Breaking News

ಶಿವಸೇನೆ ಮತ್ತು ಬಿಜೆಪಿ ನಡುವಿನ ತಿಕ್ಕಾಟಕ್ಕೆ ಕಾರಣವಾದ ರಾಮಮಂದಿರ

Spread the love

ಮುಂಬೈ,ಡಿ.21-ಕೇಂದ್ರ ಸರ್ಕಾರ 2024ರಲ್ಲಿ ನಡೆಯಲಿರುವ ಲೋಕಸಭಾ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ರಾಮಮಂದಿರ ನಿರ್ಮಾಣಕ್ಕೆ ಸಾರ್ವಜನಿಕರಿಂದ ನಿಧಿ ಸಂಗ್ರಹಿಸುವ ಕಾರ್ಯಕ್ಕೆ ಚಾಲನೆ ನೀಡಿದೆ ಎಂದು ಶಿವಸೇನೆ ಗಂಭೀರ ಆರೋಪ ಮಾಡಿದೆ.

ಬಿಜೆಪಿ ಮುಖಂಡರು 2024ರ ಲೋಕಸಭಾ ಚುನಾವಣೆ ಪ್ರಚಾರದ ಅಂಗವಾಗಿ ಶ್ರೀ ರಾಮನ ಹೆಸರನ್ನು ದುರ್ಬಳಕೆ ಮಾಡಿಕೊಂಡು ನಿಧಿ ಸಂಗ್ರಹ ಕಾರ್ಯಕ್ಕೆ ಚಾಲನೆ ನೀಡಿದ್ದಾರೆ ಎಂದು ಸೇನೆ ಮುಖವಾಣಿ ಸಾಮ್ನಾದಲ್ಲಿ ಆರೋಪಿಸಲಾಗಿದೆ.

ಆದರೆ, ಶಿವಸೇನೆ ಆರೋಪವನ್ನು ಸಾರ ಸಗಟಾಗಿ ನಿರಾಕರಿಸಿರುವ ಬಿಜೆಪಿ ಮುಖಂಡರು ಸೇನೆ ಉದ್ದೇಶಪೂರ್ವಕವಾಗಿ ಇಂತಹ ಆರೋಪ ಮಾಡುತ್ತಿದೆ ಎಂದು ತಿರುಗೇಟು ನೀಡಿದ್ದಾರೆ. ರಾಮಮಂದಿರ ನಿರ್ಮಾಣಕ್ಕೆ ಗುದ್ದಲಿಪೂಜೆ ನೆರವೇರಿಸುವ ಸಂದರ್ಭದಲ್ಲಿ ರೋಡ್ ಬ್ಲಾಕ್ ಮಾಡಿದ್ದ ಶಿವಸೇನೆ ಸರ್ಕಾರ ಇದೀಗ ನಿಧಿ ಸಂಗ್ರಹ ಕಾರ್ಯವನ್ನು ರಾಜಕೀಯ ದುರುದ್ದೇಶಕ್ಕೆ ಬಳಕೆ ಮಾಡಿಕೊಳ್ಳುತ್ತಿದೆ ಎಂದು ಆರೋಪಿಸಿದ್ದಾರೆ.

ಇತ್ತಿಚೆಗೆ ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ಕಾರ್ಯದರ್ಶಿ ಚಂಪಾತ್ ರಾಯ್ ಅವರು ರಾಮಮಂದಿರ ನಿರ್ಮಾಣಕ್ಕೆ ವಿದೇಶಗಳಿಂದ ಯಾವುದೇ ವಂತಿಗೆ ಸ್ವೀಕರಿಸುವುದಿಲ್ಲ. ಅದರ ಬದಲು ದೇಶವಾಸಿಗಳಿಂದ ವಂತಿಗೆ ಸಂಗ್ರಹಿಸಿ ಮಂದಿರ ನಿರ್ಮಾಣ ಮಾಡಲಾಗುವುದು ಎಂದು ಹೇಳಿಕೆ ನೀಡಿದ್ದರು. ಇದೀಗ ಅವರ ಹೇಳಿಕೆ ಶಿವಸೇನೆ ಮತ್ತು ಬಿಜೆಪಿ ಮುಖಂಡರ ನಡುವಿನ ವಾಕ್ಸಾಮರಕ್ಕೆ ಕಾರಣವಾಗಿದೆ.


Spread the love

About Laxminews 24x7

Check Also

ಬೆಂಗಳೂರಲ್ಲಿ ಮುಂಬೈ ಮಾದರಿ ಕೊಳಗೇರಿ ಪ್ರದೇಶಗಳ ಪುನಶ್ಚೇತನಕ್ಕೆ ಸಮಿತಿ ರಚಿಸಿ: ಡಿಸಿಎಂ ಸೂಚನೆ

Spread the love ಬೆಂಗಳೂರು: ಮುಂಬೈ ಮಾದರಿಯಲ್ಲಿ ಕೊಳಗೇರಿ ಪ್ರದೇಶಗಳ ಪುನಶ್ಚೇತನಕ್ಕೆ ಸಮಿತಿ ರಚಿಸಲು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಜಿಬಿಎ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ