬಗ್ಗೆ ಮಾತನಾಡುತ್ತಿದೆ. ಆದರೆ ಬಾಬಾ ಸಾಹೇಬರು ಬರೆದ ಸಂವಿಧಾನದಲ್ಲಿ ಜಾತ್ಯತೀತ ಪದವೇ ಇಲ್ಲ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಆರ್‌ಎಸ್‌ಎಸ್‌ ಸರಕಾರ್ಯವಾಹರಾದ ದತ್ತಾತ್ರೇಯ ಹೊಸಬಾಳೆಯವರು ಹೇಳಿದ್ದು ಕಾಂಗ್ರೆಸ್‌ನವರು ಸೇರಿಸಿದ ಪದಗಳ ಬಗ್ಗೆ. ನಾನು ಒಕ್ಕಲಿಗ ಎಂದು ಗುರುತಿಸಿಕೊಳ್ಳುತ್ತೇನೆ. ಎಲ್ಲರೂ ಅವರ ಜಾತಿಯನ್ನು ಗುರುತಿಸಿಕೊಳ್ಳುತ್ತಾರೆ. ಅಂದಮೇಲೆ ಜಾತ್ಯತೀತ ಎಂಬುದಕ್ಕೆ ಅರ್ಥವಿಲ್ಲ. ಡಾ.ಬಿ.ಆರ್.ಅಂಬೇಡ್ಕರ್‌ ಬರೆದ ಸಂವಿಧಾನದಲ್ಲಿ ಜಾತ್ಯತೀತ ಹಾಗೂ ಸಮಾಜವಾದ ಎಂಬ ಪದ ಎಲ್ಲಿದೆ ಎಂದು ಕಾಂಗ್ರೆಸ್‌ ನಾಯಕರು ತೋರಿಸಲಿ. ರಾಹುಲ್‌ ಗಾಂಧಿ ಒಂದು ಕಡೆ ಜಾತಿ ಸಮೀಕ್ಷೆ ಬೇಕೆಂದು ಹೇಳುತ್ತಾರೆ. ನಂತರ ಜಾತ್ಯತೀತ ಎನ್ನುತ್ತಾರೆ. ಜವಹರಲಾಲ್‌ ನೆಹರು ಅವರು ಒಂದನೇ ತಿದ್ದುಪಡಿ ತಂದರು. ಒಟ್ಟು 17 ತಿದ್ದುಪಡಿಗಳನ್ನು ಅವರು ಮಾಡಿದ್ದಾರೆ. ನಂತರ ಬಂದ ಇಂದಿರಾಗಾಂಧಿ 26 ತಿದ್ದುಪಡಿ ಮಾಡಿದ್ದಾರೆ. ಬಾಬಾ ಸಾಹೇಬರ ಮೂಲ ಆಶಯಗಳನ್ನೇ ತಿದ್ದುಪಡಿ ಮಾಡಿದ್ದಾರೆ. ಒಟ್ಟಾರೆಯಾಗಿ ಕಾಂಗ್ರೆಸ್‌ 68 ತಿದ್ದುಪಡಿಗಳನ್ನು ಮಾಡಿದೆ ಎಂದರು.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ