Breaking News

ವಿದೇಶಿ ಪ್ರಜೆಗಳಿಂದ ಮಾದಕ ದ್ರವ್ಯಗಳನ್ನ ಜಪ್ತಿ

Spread the love

ಬೆಂಗಳೂರು : ಮಿಂಚಿನ ಕಾರ್ಯಾಚರಣೆ ನಡೆಸಿರುವ ರಾಜಾನುಕುಂಟೆ ಪೊಲೀಸರು ಮೂವರು ವಿದೇಶಿ ಪ್ರಜೆಗಳನ್ನು ಬಂಧಿಸುವ ಮೂಲಕ ಡ್ರಗ್ಸ್ ಜಾಲವನ್ನು ಪತ್ತೆ ಮಾಡಿದ್ದಾರೆ. ಆರೋಪಿಗಳಿಂದ 4.5 ಕೋಟಿ ಮೌಲ್ಯದ ಮಾದಕ ದ್ರವ್ಯಗಳನ್ನು ಜಪ್ತಿ ಮಾಡಿಕೊಂಡಿದ್ದಾರೆ.

ಯಲಹಂಕ ತಾಲೂಕು ರಾಜಾನುಕುಂಟೆ ಪೊಲೀಸ್ ಠಾಣಾ ವ್ಯಾಪ್ತಿಯ ಅದ್ದಿಗಾನಹಳ್ಳಿ ಗ್ರಾಮದ ಬಾಡಿಗೆ ಮನೆಯೊಂದರಲ್ಲಿ ವಿದೇಶಿ ಪ್ರಜೆಗಳು ವಾಸವಾಗಿದ್ದು, ಅವರ ಚಲನವಲನದ ಬಗ್ಗೆ ಪೊಲೀಸರಿಗೆ ಸಂಶಯ ಇತ್ತು. ಹೀಗಾಗಿ ಖಚಿತ ಮಾಹಿತಿ ಪಡೆದ ಮೇರೆಗೆ ರಾಜಾನುಕುಂಟೆ ಪೊಲೀಸರು ಅವರ ಮನೆ ಮೇಲೆ ದಾಳಿ ಮಾಡಿದ್ದಾರೆ. ದಾಳಿ ವೇಳೆ ಮನೆಯಲ್ಲಿ ಮೂವರು ವಿದೇಶಿ ಪ್ರಜೆಗಳು ವಾಸವಾಗಿರುವುದು ಪತ್ತೆಯಾಗಿದೆ. ಮಾದಕ ದ್ರವ್ಯವೂ ಸಿಕ್ಕಿದೆ. ಹೀಗಾಗಿ ಅವರನ್ನು ಬಂಧಿಸಿ, NDPS ಕಾಯ್ದೆಯಡಿ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಈ ಕುರಿತು ಬೆಂಗಳೂರು ಗ್ರಾಮಾಂತರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿ. ಕೆ. ಬಾಬಾ ಅವರು ಮಾತನಾಡಿದ್ದು, ‘ನೈಜೀರಿಯಾ ಮೂಲದ ಮೂವರು ವಿದೇಶಿ ಪ್ರಜೆಗಳನ್ನು ಬಂಧಿಸಲಾಗಿದೆ. ಆರೋಪಿಗಳು ಮೆಡಿಕಲ್ ಕಾರಣಕ್ಕಾಗಿ ದೆಹಲಿಗೆ ಬಂದಿದ್ದರು. ಅಲ್ಲಿಂದ ಬೆಂಗಳೂರಿನ ಅದಿಗಾನಹಳ್ಳಿಯಲ್ಲಿ ಬಾಡಿಗೆ ಮನೆ ಪಡೆದು ವಾಸವಾಗಿದ್ದರು’ ಎಂದಿದ್ದಾರೆ.

ಆರೋಪಿಗಳಿಂದ ಅಕ್ರಮವಾಗಿ ಶೇಖರಿಸಿ ಇಟ್ಟಿದ್ದ ನಿಷೇಧಿತ ಮಾದಕ ವಸ್ತುಗಳಾದ MDMA Crystal 2 ಕೆಜಿ 820 ಗ್ರಾಂ, 07 ಮೊಬೈಲ್ ಫೋನ್​ಗಳು, 02 ತೂಕದ ಯಂತ್ರ ಮತ್ತು 2,06,870 ಲಕ್ಷ ರೂಪಾಯಿ ನಗದು ಜಪ್ತಿ ಮಾಡಲಾಗಿದೆ. ಒಟ್ಟು ಮೌಲ್ಯ 04.50 ಕೋಟಿ ಮೌಲ್ಯದ ಮಾದಕ ದ್ರವ್ಯ ಜಪ್ತಿ ಮಾಡಲಾಗಿದೆ ಎಂದು ತಿಳಿಸಿದ್ದಾರೆ.

ಆರೋಪಿಗಳು ಯಾರಿಗೂ ಅನುಮಾನ ಬಾರದಂತೆ ರೆಡಿಮೆಡ್ ಬಟ್ಟೆಗಳ ಪ್ಯಾಕ್​​ಗಳಲ್ಲಿ ಡ್ರಗ್ ತುಂಬಿ ಮಾರಾಟ ಮಾಡ್ತಿದ್ದರು. ಶರ್ಟ್, ಪ್ಯಾಂಟ್​​ಗಳಲ್ಲಿ ಬಳಸುವ ಕಾರ್ಡ್ ಬೋರ್ಡ್​ಗಳಲ್ಲಿ ಮಾದಕ ವಸ್ತುಗಳನ್ನ ಇಟ್ಟು ಮಾರಾಟ ಮಾಡುತ್ತಿದ್ದರು. ಅಕ್ಕಪಕ್ಕದವರಿಗೆ ಅನುಮಾನ ಬಾರದೆಂಬ ಕಾರಣಕ್ಕೆ ಸೆಕ್ಯೂರಿಟ್ ಕೆಲಸದ ಬಟ್ಟೆಗಳನ್ನ ಹಾಕಿಕೊಂಡು ಮನೆಗೆ ಬಂದು ಹೋಗುತ್ತಿದ್ದರು. ಆರೋಪಿಗಳ ವಿಚಾರಣೆ ಮುಂದುವರೆಸಲಾಗಿದ್ದು, ಇವರಿಂದ ಮತ್ತಷ್ಟು ಮಾಹಿತಿಗಳನ್ನ ಕಲೆಹಾಕಿ ಡ್ರಗ್ಸ್ ಜಾಲವನ್ನ ಭೇದಿಸುವುದಾಗಿ ಹೇಳಿದ್ದಾರೆ.


Spread the love

About Laxminews 24x7

Check Also

ಎನ್.ಕೆ. ಎಜುಕೇಶನ್ ಸೊಸೈಟಿಯ ಎಸ್‌ಎಸ್‌ಎ ಪಿಯು ಕಾಲೇಜಿನ ಅದ್ಭುತ ಫಲಿತಾಂಶ

Spread the loveಎನ್.ಕೆ. ಎಜುಕೇಶನ್ ಸೊಸೈಟಿಯ ಎಸ್‌ಎಸ್‌ಎ ಪಿಯು ಕಾಲೇಜಿನ ಅದ್ಭುತ ಫಲಿತಾಂಶ ಬೆಳಗಾವಿ: ಎನ್.ಕೆ. ಎಜುಕೇಶನ್ ಸೊಸೈಟಿಯ ಅಧೀನದಲ್ಲಿರುವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ