Breaking News

ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಎಲ್ಲ ರೀತಿಯಲ್ಲೂ ಉತ್ತಮವಾಗಿದೆ: ಗೃಹ ಸಚಿವ ಡಾ.ಜಿ. ಪರಮೇಶ್ವರ್

Spread the love

ಸುಬ್ರಹ್ಮಣ್ಯ(ದ.ಕನ್ನಡ): “ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಎಲ್ಲಾ ರೀತಿಯಲ್ಲೂ ಉತ್ತಮವಾಗಿದೆ” ಎಂದು ರಾಜ್ಯ ಗೃಹ ಸಚಿವ ಡಾ.ಜಿ. ಪರಮೇಶ್ವರ್ ಹೇಳಿದ್ದಾರೆ.

ಮಂಗಳವಾರ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, “ಇತ್ತೀಚೆಗೆ ನಡೆದ ಕಾನ್ಫೆರೆನ್ಸ್‌ನಲ್ಲಿ ಮಾನ್ಯ ಮುಖ್ಯಮಂತ್ರಿಗಳ ಉಪಸ್ಥಿತಿಯಲ್ಲಿ, ವಿವಿಧ ಅಪರಾಧಗಳ ಬಗ್ಗೆ ಮಾಹಿತಿ ಪಡೆದ ವೇಳೆ ಕ್ರೈಮ್ ರೇಟ್ ಕಡಿಮೆಯಾಗಿರುವುದು ಕಂಡು ಬಂದಿದೆ. ದಕ್ಷಿಣ ಕನ್ನಡ ಜಿಲ್ಲೆ ಸೇರಿದಂತೇ ಎಲ್ಲ ಕಡೆ ಕಾನೂನುನನ್ನು ಬಹಳ ಕಠಿಣವಾಗಿ ತೆಗೆದುಕೊಳ್ಳಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲೇ ಗಮನಿಸಿದಾಗ ಕಠಿಣ ಕ್ರಮಕೈಗೊಂಡ ಹಿನ್ನೆಲೆಯಲ್ಲಿ ಇದೀಗ ಇಲ್ಲಿನ ಕಾನೂನು ಸುವ್ಯವಸ್ಥೆ ಉತ್ತಮವಾಗಿರಲು ಸಾಧ್ಯವಾಗಿದೆ”.

“ವಿಶೇಷ ಕಾರ್ಯಪಡೆಯ ರಚನೆಯಿಂದ ಜಿಲ್ಲೆಯ ಶಾಂತಿ – ಸುವ್ಯವಸ್ಥೆಗೆ ಪೂರಕವಾಗಿದೆ. ಈ ಬಗ್ಗೆ ಇಂದು ಹಲವರ ಬಳಿ ವಿಚಾರಿಸಿದ್ದಾಗ ಶ್ಲಾಘನೆ ವ್ಯಕ್ತವಾಗಿದೆ. ಬೆಂಗಳೂರು ಬಳಿಕ ಬೆಳೆಯುವಲ್ಲಿ ಅವಕಾಶಗಳಿರುವ ಕರಾವಳಿಯಲ್ಲಿ ಶಾಂತಿವ್ಯವಸ್ಥೆಗಳು ಅತೀ ಮುಖ್ಯ. ಇಲ್ಲಿ ಶಾಂತಿ ನೆಲೆಸಿದರೆ ಉದ್ಯಮಗಳು, ಉದ್ಯೋಗಗಳು ಸೃಷ್ಟಿಯಾಗುತ್ತದೆ. ಅದಕ್ಕಾಗಿ ಈ ಭಾಗಕ್ಕೆ ಹೆಚ್ಚು ಗಮನ ಹರಿಸುತ್ತೇವೆ. ಇಲ್ಲಿ ಒಂದೆರಡು ಜನ ಬೇರೆ ರೀತಿಯಲ್ಲಿ ಇದ್ದರೂ ಜಿಲ್ಲೆಯ ಜನ ಉತ್ತಮರಾಗಿರುವವರು” ಎಂದರು.

“ಪೊಲೀಸರ ವರ್ಗಾವಣೆಯಿಂದ ಏನು ಪರಿಣಾಮ ಆಗಿದೆ ಎಂದು ನೀವೇ ಮಾಧ್ಯಮದವರು ಹೇಳಬೇಕು. ಜನರು ಎಲ್ಲರೂ ಚೆನ್ನಾಗಿ ಕಾನೂನು ಪಾಲನೆ ಮಾಡಿದರೆ ಪೊಲೀಸ್‌ನವರು ಯಾಕೆ ಕಾನೂನು ಕ್ರಮ ತೆಗೆದುಕೊಳ್ಳುತ್ತಾರೆ. ತಪ್ಪು ಮಾಡಿದವರನ್ನು ಸರಿಪಡಿಸಲು ಪೊಲೀಸ್ ಇಲಾಖೆ ಇದೆ. ಅದಕ್ಕಾಗಿ ಕಾನೂನು, ನಿಯಮಗಳನ್ನು ರೂಪಿಸಲಾಗುತ್ತಿದೆ” ಎಂದು ತಿಳಿಸಿದರು.


Spread the love

About Laxminews 24x7

Check Also

ಬಂಗಾರ ಪ್ರಿಯರಿಗೆ ಗುಡ್‌ ನ್ಯೂಸ್‌ – 10 ಗ್ರಾಂ ಚಿನ್ನದ ಬೆಲೆ 2,900 ರೂ. ಇಳಿಕೆ

Spread the loveಬೆಂಗಳೂರು: ಕೊಲ್ಲಿ ರಾಷ್ಟ್ರಗಳ ಯುದ್ಧದ ಬಿಸಿ ನಡುವೆಯೂ ಬಂಗಾರ ಪ್ರಿಯರಿಗೆ ಗುಡ್‌ನ್ಯೂಸ್‌ ಸಿಕ್ಕಿದೆ. ಸತತ ಏರುಗತಿಯಲ್ಲಿ ಸಾಗುತ್ತಿದ್ದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ