Breaking News

ಮೃತ ಸರ್ಕಾರಿ ವೈದ್ಯಾಧಿಕಾರಿ ಕೊಠಡಿಯಲ್ಲಿ ಮಾಟಮಂತ್ರ: ಸಾವಿನ ಸುತ್ತ ಅನುಮಾನದ ಹುತ್ತ

Spread the love

ಕೋಲಾರ, ಜುಲೈ 07: ಜಿಲ್ಲೆ ಮಾಲೂರು ತಾಲ್ಲೂಕಿನ ಆಸ್ಪತ್ರೆಯ ವೈದ್ಯಾಧಿಕಾರಿ ಡಾ.ವಸಂತ್ ಕುಮಾರ್ ಅವರು ತಮ್ಮ ಉತ್ತಮ ಸೇವೆಯಿಂದಲೇ ಸಾಕಷ್ಟು ಹೆಸರು ಮಾಡಿದ್ದರು. ಕಳೆದೊಂದು ತಿಂಗಳ ಹಿಂದೆ ಹೃದಯಾಘಾತದಿಂದ (heart attack) ಮೃತಪಟ್ಟಿದ್ದರು. ಆದರೆ ಆ ವೈದ್ಯರ ಕೊಠಡಿ ತೆರೆದು ನೋಡಿದಾಗ ಅಲ್ಲೊಂದು ಆಘಾತವೇ ಎದುರಾಗಿದ್ದು, ಆಸ್ಪತ್ರೆಯ ಸಿಬ್ಬಂದಿ ಮತ್ತು ವೈದ್ಯರ ಕುಟುಂಬಸ್ಥರು ಅಕ್ಷರಶಃ ದಂಗಾಗಿದ್ದಾರೆ. ಮಾಟ‌ಮಂತ್ರ (Black magic) ಮಾಡಿರುವ ವಸ್ತುಗಳು ಪತ್ತೆ ಆಗಿವೆ.

ಜೂನ್​ 5 ರಂದು ಮಾಲೂರು ಸರ್ಕಾರಿ ಆಸ್ಪತ್ರೆಯ ವೈದ್ಯಾಧಿಕಾರಿ ಡಾ.ವಸಂತ್ ಕುಮಾರ್ ಅವರು ಬೆಂಗಳೂರಿನಿಂದ ಮಾಲೂರಿಗೆ ಬರುವ ವೇಳೆಯಲ್ಲಿ ರೈಲಿನಲ್ಲಿ ಹೃದಯಾಘಾತವಾಗಿ ಮೃತಪಟ್ಟಿದ್ದರು. ಏಕಾಏಕಿ ನಡೆದ ಈ ದುರ್ಘಟನೆಯಿಂದ ಎಲ್ಲರೂ ಆಘಾತಕ್ಕೊಳಗಾಗಿದ್ದರು. ಇನ್ನು ಕಳೆದ 9 ವರ್ಷಗಳಿಂದ ವೈದ್ಯಾಧಿಕಾರಿಯಾಗಿದ್ದ ಡಾ.ವಸಂತ್ ತಮ್ಮ ಉತ್ತಮ ಕಾರ್ಯದಿಂದ ಸಾಕಷ್ಟು ಹೆಸರು ಮಾಡಿದ್ದರು.ಇನ್ನು ವಸಂತ್ ಕುಮಾರ್ ಅವರು ಮೃತಪಟ್ಟ ನಂತರ ಆಸ್ಪತ್ರೆಯಲ್ಲಿದ್ದ ಅವರ ಪ್ರತ್ಯೇಕ ಕೊಠಡಿಯ ಬಾಗಿಲು ತೆರೆದಿರಲಿಲ್ಲ, ಒಂದು ತಿಂಗಳ ನಂತರ ಅಂದರೆ ಜಲೈ-5 ರಂದು ವಸಂತ್ ಕುಮಾರ್ ಅವರ ಕುಟುಂಬಸ್ಥರು ಹಾಗೂ ಆಸ್ಪತ್ರೆಯ ಸಿಬ್ಬಂದಿಗಳ ಸಮ್ಮುಖದಲ್ಲಿ ಕೊಠಡಿ ಬಾಗಿಲು ತೆರೆದು ಅಲ್ಲಿದ್ದ ಅಲ್ಮೇರಾದ ಬಾಗಿಲು ತೆರೆಯಲಾಗಿದೆ. ಈ ವೇಳೆ ಅಲ್ಮೇರಾದಲ್ಲಿ ಕೆಲವೊಂದು ಆಘಾತಕಾರಿ ಅಂಶಗಳು ಬೆಳಕಿಗೆ ಬಂದಿದೆ.


Spread the love

About Laxminews 24x7

Check Also

ನಾಲ್ಕು ರಾಜ್ಯಗಳ ಉಪಚುನಾವಣೆ: ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಪ್ರಕಟ

Spread the loveಭಾರತೀಯ ಜನತಾ ಪಾರ್ಟಿ (ಬಿಜೆಪಿ) ಗೋವಾ ಸೇರಿದಂತೆ ನಾಲ್ಕು ರಾಜ್ಯಗಳ ಐದು ವಿಧಾನಸಭಾ ಕ್ಷೇತ್ರಗಳಿಗೆ ನಡೆಯಲಿರುವ ಉಪಚುನಾವಣೆಗಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ