Breaking News

ಮಹಿಳೆಯರನ್ನು ನಿಂದಿಸುವುದೇ ಬಿಜೆಪಿಗರ ಕೆಲಸ: ಸಚಿವೆ ಹೆಬ್ಬಾಳಕರ

Spread the love

ಮಹಿಳೆಯರನ್ನು ನಿಂದಿಸುವುದೇ ಬಿಜೆಪಿಗರ ಕೆಲಸ: ಸಚಿವೆ ಹೆಬ್ಬಾಳಕರ
ಎಂಎಲ್ಸಿ ರವಿಕುಮಾರ್ ವಿರುದ್ಧ ಲಕ್ಷ್ಮೀ ಹೆಬ್ಬಾಳಕರ್ ವಾಗ್ದಾಳಿ
ಇಂಥ ಹೇಳಿಕೆಗಳಿಗೆ ಕೇಂದ್ರದ ನಾಯಕರುಗಳು ಪರೋಕ್ಷ ಬೆಂಬಲ ನೀಡಿದಂತಿದೆ
ಅವಹೇಳನಕಾರಿ ಪದಗಳನ್ನು ಬಳಸುವ ಬಿಜೆಪಿ ನಾಯಕರಿಗೆ ಬುದ್ದಿ ಭ್ರಮಣೆಯಾಗಿದೆ
ರವಿಕುಮಾರ್ ತಮ್ಮ ತಪ್ಪನ್ನು ಅರಿವು ಮಾಡಿಕೊಂಡು ಕ್ಷಮೆಗೆ ಸಚಿವರ ಆಗ್ರಹ
ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಕುರಿತು ಅವಹೇಳನಕಾರಿ ಹೇಳಿಕೆ ನೀಡಿರುವ ಬಿಜೆಪಿಯ ವಿಧಾನ ಪರಿಷತ್ ಸದಸ್ಯ ರವಿ ಕುಮಾರ್ ವಿರುದ್ಧ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಕಿಡಿ ಕಾರಿದ್ದಾರೆ.
ಬೆಂಗಳೂರಿನಲ್ಲಿ ಈ ಕುರಿತು ಮಾಧ್ಯಮಗಳೊಂದಿವೆ ಮಾತನಾಡಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ ಕರ್ನಾಟಕದ ಬಿಜೆಪಿ ನಾಯಕರಿಂದ ಮಹಿಳೆಯರ ನಿಂದನೆ ನಿರಂತರವಾಗಿ ನಡೆಯುತ್ತಿದೆ. ಓರ್ವ ಹಿರಿಯ ಮಹಿಳಾ ಐಎಎಸ್ ಅಧಿಕಾರಿ ಬಗ್ಗೆ ಕೆಟ್ಟದಾಗಿ ಮಾತನಾಡಿರುವ ರೀತಿ ಬಿಜೆಪಿ ಎಂಎಲ್ಸಿ ಅವರ ಮನಸ್ಥಿತಿ ಎಂಥಹದ್ದು ಎಂದು ತೋರಿಸುತ್ತದೆ. ರವಿಕುಮಾರ್ ಅವರು ಸಮಸ್ತ ಮಹಿಳಾ ಕುಲಕ್ಕೆ ಮಾಡಿರುವ ಅವಮಾನ ಇದಾಗಿದೆ.
ರವಿಕುಮಾರ್ ಅವರ ಹೇಳಿಕೆಯನ್ನು ಕೇಂದ್ರ ಬಿಜೆಪಿ ನಾಯಕರು ಸಮರ್ಥಿಸಿಕೊಳ್ಳುವರೇ ಎಂದು ಸಚಿವರು ಪ್ರಶ್ನಿಸಿದ್ದಾರೆ.
ಕಳೆದ ಬೆಳಗಾವಿ ಅಧಿವೇಶನದ ವೇಳೆಯಲ್ಲಿ ಸಿಟಿ ರವಿ ಅವರು ನನ್ನ ಬಗ್ಗೆ ಕೆಟ್ಟಾಗಿ ಮಾತನಾಡಿದಾಗ ಆ ಪಕ್ಷದ ನಾಯಕರು ಒಂದೂ ಮಾತನಾಡಲಿಲ್ಲ. ಇಂಥ ನಾಯಕರ ಹೇಳಿಕೆಗಳಿಗೆ ಕೇಂದ್ರದ ನಾಯಕರುಗಳು ಪರೋಕ್ಷ ಬೆಂಬಲ ನೀಡಿದಂತಿದೆ. ಇದು ಮಹಿಳೆಯರಿಗೆ ಬಿಜೆಪಿ ನಾಯಕರು ಕೊಡುವ ಗೌರವ ಎಂತದ್ದು ಎಂಬುದನ್ನು ತೋರಿಸುತ್ತದೆ. ಜವಾಬ್ದಾರಿಯುತ ಸ್ಥಾನದಲ್ಲಿದ್ದುಕೊಂಡು ಇಂಥ ಅವಹೇಳನಕಾರಿ ಪದಗಳನ್ನು ಬಳಸುವ ಬಿಜೆಪಿ ನಾಯಕರಿಗೆ ಬುದ್ದಿ ಭ್ರಮಣೆಯಾಗಿದೆ ಅನಿಸುತ್ತದೆ. ಇನ್ನು ಮುಂದಾದರೂ ಇಂಥ ಹೇಳಿಕೆಗಳನ್ನು ನೀಡದೆ, ಜವಾಬ್ದಾರಿಯಿಂದ ವರ್ತಿಸಲಿ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.
ಸಾರ್ವಜನಿಕವಾಗಿ ಮಹಿಳಾ ಅಧಿಕಾರಿ ಬಗ್ಗೆ ಕೆಟ್ಟದಾಗಿ ಮಾತನಾಡಿರುವ ರವಿಕುಮಾರ್ ಅವರು ಕೂಡಲೇ ಕ್ಷಮೆಯಾಚಿಸಬೇಕು ಎಂದು ಸಚಿವರು ಆಗ್ರಹಿಸಿದ್ದಾರೆ. ತಮ್ಮ ತಪ್ಪನ್ನು ಅರಿವು ಮಾಡಿಕೊಂಡು ಕ್ಷಮೆ ಕೇಳಲಿ, ಇಲ್ಲವಾದರೆ ರವಿಕುಮಾರ್ ಅವರು ಸಾರ್ವಜನಿಕರ ಪ್ರತಿಭಟನೆ ಎದುರಿಸಬೇಕಾದೀತು ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಎಚ್ಚರ

Spread the love

About Laxminews 24x7

Check Also

ಬಂಡಾರದ ಜಾತ್ರೆ; ತಂದೆ ಚಿಕ್ಕಪ್ಪ, ಸ್ನೇಹಿತರೊಂದಿಗೆ ಯುವ ನಾಯಕ ಸಂತೋಷ್ ಜಾರಕಿಹೊಳಿ ಅವರು ಜಾತ್ರೆಯಲ್ಲಿ ಭಾಗಿ

Spread the loveಬಂಡಾರದ ಜಾತ್ರೆ; ತಂದೆ ಚಿಕ್ಕಪ್ಪ, ಸ್ನೇಹಿತರೊಂದಿಗೆ ಯುವ ನಾಯಕ ಸಂತೋಷ್ ಜಾರಕಿಹೊಳಿ ಅವರು ಜಾತ್ರೆಯಲ್ಲಿ ಭಾಗಿ ಜುಲೈ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ