Breaking News

ಖಾಸಗಿ ಲಾಡ್ಜ್​​ನಲ್ಲಿ ಪಿಎಸ್​ಐ ಆತ್ಮಹತ್ಯೆ

Spread the love

ತುಮಕೂರು: ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಪೊಲೀಸ್​​ ಸಬ್ ಇನ್ಸ್​ಪೆಕ್ಟರ್​​ವೊಬ್ಬರು ನಗರದ ಖಾಸಗಿ ಲಾಡ್ಜ್​​ನಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ದಾವಣಗೆರೆ ನಗರದ ಬಡಾವಣೆ ಪೊಲೀಸ್ ಠಾಣೆಯ ಸಬ್ ಇನ್ಸ್‌ಪೆಕ್ಟರ್ ನಾಗರಾಜಪ್ಪ ಆತ್ಮಹತ್ಯೆ ಮಾಡಿಕೊಂಡವರು.

ಪಿಎಸ್​ಐ​​ ನಾಗರಾಜಪ್ಪ ಜುಲೈ 1ರಂದು ತುಮಕೂರು ನಗರದ ದ್ವಾರಕಾ ಲಾಡ್ಜ್​​ನ 4ನೇ ಮಹಡಿಯಲ್ಲಿ ರೂಮ್​ ಬಾಡಿಗೆ ಪಡೆದಿದ್ದರು. ಅವರು ಆತ್ಮಹತ್ಯೆ ಮಾಡಿಕೊಂಡಿರುವುದು ಇಂದು (ಭಾನುವಾರ) ಬೆಳಗ್ಗೆ ಬೆಳಕಿಗೆ ಬಂದಿದೆ.

ಕೊಠಡಿಯಲ್ಲಿ ಬಾಂಡ್ ಪೇಪರ್​​ನಲ್ಲಿ ವಿಲ್ ಬರೆದಿಟ್ಟಿದ್ದಾರೆ. ಮೊಬೈಲ್ ಸೇರಿದಂತೆ, ಡೆತ್​​ನೋಟ್ ಮತ್ತು ಬಾಂಡ್ ಪೇಪರ್ ವಶಕ್ಕೆ ಪಡೆಯಲಾಗಿದೆ. ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದ್ದು, ತನಿಖೆ ನಡೆಯುತ್ತಿದೆ ಎಂದು ಪೊಲೀಸ್​ ಮೂಲಗಳು ತಿಳಿಸಿವೆ.

ಇಂದು ಲಾಡ್ಜ್​​ನಲ್ಲಿ ದುರ್ವಾಸನೆ ಬಂದಾಗ, ಅಲ್ಲಿನ ಸಿಬ್ಬಂದಿ ನೋಡಿದ್ದಕ್ಕೆ ಘಟನೆ ಬೆಳಕಿಗೆ ಬಂದಿದೆ. ಸ್ಥಳಕ್ಕೆ ತುಮಕೂರು ನಗರ ಠಾಣೆ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದರು


Spread the love

About Laxminews 24x7

Check Also

ವಡಗಾಂವನ ಶ್ರೀ ಮಲ್ಲಿಕಾರ್ಜುನ ಮಂದಿರದಲ್ಲಿ ಶಿವರಾತ್ರಿ ಸಂಭ್ರಮ: 20 ಸಾವಿರ ಭಕ್ತರಿಂದ ಮಹಾಪ್ರಸಾದ ಸ್ವೀಕಾರ

Spread the loveವಡಗಾಂವನ ಶ್ರೀ ಮಲ್ಲಿಕಾರ್ಜುನನಿಗೆ ಶಿವರಾತ್ರಿಯ ಅದ್ಧೂರಿ ಉತ್ಸವ ಸಹಸ್ರಾರು ಭಕ್ತರ ಸಮ್ಮುಖದಲ್ಲಿ ಪಲ್ಲಕ್ಕಿ ಮೆರವಣಿಗೆ 20 ಸಾವಿರ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ