Breaking News

ಜನರಲ್ಲಿ ವೈಚಾರಿಕತೆ, ವೈಜ್ಞಾನಿಕತೆ ಬೆಳೆಯದಿದ್ದರೆ, ಕೇವಲ ಮೌಢ್ಯ ನಿಷೇಧ ಕಾನೂನಿನ ಮೂಲಕ ನಿರೀಕ್ಷಿತ ಬದಲಾವಣೆ ಸಾಧ್ಯವಿಲ್ಲ ಎಂದ ಸಿಎಂ

Spread the love

ಬೆಂಗಳೂರು: ”ದ್ವಿಭಾಷಾ ಸೂತ್ರ ನನ್ನ ಅಭಿಪ್ರಾಯವಾಗಿದೆ. ಅದನ್ನು ಸರ್ಕಾರದ ಅಭಿಪ್ರಾಯ ಮಾಡುವ ದಿಕ್ಕಿನಲ್ಲಿ ಪ್ರಯತ್ನಿಸುತ್ತೇನೆ” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ಜನ‌ಪ್ರಕಾಶನ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಪ್ರೊ.ಬರಗೂರು ರಾಮಚಂದ್ರಪ್ಪ ಅವರ ಸಂಪಾದಕತ್ವದ “ಕುವೆಂಪು ವಿಚಾರ ಕ್ರಾಂತಿ” ಕೃತಿಯನ್ನು ಜನಾರ್ಪಣೆಗೊಳಿಸಿ ಅವರು ಮಾತನಾಡಿದರು.

”ಕುವೆಂಪು ಅವರ ಪ್ರಖರ ವೈಚಾರಿಕತೆ ಸಮಾಜದಲ್ಲಿ ಜಾತಿ ಅಸಮಾನತೆ ಇರುವವರೆಗೂ ಪ್ರಸ್ತುತವಾಗಿರುತ್ತದೆ. ವೈಚಾರಿಕತೆ, ವೈಜ್ಞಾನಿಕತೆಯ ಬಗ್ಗೆ ಕುವೆಂಪು ಅವರಿಗೆ ಸ್ಪಷ್ಟ ದೃಷ್ಟಿಕೋನ ಇತ್ತು. ಜಾತಿ ತಾರತಮ್ಯ ಇಲ್ಲದ ಸಮಾಜ ಕುವೆಂಪು ಅವರ ಆಶಯವಾಗಿತ್ತು. ಆದರೆ, ಇಂದು ಶಿಕ್ಷಣ ಹೆಚ್ಚಾದಷ್ಟೂ ಮೌಢ್ಯ, ಕಂದಾಚಾರ ಹೆಚ್ಚಾಗುತ್ತಿದೆ” ಎಂದು ಸಿಎಂ ಬೇಸರ ವ್ಯಕ್ತಪಡಿಸಿದರು.

ಸಂವಿಧಾನ ಪೀಠಿಕೆ ಅಭಿಯಾನ: ”ನಮ್ಮ ಸಂವಿಧಾನದಲ್ಲಿ ಕುವೆಂಪು, ಬಸವಣ್ಣ ಅವರ ಆಶಯಗಳೂ ಅಡಕವಾಗಿವೆ. ಆದರೆ ಸಂವಿಧಾನದ ಮೌಲ್ಯ ಮತ್ತು ಮಹತ್ವ ಅರಿಯುವ ಕೆಲಸ ಹೆಚ್ಚಾಗಬೇಕು. ಈ ಉದ್ದೇಶದಿಂದಲೇ ಸಂವಿಧಾನ ಓದು, ಸಂವಿಧಾನ ಪೀಠಿಕೆ ಅಭಿಯಾನವನ್ನು ನಾವು ನಡೆಸುತ್ತಿದ್ದೇವೆ. ರಾಜಕಾರಣಿಯಾಗಿ ನನಗೆ ಕೆಲವು ಮಿತಿಗಳು ಇರುತ್ತವೆ. ಸಮಾಜದ ನಂಬಿಕೆಗಳ ಜೊತೆಗೂ ನಾವು ಕೆಲವೊಮ್ಮೆ ನಡೆಯಬೇಕಾಗುತ್ತದೆ” ಎಂದರು.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ