Breaking News

ಮೈಸೂರಿನಿಂದ ಉದಯಪುರಕ್ಕೆ ತೆರಳುತ್ತಿದ್ದ ರೈಲಿನ ಇಂಜಿನ್​ನಲ್ಲಿ ಬೆಂಕಿ ಕಾಣಿಸಿಕೊಂಡು ಆತಂಕ ಸೃಷ್ಟಿಯಾಗಿತ್ತು.

Spread the love

ರಾಮನಗರ: ಬೊಂಬೆನಗರಿ ಚನ್ನಪಟ್ಟಣದ ಬಳಿ ಚಲಿಸುತ್ತಿದ್ದ ರೈಲಿನ ಇಂಜಿನ್​​ನಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡ ಘಟನೆ ಇಂದು (ಗುರುವಾರ) ನಡೆದಿದೆ. ತಕ್ಷಣವೇ ರೈಲು ನಿಲ್ಲಿಸಿದ ಪೈಲಟ್​ ಭಾರೀ ಅನಾಹುತವನ್ನು ತಪ್ಪಿಸಿದ್ದಾರೆ.

ಬೆಂಗಳೂರು ದಕ್ಷಿಣ ಜಿಲ್ಲೆಯ (ಹಿಂದಿನ ರಾಮನಗರ) ಚನ್ನಪಟ್ಟಣ ತಾಲೂಕಿನ ವಂದಾರಗುಪ್ಪೆ ಬಳಿ ಮೈಸೂರಿನಿಂದ ರಾಜಸ್ಥಾನದ ಉದಯಪುರಕ್ಕೆ ರೈಲು ತೆರಳುತ್ತಿತ್ತು. ಈ ವೇಳೆ ರೈಲಿನ ಇಂಜಿನ್​​ನಲ್ಲಿ ಹಠಾತ್​ ಬೆಂಕಿ ಕಾಣಿಸಿದೆ. ಮುಂದಿನ ಭಾಗದಲ್ಲಿ ದಟ್ಟ ಹೊಗೆ ಆವರಿಸಿಕೊಂಡಿದೆ. ತಕ್ಷಣವೇ ಸಮಯಪ್ರಜ್ಞೆ ಮೆರೆದ ಚಾಲಕ ರೈಲನ್ನು ನಿಲ್ಲಿಸಿದ್ದಾನೆ.

ಈ ಬಗ್ಗೆ ರೈಲ್ವೆ ಅಧಿಕಾರಿಗಳು ಮತ್ತು ಅಗ್ನಿಶಾಮಕ ಸಿಬ್ಬಂದಿಗೆ ಮಾಹಿತಿ ರವಾನಿಸಿದ್ದಾನೆ. ಸ್ಥಳಕ್ಕೆ ದೌಡಾಯಿಸಿದ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ. ಈ ಮೂಲಕ ದೊಡ್ಡ ದುರಂತವೊಂದು ತಪ್ಪಿ ಹೋಗಿದೆ.

ಇನ್ನೂ, ರೈಲಿಗೆ ಆಕಸ್ಮಿಕ ಬೆಂಕಿ ಹೊತ್ತಿಕೊಂಡಿದ್ದು ಹೇಗೆ ಎಂಬ ಬಗ್ಗೆ ನಿಖರ ಕಾರಣ ತಿಳಿದು ಬಂದಿಲ್ಲ. ರೈಲಿನಲ್ಲಿ ನೂರಾರು ಪ್ರಯಾಣಿಕರು ಆಕಸ್ಮಿಕ ಘಟನೆಯಿಂದ ಆತಂಕಕ್ಕೀಡಾಗಿದ್ದರು. ಅದೃಷ್ಟವಶಾತ್ ಯಾವುದೇ ಅನಾಹುತ ಸಂಭವಿಸದೆ ಪಾರಾಗಿದ್ದರಿಂದ ನಿಟ್ಟುಸಿರು ಬಿಟ್ಟಿದ್ದಾರೆ.

ರೈಲ್ವೆ ಇಂಜಿನ್​​ಗೆ ಬೆಂಕಿ ಹೊತ್ತಿಕೊಂಡಿದ್ದು, ಹಳಿಗಳ ಪಕ್ಕದ ಕಟ್ಟಡದಲ್ಲಿನ ಸಿಸಿಟಿವಿಯಲ್ಲಿ ದೃಶ್ಯ ಸೆರೆಯಾಗಿದೆ. ಬೆಂಕಿಯಿಂದ ಎಂಜಿನ್​​ನ ಭಾಗ ಹಾನಿಗೀಡಾಗಿದೆ. ಸ್ಥಳಕ್ಕೆ ರೈಲ್ವೆ ಹಿರಿಯ ಅಧಿಕಾರಿಗಳು ಭೇಟಿ ನೀಡಿ, ಉನ್ನತ ಮಟ್ಟದ ತನಿಖೆ ಕೈಗೊಳ್ಳುವುದಾಗಿ ತಿಳಿಸಿದ್ದಾರೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ