Breaking News

ಸಚಿವ ಸ್ಥಾನ ಕೊಡುವುದಾಗಿ ಸುರ್ಜೆವಾಲಾ ಹಿಂದೆ ಹೇಳಿದ್ದರು,: ರುದ್ರಪ್ಪ ಲಮಾಣಿ

Spread the love

ಹಾವೇರಿ: “ಕರ್ನಾಟಕ ಕಾಂಗ್ರೆಸ್​​ ಉಸ್ತುವಾರಿ ರಣದೀಪ್ ಸಿಂಗ್ ಸರ್ಜೇವಾಲ ಅವರನ್ನು ನಾಳೆ ಭೇಟೆಯಾಗುತ್ತೇನೆ” ಎಂದು ವಿಧಾನಸಭೆ ಉಪಸಭಾಪತಿ ರುದ್ರಪ್ಪ ಲಮಾಣಿ ತಿಳಿಸಿದ್ದಾರೆ.

ಹಾವೇರಿಯಲ್ಲಿಂದು ಮಾತನಾಡಿದ ಅವರು, “ಸುರ್ಜೆವಾಲಾ ಅವರು ಕರೆದಿದ್ದಾರೆ. ಹೋಗುತ್ತೇನೆ. ಹೋಗಿ ಭೇಟಿಯಾದ ಮೇಲೆ ಏನು ಅಂತ ಗೊತ್ತಾಗಲಿದೆ. ಸರ್ಕಾರದ ಸಾಧನೆ, ಸಂಘಟನೆ ಬಗ್ಗೆ ಚರ್ಚೆ ಮಾಡಬಹುದು. ವಿಧಾನಸಭಾ ಉಪಾಧ್ಯಕ್ಷನಾದ ಮೇಲೆ ನಾನು ಕೇಳಿದ ಅನುದಾನ ಕೊಟ್ಟಿದಾರೆ. 100ಕ್ಕೆ 100 ಕೊಡುವುದು ಆ ದೇವರಿಂದಲೂ ಸಾಧ್ಯವಿಲ್ಲ” ಎಂದರು.

“ನನಗೆ ಸಚಿವ ಸ್ಥಾನ ಕೊಡುವ ಬಗ್ಗೆ ಹೈಕಮಾಂಡ್​ ತೀರ್ಮಾನ ಮಾಡುತ್ತೆ. ಯಾರಿಗೆ, ಏನು ಕೊಡಬೇಕು ಎಂದು ಹೈಕಮಾಂಡ್​ ತೀರ್ಮಾನ ಮಾಡಲಿದೆ. ಸಚಿವ ಸ್ಥಾನ ಕೊಟ್ಟರೆ ಯಾರು ಬೇಡ ಅಂತಾರೆ?. ಶಾಸಕರಿದ್ದವರಿಗೆಲ್ಲಾ ಸಚಿವರಾಗುವ ಆಸೆ ಇರುತ್ತದೆ. ಕೊಟ್ಟರೆ ಯಾರೂ ಬೇಡ ಅನ್ನುವುದಿಲ್ಲ. ಹೈಕಮಾಂಡ್​ ತೀರ್ಮಾನವೇ ಅಂತಿಮ. ಸಚಿವ ಸ್ಥಾನ ಕೊಡುವುದಾಗಿ ಸುರ್ಜೆವಾಲಾ ಹಿಂದೆಯೂ ಹೇಳಿದ್ದರು. ನಾಳೆಯೂ ಭೇಟಿಯಾದಾಗ ಸಚಿವ ಸ್ಥಾನ ಕೇಳುತ್ತೇನೆ” ಎಂದು ಲಮಾಣಿ ಹೇಳಿದರು.ಮುಂದುವರೆದು ಮಾತನಾಡಿದ ಅವರು, “ಸಚಿವ ಸ್ಥಾನ ಕೇಳಲು ಏನಾಗಿದೆ? ಕೇಳೋಕೆ ಏನು ರೊಕ್ಕ ಕೊಡಬೇಕಾ? ಎಂದು ಪ್ರಶ್ನಿಸಿದ ಅವರು, “ನಮ್ಮ ಡಿಮ್ಯಾಂಡ್​ ಇದೆ, ಕೊಡಿ ಅಂತ ಕೇಳುತ್ತೇನೆ. ಕೊಡುವುದು, ಬಿಡುವುದು ಅವರಿಗೆ ಬಿಟ್ಟಿದ್ದು” ಎಂದರು.


Spread the love

About Laxminews 24x7

Check Also

ಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ!

Spread the loveಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ! …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ