Breaking News

ಡಿ.22 ಹಾಗೂ ಡಿ.27ರಂದು ನಡೆಯುವ ಗ್ರಾ. ಪಂ. ಚುನಾವಣೆ ಮತದಾನ ಮಾಡಲು ಸಾರ್ವತ್ರಿಕ ರಜೆ

Spread the love

ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಮತದಾನ ಮಾಡಲು ಸಾರ್ವತ್ರಿಕ ರಜೆ ನೀಡಲಾಗಿದೆ. ಗ್ರಾಪಂಗಳಿಗೆ ಡಿ.22 ಹಾಗೂ ಡಿ.27ರಂದು ನಡೆಯುವ ಸಾರ್ವತ್ರಿಕ ಚುನಾವಣೆ ಸಂಬಂಧ ನಡೆಯುವ ಗ್ರಾಪಂ ಮತಕ್ಷೇತ್ರಗಳಲ್ಲಿನ ಸರ್ಕಾರಿ ಹಾಗೂ ಖಾಸಗಿ ಶಾಲಾ ಕಾಲೇಜುಗಳು, ಅನುದಾನಿತ ಹಾಗೂ ಅನುದಾನ ರಹಿತ ವಿದ್ಯಾಸಂಸ್ಥೆಗಳು, ಎಲ್ಲಾ ಶೈಕ್ಷಣಿಕ ಸಂಸ್ಥೆಗಳು, ರಾಜ್ಯ ಹಾಗೂ ಕೇಂದ್ರ ಸರ್ಕಾರದ ಕಚೇರಿಗಳು, ರಾಷ್ಟ್ರೀಕೃತ ಹಾಗೂ ಇತರೆ ಬ್ಯಾಂಕುಗಳು,

ಕೇಂದ್ರ ಹಾಗೂ ರಾಜ್ಯ ಸರ್ಕಾರದ ಕಾರ್ಖಾನೆಗಳು, ಉಳಿದ ಕೈಗಾರಿಕೆ ಸಂಸ್ಥೆಗಳು ಹಾಗೂ ಸಹಕಾರಿ ರಂಗದ ಸಂಘ-ಸಂಸ್ಥೆಗಳಲ್ಲಿ ಎಲ್ಲಾ ವ್ಯಾವಹಾರಿಕ ಸಂಸ್ಥೆಗಳಲ್ಲಿ, ಔದ್ಯಮಿಕ ಸಂಸ್ಥೆಗಳಲ್ಲಿ ಖಾಯಂ ಆಗಿ ಅಥವಾ ದಿನಗೂಲಿ ಮೇಲೆ ಕೆಲಸ ನಿರ್ವಹಿಸುತ್ತಿರುವ ಅರ್ಹ ಮತದಾರ ನೌಕರರಿಗೆ ಸೀಮಿತವಾದಂತೆ ಡಿ.22ರಂದು ವೇತನ ಸಹಿತ ರಜೆ ಘೋಷಿಸಲಾಗಿದೆ.


Spread the love

About Laxminews 24x7

Check Also

ವೀರಭದ್ರ ನಗರದ ದಶಕಗಳ ಸಮಸ್ಯೆಗೆ ಮುಕ್ತಿ: ಹೊಸ ಚರಂಡಿ ಅಭಿವೃದ್ಧಿ ಕಾಮಗಾರಿಗೆ ಶಾಸಕ ಆಸೀಫ್ ಸೇಠ್ ಚಾಲನೆ!

Spread the loveಬೆಳಗಾವಿಯ ವೀರಭದ್ರ ನಗರದ 0 ಕ್ರಾಸ್ ನಿವಾಸಿಗಳ ಬಹುದಿನಗಳ ಬೇಡಿಕೆಗೆ ಕೊನೆಗೂ ಸ್ಪಂದನೆ ಸಿಕ್ಕಿದೆ. ಮಳೆಗಾಲದಲ್ಲಿ ರಸ್ತೆಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ