Breaking News

ಮೂಡಲಗಿ , ಗೋಕಾಕ ತಾಲ್ಲೂಕು ಸೇರಿ ೫೧೯.೭೨ ಕೋಟಿ ರೂಪಾಯಿಗಳನ್ನು ಶೂನ್ಯ ಬಡ್ಡಿದರದಲ್ಲಿ ರೈತರಿಗೆ ವಿತರಿಸಿದ DCCBANK: ಬಾಲಚಂದ್ರ ಜಾರಕಿಹೊಳಿ

Spread the love

ಗೋಕಾಕ – ರೈತರ ಶ್ರೆಯೋಭಿವೃದ್ಧಿಗಾಗಿ
ರೈತಮಿತ್ರನಾಗಿ ಕೆಲಸ ಮಾಡುತ್ತಿರುವ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕು ಮೂಡಲಗಿ ಮತ್ತು ಗೋಕಾಕ ತಾಲ್ಲೂಕು ಸೇರಿ ೫೧೯.೭೨ ಕೋಟಿ ರೂಪಾಯಿಗಳನ್ನು ಶೂನ್ಯ ಬಡ್ಡಿದರದಲ್ಲಿ ರೈತರಿಗೆ ವಿತರಿಸಿದೆ ಎಂದು ಅರಭಾವಿ ಶಾಸಕ, ಬೆಮುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ತಿಳಿಸಿದರು.

ಸೋಮವಾರದಂದು ನಗರದ ಹೊರ ವಲಯದಲ್ಲಿರುವ ಗೋಕಾಕ ಸಪ್ಲಾಯರ್ಸ್ ಸಭಾ ಭವನದಲ್ಲಿ ಮೂಡಲಗಿ ಮತ್ತು ಗೋಕಾಕ ತಾಲ್ಲೂಕುಗಳ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ಅಧ್ಯಕ್ಷರು ಮತ್ತು ಅದರ ಆಡಳಿತ ಮಂಡಳಿಯ ಸದಸ್ಯರ ಸೌಹಾರ್ದಯುತ ಸಭೆಯನ್ನು ಉದ್ಘಾಟಿಸಿ ಮಾತನಾಡಿದ ಅವರು, ಮುಂದಿನ ದಿನಗಳಲ್ಲಿಯೂ ರೈತರಿಗೆ ಇನ್ನೂ ಹೆಚ್ಚಿನ ಪ್ರಮಾಣದಲ್ಲಿ ಸಾಲವನ್ನು ವಿತರಿಸುವ ಗುರಿಯನ್ನು ಇಟ್ಟುಕೊಳ್ಳಲಾಗಿದೆ ಎಂದವರು ಹೇಳಿದರು.

ಮೂಡಲಗಿ ಮತ್ತು ಗೋಕಾಕ ತಾಲ್ಲೂಕಿನ ಅಭ್ಯರ್ಥಿಯನ್ನು ಸೆಪ್ಟೆಂಬರ್ ತಿಂಗಳಲ್ಲಿ ಪ್ರಕಟಿಸಲಾಗುವುದು. ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಉತ್ತಮ ಅಭ್ಯರ್ಥಿಯನ್ನು ಕಣಕ್ಕಿಳಿಸಲಾಗುವುದು. ಈಗಾಗಲೇ ಬೆಳಗಾವಿ, ಖಾನಾಪೂರ, ರಾಮದುರ್ಗ ತಾಲ್ಲೂಕುಗಳಲ್ಲಿ ಬ್ಯಾಂಕಿನ ಚುನಾವಣೆ ಸಂಬಂಧ ಸಭೆಗಳನ್ನು ನಡೆಸಲಾಗಿದೆ.

ಮುಂದಿನ ದಿನಗಳಲ್ಲಿ ಬಾಕಿ ಉಳಿದಿರುವ ತಾಲ್ಲೂಕುಗಳಲ್ಲಿ ಸಹಕಾರಿಗಳ ಸಭೆಯನ್ನು ನಡೆಸಲಾಗುವುದು.
ಚುನಾವಣೆಗೆ ಬೇಕಾದ ಪೂರ್ಣ ತಯಾರಿಯನ್ನು ಈಗಾಗಲೇ ಸಿದ್ಧಪಡಿಸಲಾಗಿದೆ. ೧೬ ಸ್ಥಾನಗಳ ಪೈಕಿ ೧೩ ಸ್ಥಾನಗಳಲ್ಲಿ ತಮ್ಮ ಮೈತ್ರಿಕೂಟದ ಅಭ್ಯರ್ಥಿಗಳು ಜಯ ಗಳಿಸಲಿದ್ದು, ಮತ್ತೊಂದು ಅವಧಿಗೆ ಅಧಿಕಾರದ ಚುಕ್ಕಾಣಿ ಹಿಡಿಯಲಿದ್ದಾರೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.

ಮುಂಬರುವ ಅಕ್ಟೋಬರ್ ೧೯ ರಂದು ನಡೆಯುವ ಜಿಲ್ಲಾ ಮಧ್ಯವರ್ತಿ ಸಹಕಾರಿ ಬ್ಯಾಂಕ್ ಚುನಾವಣೆಯಲ್ಲಿ ಈಗಿರುವ ಆಡಳಿತ ಮಂಡಳಿಯನ್ನು ಮತ್ತೊಮ್ಮೆ ಅಧಿಕಾರಕ್ಕೆ ತಂದರೆ ಇನ್ನೂ ಹೆಚ್ಚಿನ ಪ್ರಮಾಣದಲ್ಲಿ ರೈತರಿಗೆ ಸಾಲವನ್ನು ನೀಡುವುದರ ಜತೆಗೆ ರೈತ ಸ್ನೇಹಿಯಾಗಿ ಕೆಲಸ ಮಾಡುತ್ತೇವೆ. ಬ್ಯಾಂಕ್ ಅಧ್ಯಕ್ಷ ಅಪ್ಪಾಸಾಹೇಬ ಕುಲಗುಡೆ ಅವರ ನೇತೃತ್ವದ ಆಡಳಿತ ಮಂಡಳಿಯು ರೈತರ ಸೇವೆಗೆ ಬದ್ಧವಿದೆ. ಉತ್ತಮವಾಗಿ ಕಾರ್ಯ ನಿರ್ವಹಿಸುತ್ತಿದೆ. ಜತೆಗೆ ಇವರ ಅವಧಿಯಲ್ಲಿ ಸುಮಾರು ೨೮೦ ಕೋಟಿ ರೂಪಾಯಿ ಡಿಪಾಸಿಟ್ ಆಗಿದೆ ಎಂದು ತಿಳಿಸಿದರು.

ಬ್ಯಾಂಕ್ ನಿಂದ ರೈತರಿಗೆ ಅನೇಕ ಸಾಲ ಸೌಲಭ್ಯಗಳನ್ನು ವಿತರಿಸಲು ಕ್ರಮ ಕೈಕೊಳ್ಳಲಾಗುವುದು. ಮತ್ತೊಂದು ಬಾರಿ ಅಧಿಕಾರಕ್ಕೆ ಬರಲು ರೈತರ ಸಹಕಾರ, ಆಶೀರ್ವಾದ ಬೇಕೇ ಬೇಕು. ಈ ದಿಸೆಯಲ್ಲಿ ಸಹಕಾರಿ ತತ್ವಗಳನ್ನು ಪಾಲನೆ ಮಾಡಿಕೊಂಡು ಬರುತ್ತಿರುವ ನಮ್ಮ ಗುಂಪಿಗೆ ನಿಮ್ಮೆಲ್ಲರ ಆಶೀರ್ವಾದವು ಅವಶ್ಯವಾಗಿದೆ ಎಂದು ಹೇಳಿದರು.

ಪ್ರಸ್ತುತ ೬ ಸಾವಿರ ಕೋಟಿ ರೂಪಾಯಿ ಇರುವ ಠೇವಣಿಯನ್ನು ಮುಂದಿನ ದಿನಗಳಲ್ಲಿ ೮ ಸಾವಿರ ಕೋಟಿ ರೂಪಾಯಿ ತನಕ ವಿಸ್ತರಿಸುವ ಗುರಿಯನ್ನು ಇಟ್ಟುಕೊಳ್ಳಲಾಗಿದೆ. ರೈತರಿಗೆ ಈಗಾಗಲೇ ೩೪೦೦ ಕೋಟಿ ವರ್ಷಗಳ ಶೂನ್ಯ ಬಡ್ಡಿ ದರದಲ್ಲಿ ಸಾಲವನ್ನು ವಿತರಿಸಲಾಗಿದೆ. ಇನ್ನೂ ಹೆಚ್ಚಿನ ಪ್ರಮಾಣದಲ್ಲಿ ಸಹಕಾರಿ ಸಂಘಗಳಿಗೆ ಪತ್ತನ್ನು ಹೆಚ್ಚಿಸುವ ಮೂಲಕ ರೈತರ ಆರ್ಥಿಕ ಅಭಿವೃದ್ಧಿ ಜತೆಗೆ ಸಂಘಗಳ ಬಲವರ್ಧನೆಗಾಗಿ ಶ್ರಮಿಸುವ ಇರಾದೆ ತಮ್ಮದಾಗಿದೆ ಎಂದು ಅವರು ತಿಳಿಸಿದರು.

ಮಾಜಿ ಶಾಸಕ ಮತ್ತು ಬ್ಯಾಂಕ್ ನಿರ್ದೇಶಕ ಮಹಾಂತೇಶ ದೊಡ್ಡಗೌಡ್ರ ಮಾತನಾಡಿ, ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ದೂರದೃಷ್ಟಿ ನಾಯಕತ್ವದಲ್ಲಿ ನಮ್ಮ ಬೆಳಗಾವಿ ಜಿಲ್ಲೆಯಲ್ಲಿ ಸಹಕಾರಿ ರಂಗವು ಪ್ರಗತಿ ಸಾಧಿಸುತ್ತಿದೆ. ಎಲ್ಲರೂ ತನಗಾಗಿ, ತನಗಾಗಿ ಎಲ್ಲರೂ ಎಂಬ ಸಹಕಾರಿ ತತ್ವ ದಡಿ ಬಾಲಚಂದ್ರ ಜಾರಕಿಹೊಳಿ ಅವರು ಎಲ್ಲರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಅಭಿವೃದ್ಧಿಯನ್ನು ಮಾಡುತ್ತಿದ್ದಾರೆ. ನಿಸ್ವಾರ್ಥ ಸೇವೆಯನ್ನು ಸಲ್ಲಿಸುತ್ತಿದ್ದಾರೆ. ಕೇವಲ ಬೆಂಗಳೂರು, ಹಾಸನಗಳಿಗೆ ಅಷ್ಟೇ ಸೀಮಿತವಾಗಿದ್ದ ಕೆಎಂಎಫ್ ಸಂಸ್ಥೆಯನ್ನು ರಾಷ್ಟ್ರ ಮಟ್ಟದಲ್ಲಿ ಗುರುತಿಸುವ ಮಹಾನ್ ಕಾರ್ಯವನ್ನು ಮಾಡಿರುವುದು ಅವರ ಸಾಧನೆಗಳನ್ನು ಎತ್ತಿ ತೋರಿಸುತ್ತದೆ ಎಂದು ಗುಣಗಾನ ಮಾಡಿದರು.

ವೇದಿಕೆಯಲ್ಲಿ ಬಿಡಿಸಿಸಿ ಬ್ಯಾಂಕ್ ಅಧ್ಯಕ್ಷ ಅಪ್ಪಾಸಾಹೇಬ ಕುಲಗುಡೆ, ಮಾಜಿ ಶಾಸಕ ಅರವಿಂದ ಪಾಟೀಲ, ಉಪಾಧ್ಯಕ್ಷ ಸುಭಾಸ ಢವಳೇಶ್ವರ, ನಿರ್ದೇಶಕರಾದ ರಾಜೇಂದ್ರ ಅಂಕಲಗಿ, ಎಸ್.ಎಸ್.ಢವಣ, ನೀಲಕಂಠ ಕಪ್ಪಲಗುದ್ದಿ, ಬೆಳಗಾವಿ ಟಿಎಪಿಸಿಎಂಎಸ್ ಅಧ್ಯಕ್ಷ ಶಂಕರಗೌಡ ಪಾಟೀಲ, ಶಂಕರಗೌಡ ಪಾಟೀಲ ಮಲ್ಲಾಪೂರ ಅವರು ಉಪಸ್ಥಿತರಿದ್ದರು.


Spread the love

About Laxminews 24x7

Check Also

ನದಿ ತೀರದ ಜನರು ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಸಚಿವ ಸತೀಶ್‌ ಜಾರಕಿಹೊಳಿ ಮನವಿ

Spread the love ಬೆಳಗಾವಿ: ಭಾರತ ಹವಾಮಾನ ಇಲಾಖೆ ಆಗಸ್ಟ್ 19 ಮತ್ತು 20 ರಂದು ಬೆಳಗಾವಿ ಜಿಲ್ಲೆಗೆ ರೆಡ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ