Breaking News

ಡಿಜಿಟಲ್ ಅರೆಸ್ಟ್ ಮೂಲಕ ಮಂಗಳೂರಿನ ಮಹಿಳೆಗೆ 3.15 ಕೋಟಿ ರೂಪಾಯಿ ವಂಚನೆ

Spread the love

ಮಂಗಳೂರು: ಮಂಗಳೂರಿನ ಮಹಿಳೆಯೊಬ್ಬರು ಡಿಜಿಟಲ್ ಅರೆಸ್ಟ್ ಎಂಬ ಹೆಸರಿನಲ್ಲಿ ನಡೆದ ಆನ್‌ಲೈನ್ ವಂಚನೆಯಲ್ಲಿ 3 ಕೋಟಿ 15 ಲಕ್ಷ ರೂಪಾಯಿಗಳಿಗಿಂತ ಹೆಚ್ಚು ಹಣವನ್ನು ಕಳೆದುಕೊಂಡಿದ್ದಾರೆ.

ಜೂನ್ 6ರಂದು ಬೆಳಗ್ಗೆ 10:25ರ ಸುಮಾರಿಗೆ ಮಹಿಳೆಗೆ 8260865038 ಸಂಖ್ಯೆಯಿಂದ ಕರೆ ಬಂದಿದೆ. ಕರೆ ಮಾಡಿದವರು ತಾವು ಇನ್ಸ್‌ಪೆಕ್ಟರ್ ಅನು ಶರ್ಮಾ ಎಂದು ಪರಿಚಯಿಸಿಕೊಂಡು, NCRP (ನ್ಯಾಷನಲ್ ಕ್ರೈಮ್ ರಿಪೋರ್ಟಿಂಗ್ ಪೋರ್ಟಲ್)ನಿಂದ ಕರೆ ಮಾಡುತ್ತಿರುವುದಾಗಿ ತಿಳಿಸಿದ್ದಾರೆ.

ಮಹಿಳೆಯ ಗಂಡನ ಹೆಸರಿನಲ್ಲಿ ಹೊಸ ಸಿಮ್ (9867485463) ಖರೀದಿಸಲಾಗಿದೆ. ಆ ಸಿಮ್‌ನಿಂದ ವಂಚನೆಯ ಕರೆಗಳು ಮತ್ತು ಲಿಂಕ್‌ಗಳನ್ನು ಸಾರ್ವಜನಿಕರಿಗೆ ಕಳುಹಿಸಲಾಗುತ್ತಿದೆ ಎಂದು ಹೇಳಿದ್ದಾರೆ. ನಂತರ ಕರೆಯನ್ನು ಸಹಾರ್ ಪೊಲೀಸ್ ಠಾಣೆಗೆ ವರ್ಗಾಯಿಸಲಾಗಿದೆ. ಅಲ್ಲಿ ಸಬ್ ಇನ್ಸ್‌ಪೆಕ್ಟರ್ ಮೋಹನ್ ಕುಮಾರ್ ಎಂಬಾತ ಮಾತನಾಡಿ, ಮಹಿಳೆಯ ವೈಯಕ್ತಿಕ ಮಾಹಿತಿ ಪಡೆದುಕೊಂಡಿದ್ದಾನೆ. ಆ ನಂತರ ಕರೆಯನ್ನು ಪಬ್ಲಿಕ್ ಪ್ರಾಸಿಕ್ಯೂಟರ್ ದೀಪಕ್ ವೆಂಕಟರಮಣ ಎಂಬಾತನಿಗೆ ವರ್ಗಾಯಿಸಲಾಗಿದೆ. ಈತ ಮಹಿಳೆಯ ಮತ್ತು ಅವರ ಗಂಡನ ಬ್ಯಾಂಕ್ ಖಾತೆಯ ವಿವರಗಳನ್ನು ಸಂಗ್ರಹಿಸಿದ್ದಾನೆ.

ಈ ವ್ಯಕ್ತಿಗಳು, ಬ್ಯಾಂಕ್ ಖಾತೆಗಳ ಪರಿಶೀಲನೆಗಾಗಿ ಹಣ ಪಾವತಿಸುವಂತೆ ಸೂಚಿಸಿದ್ದಾರೆ. ಪಾವತಿಸಿದ ಎಲ್ಲಾ ಹಣವನ್ನು ವಾಪಸ್ ನೀಡುವುದಾಗಿ ಭರವಸೆ ನೀಡಿದ್ದಾರೆ. ಈ ವಿಷಯವನ್ನು ಯಾರಿಗೂ ತಿಳಿಸದಂತೆ ತಿಳಿಸಿದ್ದಾರೆ. ಮಹಿಳೆಯನ್ನು ಭೀತಿಗೊಳಿಸಿದ್ದರಿಂದ ಅವರು ಯಾರೊಂದಿಗೂ ಮಾಹಿತಿಯನ್ನು ಹಂಚಿಕೊಂಡಿರಲಿಲ್ಲ.

ಜೂನ್ 10ರಿಂದ ಜೂನ್ 27ರವರೆಗೆ, ಮಹಿಳೆ ಮತ್ತು ಅವರ ಗಂಡನ ಬ್ಯಾಂಕ್ ಖಾತೆಗಳಿಂದ ಹಂತಹಂತವಾಗಿ ಒಟ್ಟು 3,16,52,142 ರೂಪಾಯಿಗಳನ್ನು ವಂಚಕರು ನೀಡಿದ ಬೇರೆ ಬೇರೆ ಬ್ಯಾಂಕ್ ಖಾತೆಗಳಿಗೆ RTGS ಮೂಲಕ ವರ್ಗಾಯಿಸಿದ್ದಾರೆ. ನಂತರ, ವಂಚಕರು ಯಾವುದೇ ಸಂಪರ್ಕಕ್ಕೆ ಸ್ಪಂದಿಸದೇ, ಕರೆಗಳನ್ನು ಬ್ಲಾಕ್ ಮಾಡಿದ್ದಾರೆ.


Spread the love

About Laxminews 24x7

Check Also

ನಾಲ್ಕು ರಾಜ್ಯಗಳ ಉಪಚುನಾವಣೆ: ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಪ್ರಕಟ

Spread the loveಭಾರತೀಯ ಜನತಾ ಪಾರ್ಟಿ (ಬಿಜೆಪಿ) ಗೋವಾ ಸೇರಿದಂತೆ ನಾಲ್ಕು ರಾಜ್ಯಗಳ ಐದು ವಿಧಾನಸಭಾ ಕ್ಷೇತ್ರಗಳಿಗೆ ನಡೆಯಲಿರುವ ಉಪಚುನಾವಣೆಗಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ