Breaking News

ಸಿಎಂ ಬದಲಾವಣೆ ವಿಚಾರ: ಈ ವಿಚಾರವಾಗಿ ಬಾಯಿ ಮುಚ್ಚಿಕೊಂಡು ಇರಬೇಕು ಎಂದು ಖರ್ಗೆ ಆದೇಶವಿದೆ: ಮಧು ಬಂಗಾರಪ್ಪ

Spread the love

ಗದಗ: “ಮುಖ್ಯಮಂತ್ರಿ ಬದಲಾವಣೆ ಕುರಿತ ಚರ್ಚೆಗಳು ರಾಜ್ಯ ರಾಜಕೀಯದಲ್ಲಿ ಮತ್ತೆ ಸದ್ದು ಮಾಡುತ್ತಿರುವ ಈ ಹೊತ್ತಿನಲ್ಲಿ, ಈ ಬಗ್ಗೆ ಪ್ರತಿಕ್ರಿಯೆ ನೀಡದಂತೆ ಕಾಂಗ್ರೆಸ್ ಹೈಕಮಾಂಡ್‌ನಿಂದ ಸ್ಪಷ್ಟ ಸೂಚನೆ ಬಂದಿದೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ರಾಜ್ಯದ ಕಾಂಗ್ರೆಸ್‌ ನಾಯಕರಿಗೆ ‘ಈ ವಿಚಾರವಾಗಿ ಬಾಯಿ ಮುಚ್ಚಿಕೊಂಡು ಇರಬೇಕು’ ಎಂಬ ಸೂಚನೆ ನೀಡಿದ್ದಾರೆ” ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ.

ಇಂದು ಗದಗ ಜಿಲ್ಲೆಯಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಅವರು, ಸಿಎಂ ಬದಲಾವಣೆಯ ಬಗ್ಗೆ ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿ, “ಮಲ್ಲಿಕಾರ್ಜುನ ಖರ್ಗೆ ಸಾಹೇಬ್ರು, ಈ ವಿಚಾರದಲ್ಲಿ ಬಾಯಿ ಮುಚ್ಚಿಕೊಂಡು ಇರ್ರಿ‌ ಅಂತ ಹೇಳಿದ್ದಾರೆ. ಇದೊಂದು ಬಿಟ್ರೆ ನನಗೆ ಏನೂ ಗೊತ್ತಿಲ್ಲ. ಈ ವಿಷಯದಲ್ಲಿ ದಯವಿಟ್ಟು ನನಗೆ ಯಾವುದೇ ಪ್ರಶ್ನೆ ಕೇಳಬೇಡಿ” ಎಂದು ಸ್ಪಷ್ಟವಾಗಿ ತಿಳಿಸಿದರು.

ಗ್ಯಾರಂಟಿ ಯೋಜನೆಗೆ ಕಾಂಗ್ರೆಸ್ ಬದ್ಧ: ಬಿಜೆಪಿ ನಾಯಕರು ವಿವಿಧ ವೇದಿಕೆಗಳಲ್ಲಿ “ಕಾಂಗ್ರೆಸ್ ನೀಡಿದ ಗ್ಯಾರಂಟಿ ಯೋಜನೆಗಳು ನಿಲ್ಲುತ್ತವೆ” ಎಂಬ ಅನಾವಶ್ಯಕ ಟೀಕೆಗಳನ್ನು ನೀಡುತ್ತಿರುವ ಹಿನ್ನೆಲೆಯಲ್ಲಿ, ಸಚಿವ ಮಧು ಬಂಗಾರಪ್ಪ ತೀವ್ರವಾಗಿ ಪ್ರತಿಕ್ರಿಯಿಸಿದರು.

“ಮೂರು ವರ್ಷಗಳ ಕಾಲ ಬಿಜೆಪಿಯವರಿಗೆ ಬೇರೆ ಕೆಲಸವೇ ಇಲ್ಲ. ಇಷ್ಟು ದಿನ ಗ್ಯಾರಂಟಿ ಯೋಜನೆಗಳನ್ನು ವಿರೋಧಿಸುತ್ತಿದ್ದರು, ಈಗ ಜನರ ಬೆಂಬಲ ನೋಡಿ ನಾವು ಗ್ಯಾರಂಟಿ ವಿರೋಧಿಗಳು ಅಲ್ಲ ಅಂತ ಹೇಳ್ತಿದ್ದಾರೆ. ಜನ ಚೀಮಾರಿ ಹಾಕಿ, ಮುಖಕ್ಕೆ ಉಗಿದಾಗ ಅರ್ಥವಾಗುತ್ತೆ!” ಎಂದು ಅಕ್ರೋಶ ಭರಿತ ಹೇಳಿಕೆಯೊಂದಿಗೆ ಈ ರೀತಿ ಹೇಳುವುದನ್ನು ಬಿಜೆಪಿಯವರು, ಇನ್ನು ಮೂರು ವರ್ಷ ಪ್ಯಾಕೇಜ್ ಡೀಲ್ ಮಾಡಿಕೊಂಡಿದ್ದಾರೆ” ಎಂದು ವ್ಯಂಗ್ಯವಾಡಿದರು


Spread the love

About Laxminews 24x7

Check Also

ನಾಲ್ಕು ರಾಜ್ಯಗಳ ಉಪಚುನಾವಣೆ: ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಪ್ರಕಟ

Spread the loveಭಾರತೀಯ ಜನತಾ ಪಾರ್ಟಿ (ಬಿಜೆಪಿ) ಗೋವಾ ಸೇರಿದಂತೆ ನಾಲ್ಕು ರಾಜ್ಯಗಳ ಐದು ವಿಧಾನಸಭಾ ಕ್ಷೇತ್ರಗಳಿಗೆ ನಡೆಯಲಿರುವ ಉಪಚುನಾವಣೆಗಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ