ಬೆಳಗಾವಿ: ಐತಿಹಾಸಿಕ ರಾಜಹಂಸಗಡ ಕೋಟೆಯ ಗುಡ್ಡಕ್ಕೆ ಆಕಸ್ಮಿಕ ಬೆಂಕಿ ಕಾಣಿಸಿಕೊಂಡಿದ್ದು, ಆತಂಕ ಮನೆ ಮಾಡಿದೆ.


ಬೆಳಗಾವಿಯ ತಾಲೂಕಿನ ಯಳ್ಳೂರ ಗ್ರಾಮದ ಹೊರವಲಯದಲ್ಲಿ ರಾಜಹಂಸಗಡ ಕೋಟೆ ಗುಡ್ಡ ಇದೆ. ಕೋಟೆ ಗುಡ್ಡದ ಅಕ್ಕಪಕ್ಕದಲ್ಲಿರುವ ಒಣಹುಲ್ಲಿಗೆ ಆಕಸ್ಮಿಕ ಬೆಂಕಿ ಆವರಿಸಿಕೊಂಡಿದೆ. ಸುದ್ದಿ ತಿಳಿಯುತ್ತಿದ್ದಂತೆಯೇ ಬೆಂಕಿ ನಂದಿಸಿದ ಅಗ್ನಿ ಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿದ್ದಾರೆ. ಬೆಳಗಾವಿ ಜಿಲ್ಲೆಯ ಪ್ರವಾಸಿ ತಾಣವಾಗಿರುವ ಐತಿಹಾಸಿಕ ರಾಜಹಂಸಗಡ ಕೋಟೆಗೆ ತನ್ನದೇ ಆದ ಹೆಸರಿದೆ.
Laxmi News 24×7