Breaking News

ಕರ್ತವ್ಯನಿರತ ಫಾರೆಸ್ಟ್ ಗಾರ್ಡ್ ನಾಪತ್ತೆ

Spread the love

ಚಿಕ್ಕಮಗಳೂರು: ಕಡೂರು ತಾಲೂಕಿನ ಸಖರಾಯಪಟ್ಟಣ ಭಾಗದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಫಾರೆಸ್ಟ್ ಗಾರ್ಡ್ ದಿಢೀರ್ ನಾಪತ್ತೆಯಾಗಿದ್ದಾರೆ. ಶರತ್ (33) ನಾಪತ್ತೆಯಾದ ಫಾರೆಸ್ಟ್​ ಗಾರ್ಡ್​.

ಕರ್ತವ್ಯಕ್ಕೆ ತೆರಳಿದ್ದ ಮಗ ಕಳೆದ ಮೂರು ದಿನದಿಂದ ಮನೆಗೆ ಬಾರದೇ ಇದ್ದಾಗ ಗಾಬರಿಗೊಂಡ ಪೋಷಕರು ಸಖರಾಯಪಟ್ಟಣ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ನಾಪತ್ತೆಯಾಗಿರುವ ಫಾರೆಸ್ಟ್ ಗಾರ್ಡ್ ಪತ್ತೆಗೆ ಪೊಲೀಸರು ಅರಣ್ಯದಲ್ಲಿ ಮೂರು ದಿನದಿಂದ ಹುಡುಕಾಟ ನಡೆಸುತ್ತಿದ್ದಾರೆ. ಸಖರಾಯಪಟ್ಟಣದ ಅರಣ್ಯ ಪ್ರದೇಶ ಸೇರಿದಂತೆ ಸುತ್ತಮುತ್ತಲ ಪ್ರದೇಶದಲ್ಲೂ ಹುಡುಕಾಟ ನಡೆಸಲಾಗುತ್ತಿದೆ. ನೀಲಗಿರಿ ಪ್ಲಾಂಟೇಶನ್​ನಲ್ಲಿ ಶರತ್​ ಅವರ ಬೈಕ್ ಮತ್ತು ಜರ್ಕಿನ್ ಪತ್ತೆಯಾಗಿದೆ. ಶರತ್ ಮೂಲತಃ ಮಡಿಕೇರಿ ಮೂಲದವರಾಗಿದ್ದಾರೆ.ಫಾರೆಸ್ಟ್​ ಗಾರ್ಡ್ ನಾಪತ್ತೆ ಕುರಿತು ಸಖರಾಯಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಶರತ್ ಪತ್ತೆಗೆ ಹಗಲು ರಾತ್ರಿ ಹುಡುಕಾಟ ನಡೆಸಲಾಗುತ್ತಿದ್ದು, ಶೀಘ್ರವೇ ಪತ್ತೆ ಮಾಡುತ್ತೇವೆ ಎಂದು ಸಖರಾಯಪಟ್ಟಣ ಪೊಲೀಸ್ ಠಾಣೆಯ ಠಾಣಾಧಿಕಾರಿ ಮಾಹಿತಿ ನೀಡಿದ್ದಾರೆ.


Spread the love

About Laxminews 24x7

Check Also

ರೈತನ ಮಗಳ ಸಾಧನೆ, ಪಿಯು ಸೈನ್ಸ್ ಶೇ. 97.66 ಅಂಕ: ಪುತ್ರಿ ಸಾಧನೆಗೆ ತಂದೆ-ತಾಯಿ ಹರ್ಷ

Spread the loveರೈತನ ಮಗಳ ಸಾಧನೆ, ಪಿಯು ಸೈನ್ಸ್ ಶೇ. 97.66 ಅಂಕ: ಪುತ್ರಿ ಸಾಧನೆಗೆ ತಂದೆ-ತಾಯಿ ಹರ್ಷ ಬೆಳಗಾವಿ: …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ