ಹುಬ್ಬಳ್ಳಿ: ರಾಜ್ಯ ಬಿಜೆಪಿ ಅಧ್ಯಕ್ಷರ ಆಯ್ಕೆ ಬಗ್ಗೆ ಚರ್ಚೆಯಾಗಿದೆ. ಶೀಘ್ರದಲ್ಲೇ ಆಯ್ಕೆ ನಡೆಯಲಿದೆ. ನಾನು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಎನ್ನುವ ಪ್ರಶ್ನೆ ಅಪ್ರಸ್ತುತ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಹೇಳಿದರು.
ನಗರದಲ್ಲಿಂದು ನೂತನ ಮೇಯರ್, ಉಪಮೇಯರ್ ಚುನಾವಣೆಯಲ್ಲಿ ಭಾಗಿಯಾದ ಬಳಿಕ ಮಾತನಾಡಿದ ಅವರು, ನೂತನ ಮೇಯರ್, ಉಪ ಮೇಯರ್ಗೆ ಅಭಿನಂದಿಸಿ, ಹುಬ್ಬಳ್ಳಿ-ಧಾರವಾಡ ಅವಳಿ ನಗರದ ಅಭಿವೃದ್ಧಿಯಲ್ಲಿ ತೊಡಗಿಸಿಕೊಳ್ಳುವಂತೆ ಸಲಹೆ ನೀಡಿದರು.
ಬಳಿಕ ರಾಜ್ಯ ಸರ್ಕಾರದ ವಿರುದ್ದ ವಾಗ್ದಾಳಿ ನಡೆಸಿದ ಅವರು, ರಾಜ್ಯ ಸರ್ಕಾರ ಪಾಲಿಕೆಗೆ ನೀಡಬೇಕಾದ ಅನುದಾನವನ್ನು ತಕ್ಷಣವೇ ಬಿಡುಗಡೆ ಮಾಡಬೇಕು. ಕಾಂಗ್ರೆಸ್ ಸರ್ಕಾರ ಮಲತಾಯಿ ಧೋರಣೆ ಕೈಬಿಟ್ಟು ಅನುದಾನ ನೀಡಬೇಕು. ಇಲ್ಲದಿದ್ದರೆ ಈ ಭಾಗದ ಜನರು ನಿಮ್ಮನ್ನು ಮನೆಗೆ ಕಳುಹಿಸುತ್ತಾರೆ ಎಂದು ಎಚ್ಚರಿಸಿದರು.