Breaking News

ಕ್ಷಮೆ ಕೇಳಲಿ, ಇಲ್ಲವೇ ಸಾರ್ವಜನಿಕರ ಪ್ರತಿಭಟನೆ ಎದುರಿಸಬೇಕಾದೀತು: ಸಚಿವೆ ಹೆಬ್ಬಾಳ್ಕರ್

Spread the love

ಬೆಂಗಳೂರು: ಕರ್ನಾಟಕ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಕುರಿತು ಅವಹೇಳನಕಾರಿ ಹೇಳಿಕೆ ನೀಡಿರುವ ಬಿಜೆಪಿಯ ವಿಧಾನ ಪರಿಷತ್ ಸದಸ್ಯ ರವಿ ಕುಮಾರ್ ವಿರುದ್ಧ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಕಿಡಿಕಾರಿದ್ದಾರೆ.

ಈ ಕುರಿತು ಹೇಳಿಕೆ ನೀಡಿರುವ ಸಚಿವರು, ಕರ್ನಾಟಕದ ಬಿಜೆಪಿ ನಾಯಕರಿಂದ ಮಹಿಳೆಯರ ನಿಂದನೆ ನಿರಂತರವಾಗಿ ನಡೆಯುತ್ತಿದೆ. ಓರ್ವ ಹಿರಿಯ ಮಹಿಳಾ ಐಎಎಸ್ ಅಧಿಕಾರಿ ಬಗ್ಗೆ ಕೆಟ್ಟದಾಗಿ ಮಾತನಾಡಿರುವ ರೀತಿ ಬಿಜೆಪಿ ಎಂಎಲ್​​ಸಿ ಅವರ ಮನಃಸ್ಥಿತಿ ಎಂಥದ್ದು ಎಂದು ತೋರಿಸುತ್ತದೆ. ರವಿಕುಮಾರ್ ಅವರು ಸಮಸ್ತ ಮಹಿಳಾ ಕುಲಕ್ಕೆ ಮಾಡಿರುವ ಅವಮಾನ ಇದಾಗಿದೆ. ರವಿಕುಮಾರ್ ಅವರ ಹೇಳಿಕೆಯನ್ನು ಕೇಂದ್ರ ಬಿಜೆಪಿ ನಾಯಕರು ಸಮರ್ಥಿಸಿಕೊಳ್ಳುವರೇ? ಎಂದು ಸಚಿವರು ಪ್ರಶ್ನಿಸಿದ್ದಾರೆ.

ಕಳೆದ ಬೆಳಗಾವಿ ಅಧಿವೇಶನದ ವೇಳೆಯಲ್ಲಿ ಸಿ.ಟಿ.ರವಿ ಅವರು ನನ್ನ ಬಗ್ಗೆ ಕೆಟ್ಟದಾಗಿ ಮಾತನಾಡಿದಾಗ ಆ ಪಕ್ಷದ ನಾಯಕರು ಒಂದೂ ಮಾತನಾಡಲಿಲ್ಲ. ಇಂಥ ನಾಯಕರ ಹೇಳಿಕೆಗಳಿಗೆ ಕೇಂದ್ರದ ನಾಯಕರು ಪರೋಕ್ಷ ಬೆಂಬಲ ನೀಡಿದಂತಿದೆ. ಇದು ಮಹಿಳೆಯರಿಗೆ ಬಿಜೆಪಿ ನಾಯಕರು ಕೊಡುವ ಗೌರವ ಎಂಥದ್ದು ಎಂಬುದನ್ನು ತೋರಿಸುತ್ತದೆ. ಜವಾಬ್ದಾರಿಯುತ ಸ್ಥಾನದಲ್ಲಿದ್ದುಕೊಂಡು ಇಂಥ ಅವಹೇಳನಕಾರಿ ಪದಗಳನ್ನು ಬಳಸುವ ಬಿಜೆಪಿ ನಾಯಕರಿಗೆ ಬುದ್ಧಿಭ್ರಮಣೆಯಾಗಿದೆ ಅನಿಸುತ್ತದೆ. ಇನ್ನು ಮುಂದಾದರೂ ಇಂಥ ಹೇಳಿಕೆಗಳನ್ನು ನೀಡದೆ, ಜವಾಬ್ದಾರಿಯಿಂದ ವರ್ತಿಸಲಿ ಎಂದು ಹೇಳಿದ್ದಾರೆ.

ಸಾರ್ವಜನಿಕವಾಗಿ ಮಹಿಳಾ ಅಧಿಕಾರಿ ಬಗ್ಗೆ ಕೆಟ್ಟದಾಗಿ ಮಾತನಾಡಿರುವ ರವಿ ಕುಮಾರ್ ಅವರು ಕೂಡಲೇ ಕ್ಷಮೆಯಾಚಿಸಬೇಕು ಎಂದು ಸಚಿವರು ಆಗ್ರಹಿಸಿದ್ದಾರೆ. ತಮ್ಮ ತಪ್ಪನ್ನು ಅರಿತು ಕ್ಷಮೆ ಕೇಳಲಿ, ಇಲ್ಲವಾದರೆ ರವಿ ಕುಮಾರ್ ಅವರು ಸಾರ್ವಜನಿಕರ ಪ್ರತಿಭಟನೆ ಎದುರಿಸಬೇಕಾದೀತು ಎಂದು ಎಚ್ಚರಿಕೆ ನೀಡಿದ್ದಾರೆ.


Spread the love

About Laxminews 24x7

Check Also

ಸಂಧ್ಯಾ ಸುರಕ್ಷಾ ಯೋಜನೆಯಿಂದ ಹಿರಿಯ ನಾಗರಿಕರಿಗೆ ಅನುಕೂಲಗಳು ಏನೇನು?

Spread the love ಬೆಂಗಳೂರು: ವಯಸ್ಸಾದ ವೃದ್ಧರಿಗೆ ಮಕ್ಕಳೇ ಆಸರೆ. ಆದರೂ, ಹಿರಿಯ ಜೀವಗಳಿಗೆ ಹಲವು ಸಮಸ್ಯೆಗಳು ಎದುರಾಗುತ್ತವೆ. ಪ್ರತಿಯೊಂದಕ್ಕೂ ಮಕ್ಕಳನ್ನೇ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ