Breaking News

ವಿಧಾನ ಪರಿಷತ್​ ಉಪಕಾರ್ಯದರ್ಶಿ ಜಲಜಾಕ್ಷಿ ಅಮಾನತು ಆದೇಶಕ್ಕೆ ಹೈಕೋರ್ಟ್​ ತಡೆ

Spread the love

ಬೆಂಗಳೂರು: ‘ಸಂವಿಧಾನ ಪೀಠಿಕೆ ಓದು’ ಕಾರ್ಯಕ್ರಮದ ಸಂದರ್ಭದಲ್ಲಿ ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಫೋಟೋ ಹಾಕಿಲ್ಲ ಎಂಬ ಆರೋಪದ ಹಿನ್ನೆಲೆಯಲ್ಲಿ ವಿಧಾನಪರಿಷತ್ ಉಪ ಕಾರ್ಯದರ್ಶಿ ಕೆ.ಜೆ. ಜಲಜಾಕ್ಷಿ ಅವರನ್ನು ಅಮಾನತುಗೊಳಿಸಿದ್ದ ಆದೇಶಕ್ಕೆ ಹೈಕೋರ್ಟ್ ಮಧ್ಯಂತರ ತಡೆ ನೀಡಿದೆ.

ವಿಧಾನಪರಿಷತ್​​ ಕಾರ್ಯದರ್ಶಿ ಆದೇಶ: ‘ಸಂವಿಧಾನದ ದಿನದ’ ಅಂಗವಾಗಿ ವಿಧಾನಪರಿಷತ್ತಿನ ಸಚಿವಾಲಯದಲ್ಲಿ 2024ರ ನವೆಂಬರ್ 26ರಂದು ಆಯೋಜಿಸಲಾಗಿತ್ತು. ಈ ಸಂದರ್ಭದಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಫೋಟೋ ಹಾಕಿಲ್ಲವೆಂಬ ಆರೋಪದ ಮೇಲೆ ಕೆ.ಜೆ ಜಲಜಾಕ್ಷಿ ಅವರನ್ನು ಅಮಾನತು ಮಾಡಿ ವಿಧಾನಪರಿಷತ್​​ ಕಾರ್ಯದರ್ಶಿ ಜುಲೈ 4ರಂದು ಆದೇಶ ಹೊರಡಿಸಿದ್ದರು.

ಮುಂದಿನ ವಿಚಾರಣೆವರೆಗೆ ಆದೇಶಕ್ಕೆ ಹೈಕೋರ್ಟ್​​ ತಡೆ: ಈ ಅಮಾನತು ರದ್ದು ಕೋರಿ ಕೆ.ಜೆ. ಜಲಜಾಕ್ಷಿ ಅವರು ಸಲ್ಲಿಸಿದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಹೆಚ್.ಟಿ. ನರೇಂದ್ರ ಪ್ರಸಾದ್ ಅವರಿದ್ದ ಏಕಸದಸ್ಯ ಈ ಆದೇಶ ನೀಡಿದೆ. ಅಲ್ಲದೆ, ಅಮಾನತು ಆದೇಶಕ್ಕೆ ಅರ್ಜಿಯ ಮುಂದಿನ ವಿಚಾರಣೆ ವರೆಗೆ ಹೈಕೋರ್ಟ್​​ ತಡೆ ನೀಡಿ ಆದೇಶಿಸಿತು.

ಸಭಾಪತಿ, ಕಾರ್ಯದರ್ಶಿಗೆ ನೋಟಿಸ್: ಜೊತೆಗೆ, ವಿಧಾನಪರಿಷತ್​​ ಸಭಾಪತಿ ಹಾಗೂ ಕಾರ್ಯದರ್ಶಿಯವರಿಗೆ ನೋಟಿಸ್ ಜಾರಿಗೊಳಿಸಿತು. ಅಗತ್ಯ ಬಿದ್ದರೆ ತಡೆ ಆದೇಶವನ್ನು ಬದಲಿಸಲು ಅಥವಾ ಮಾರ್ಪಡಿಸಲು ಪ್ರತಿವಾದಿಗಳು ಕೋರಬಹುದು ಎಂದು ಹೇಳಿತು.


Spread the love

About Laxminews 24x7

Check Also

ಪ್ರತಿ ಟನ್ ಕಬ್ಬಿಗೆ​​ ಹೆಚ್ಚುವರಿ 50 ರೂ. ಕೊಡಲು ಸಾಧ್ಯವಿಲ್ಲ: ಸಕ್ಕರೆ ಮಿಲ್ಸ್ ಸಂಘಟನೆ ಅಧ್ಯಕ್ಷ

Spread the loveಬೆಂಗಳೂರು: ಪ್ರತಿ ಟನ್ ಕಬ್ಬಿಗೆ 3,200 ರೂ.‌ ಕೊಡಲು ಮಾತ್ರ ಸಾಧ್ಯ. 3,250 ರೂ. ಕೊಡುವುದು ಸಾಧ್ಯವಿಲ್ಲ ಎಂದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ