Breaking News

ವೀರಶೈವ ಸಮಾಜ ಆಫ್ ನಾರ್ತ್ ಅಮೆರಿಕದ 47ನೇ ವಾರ್ಷಿಕ ಸಮ್ಮೇಳನದಲ್ಲಿ ಭಾಗವಹಿಸಲಿದ್ದಾರೆ ಆಲಮಟ್ಟಿ ಸ್ವಾಮಿಗಳು

Spread the love

ವೀರಶೈವ ಸಮಾಜ ಆಫ್ ನಾರ್ತ್ ಅಮೆರಿಕದ 47ನೇ ವಾರ್ಷಿಕ ಸಮ್ಮೇಳನದಲ್ಲಿ ಭಾಗವಹಿಸಲಿದ್ದಾರೆ ಆಲಮಟ್ಟಿ ಸ್ವಾಮಿಗಳು
ಅಮೆರಿಕಾದ ಮಿಚಿಗನ್ ರಾಜ್ಯದ ಡೆಟ್ರಾಯಿಟ್ ನಗರದಲ್ಲಿ ಜುಲೈ 4 ರಿಂದ 6 ರವರೆಗೆ ನಡೆಯಲಿರುವ ವೀರಶೈವ ಸಮಾಜ ಆಫ್ ನಾರ್ತ್ ಅಮೆರಿಕದ 47ನೇ ವಾರ್ಷಿಕ ಸಮ್ಮೇಳನದಲ್ಲಿ ಭಾಗವಹಿಸಲು ವಿಜಯಪುರ ಜಿಲ್ಲೆಯ ನಿಡಗುಂದಿ ತಾಲ್ಲೂಕಿನ ಆಲಮಟ್ಟಿ ಗ್ರಾಮದ ಪುರವರ ಹಿರೇಮಠದ ರುದ್ರಮುನಿ ಸ್ವಾಮೀಜಿಗಳು ಮಂಗಳವಾರ ಬೆಂಗಳೂರಿನಿಂದ ಅಮೆರಿಕದತ್ತ ದೈವಿಕ ಯಾತ್ರೆ ಕೈಗೊಂಡಿದ್ದಾರೆ.
ಈ ಬೃಹತ್ ಸಮ್ಮೇಳನವು ವಿಶ್ವದ ವಿವಿಧ ಭಾಗಗಳಲ್ಲಿ ವಾಸಿಸುತ್ತಿರುವ ಅನಿವಾಸಿ ಭಾರತೀಯರು, ವಿಶೇಷವಾಗಿ ಲಿಂಗಾಯತ ವೀರಶೈವ ಭಕ್ತರು ಸಂಯುಕ್ತವಾಗಿ ಆಯೋಜಿಸಿರುವ ಪ್ರಭಾವಶಾಲಿ ಧಾರ್ಮಿಕ ಹಾಗೂ ಸಾಂಸ್ಕೃತಿಕ ಉತ್ಸವವಾಗಿದೆ. ರುದ್ರಮುನಿ ಸ್ವಾಮೀಜಿ ಅವರು ಈ ವೇದಿಕೆಯಲ್ಲಿ ವೀರಶೈವ-ಲಿಂಗಾಯತ ಧರ್ಮದ ಆಧ್ಯಾತ್ಮಿಕ ಮೌಲ್ಯಗಳು, ಸಾಮಾಜಿಕ ಜವಾಬ್ದಾರಿಗಳು ಮತ್ತು ನೈತಿಕ ಚಿಂತನೆಗಳ ಕುರಿತು ಪ್ರವಚನ ನೀಡಲಿದ್ದಾರೆ.

Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ