Breaking News

ಶೀಘ್ರದಲ್ಲೇ ಬಿಜೆಪಿ ರಾಜ್ಯಾಧ್ಯಕ್ಷರ ಆಯ್ಕೆ: ಪ್ರಲ್ಹಾದ್ ‌ಜೋಶಿ‌‌

Spread the love

ಹುಬ್ಬಳ್ಳಿ: ರಾಜ್ಯ ಬಿಜೆಪಿ ಅಧ್ಯಕ್ಷರ ಆಯ್ಕೆ ಬಗ್ಗೆ ಚರ್ಚೆಯಾಗಿದೆ. ಶೀಘ್ರದಲ್ಲೇ ಆಯ್ಕೆ ನಡೆಯಲಿದೆ. ನಾನು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಎನ್ನುವ ಪ್ರಶ್ನೆ ‌ಅಪ್ರಸ್ತುತ ಎಂದು ಕೇಂದ್ರ ಸಚಿವ ಪ್ರಲ್ಹಾದ್ ‌ಜೋಶಿ‌‌ ಹೇಳಿದರು.

ನಗರದಲ್ಲಿಂದು ನೂತನ ‌ಮೇಯರ್, ಉಪಮೇಯರ್ ಚುನಾವಣೆಯಲ್ಲಿ ಭಾಗಿಯಾದ ಬಳಿಕ ಮಾತನಾಡಿದ ಅವರು, ನೂತನ ಮೇಯರ್, ಉಪ ಮೇಯರ್​​ಗೆ ಅಭಿನಂದಿಸಿ, ಹುಬ್ಬಳ್ಳಿ-ಧಾರವಾಡ ಅವಳಿ‌ ನಗರದ ಅಭಿವೃದ್ಧಿಯಲ್ಲಿ ತೊಡಗಿಸಿಕೊಳ್ಳುವಂತೆ ಸಲಹೆ ನೀಡಿದರು.

ಬಳಿಕ ರಾಜ್ಯ ಸರ್ಕಾರದ ವಿರುದ್ದ ವಾಗ್ದಾಳಿ ನಡೆಸಿದ ಅವರು, ರಾಜ್ಯ ಸರ್ಕಾರ ಪಾಲಿಕೆಗೆ ನೀಡಬೇಕಾದ ಅನುದಾನವನ್ನು ತಕ್ಷಣವೇ ಬಿಡುಗಡೆ ಮಾಡಬೇಕು. ಕಾಂಗ್ರೆಸ್ ಸರ್ಕಾರ ಮಲತಾಯಿ ಧೋರಣೆ ಕೈಬಿಟ್ಟು ಅನುದಾನ ನೀಡಬೇಕು. ಇಲ್ಲದಿದ್ದರೆ ಈ‌ ಭಾಗದ ಜನರು ನಿಮ್ಮನ್ನು ಮನೆಗೆ ಕಳುಹಿಸುತ್ತಾರೆ ಎಂದು ಎಚ್ಚರಿಸಿದರು.


Spread the love

About Laxminews 24x7

Check Also

ಹಾಸ್ಟೆಲ್ ನಾಲ್ಕನೇ ಮಹಡಿಯಿಂದ ಬಿದ್ದು ವಿದ್ಯಾರ್ಥಿಯೊಬ್ಬ ಮೃತಪಟ್ಟಿರುವ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ.

Spread the loveಹುಬ್ಬಳ್ಳಿ: ಕಾಲೇಜಿನ ವಿದ್ಯಾರ್ಥಿಯೊಬ್ಬ ಹಾಸ್ಟೆಲ್ ನಾಲ್ಕನೇ ಮಹಡಿಯಿಂದ ಬಿದ್ದು ಅನುಮಾನಸ್ಫದವಾದ ರೀತಿಯಲ್ಲಿ ಸಾವನ್ನಪ್ಪಿದ ಘಟನೆ ಭೈರಿದೇರಕೊಪ್ಪದಲ್ಲಿರುವ ಸನಾ ಕಾಲೇಜಿನ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ