ಕಾಗವಾಡ ತಾ.ಶೇಡಬಾಳದ ಬಿಎಸ್ಎಫ್ ಯೋಧ ಅನಾರೋಗ್ಯದಿಂದ ನಿಧನ
ಬಿಎಸ್ಎಫ್ ಯೋಧ ದಗಡು ಪೂಜಾರಿ ರಜೆಯ ಮೇಲೆ ಗ್ರಾಮಕ್ಕೆ ಮರಳಿದ್ದಾಗ ಆರೋಗ್ಯ ಸಮಸ್ಯೆಯಿಂದ ಬೆಳಗಾವಿ ಆಸ್ಪತ್ರೆಗೆ ದಾಖಲಾಗಿದ್ದರು.ಚಿಕಿತ್ಸೆ ಫಲಿಸದೆ ನಿಧನರಾಗಿದ್ದಾರೆ.
ಮೃತ ಯೋಧರು ತಾಯಿ, ಪತ್ನಿ ಹಾಗೂ ಇಬ್ಬರು ಪುತ್ರರನ್ನು ಅಗಲಿದ್ದಾರೆ. ಯೋಧನು ಅಸ್ಸಾಂ ರಾಜ್ಯದ ಗುವಾಹಟಿಯ170 ಬಟಾಲಿಯನ್ ನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು.
ಯೋಧನ ಸ್ವಗ್ರಾಮದ ತೋಟದಲ್ಲಿ ಸರ್ಕಾರಿ ಗೌರವದೊಂದಿಗೆ ಅಂತ್ಯಕ್ರಿಯೆ ನೆರವೇರಿಸಲಾಯಿತು. ಅಂತ್ಯಕ್ರಿಯೆಯಲ್ಲಿ ಸರ್ಕಾರಿ ಅಧಿಕಾರಿಗಳು ಗ್ರಾಮದ ಮುಖಂಡರು ಭಾಗಿಯಾಗಿದ್ದರು
Laxmi News 24×7