Breaking News

ಬಿಜೆಪಿ ಮುಖಂಡನ ಪುತ್ರನ ವಿರುದ್ಧ ಅತ್ಯಾಚಾರ ಕೇಸ್: ಮಗುವಿನ ಜನ್ಮ ನೀಡಿದ ಸಂತ್ರಸ್ತೆ

Spread the love

ಮಂಗಳೂರು, ): ಪುತ್ತೂರು ಬಿಜೆಪಿ ಮುಖಂಡನ ಪುತ್ರನ (Puttur BJP leader Son )ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಸಂತ್ರಸ್ತೆ ಯುವತಿ ಮಗುವಿಗೆ ಜನ್ಮ ನೀಡಿದ್ದಾಳೆ.

ಕೃಷ್ಣ ಜೆ ರಾವ್ ಎನ್ನುವಾತ ಮದುವೆಯಾಗುವುದಾಗಿ ಯುವತಿಗೆ ನಂಬಿಸಿ ಆಕೆಯನ್ನು ಲೈಂಗಿಕವಾಗಿ ಬಳಸಿಕೊಂಡಿದ್ದಾನೆ. ಬಳಿಕ ಯುವತಿ ಗರ್ಭಿಣಿಯಾಗಿರುವುದು ಗೊತ್ತಾಗುತ್ತಿದ್ದಂತೆಯೇ ಕೈಕೊಟ್ಟಿದ್ದಾನೆ.

ಈ ಸಂಬಂಧ ಯುವತಿ ಪೊಲೀಸ್ ಠಾಣೆ ಮೆಟ್ಟಿಲೇರುತ್ತಿದ್ದಂತೆಯೇ ಕೃಷ್ಣ ನಾಪತ್ತೆಯಾಗಿದ್ದು, ಇದೀಗ ಗರ್ಭಿಣಿ ಯುವತಿ ಪುತ್ತೂರಿನ ಖಾಸಗಿ ಆಸ್ಪತ್ರೆಯಲ್ಲಿ ಗಂಡು ಮಗುವಿಗೆ ಜನ್ಮ ನೀಡಿದ್ದಾಳೆ.

ಮಗು ಜನನವಾದ ಹಿನ್ನೆಲೆಯಲ್ಲಿ ತನಿಖೆ ಹೊಸ ದಾರಿ ಹಿಡಿದಿದ್ದು, ಮಗುವಿನ ಡಿಎನ್ ಎ ಪರೀಕ್ಷೆ ಮೂಲಕ ಪ್ರಕರಣ ಭೇದಿಸಲು ಪೊಲೀಸರು ಮುಂದಾಗಿದ್ದಾರೆ.ನಾಪತ್ತೆಯಾದ ಆರೋಪಿ ಕೃಷ್ಣನ ಪತ್ತೆಗೆ ಪೊಲೀಸರು ಶೋಧ ನಡೆಸುತ್ತಿರುವ ನಡುವೆ ಪ್ರಕರಣದ ರಹಸ್ಯ ಬಯಲಿಗೆಳೆಯಲು ಪೊಲೀಸರು, ಯುವತಿ ಜನ್ಮಕೊಟ್ಟ ಮಗುವಿನ ಡಿಎನ್​ ಎ ಪರೀಕ್ಷೆಯ ಮೊರೆ ಹೋಗಿದ್ದಾರೆ.

ಈ ಪರೀಕ್ಷೆಯಿಂದ ಯುವತಿ ಗರ್ಭಿಣಿಯಾಗಲು ಕಾರಣ ಯಾರು? ನಿಜವಾಗಿಯೂ ಶ್ರೀಕೃಷ್ಣನೇ ಯುವತಿಗೆ ಮದ್ವೆ ಆಸೆ ತೋರಿಸಿ ಲೈಂಗಿಕವಾಗಿ ಬಳಿಸಿಕೊಂಡಿದ್ನಾ ಎನ್ನುವುದು ಸ್ಪಷ್ಟವಾಗಿ ತಿಳಿಯಲಿದೆ. ಇದರಿಂದ ಪೊಲೀಸರು ಮಗುವಿನ ಡಿಎನ್​ ಎ ಪರೀಕ್ಷೆ ಮಾಡಿಸುವ ಮೂಲಕ ಪ್ರಕರಣಕ್ಕೆ ತೆರೆ ಎಳೆಯಲು ಪ್ಲ್ಯಾನ್ ಮಾಡಿದ್ದಾರೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ