Breaking News

ಮಂತ್ರಾಲಯಕ್ಕೆ ಬಂದ ಮೂವರು ಯುವಕರು ತುಂಗಭದ್ರಾ ನದಿಯಲ್ಲಿ ಈಜಲು ಹೋಗಿ ನಾಪತ್ತೆ

Spread the love

ರಾಯಚೂರು: ಮಂತ್ರಾಲಯದ ಬಳಿ ತುಂಗಭದ್ರಾ ನದಿಯಲ್ಲಿ ಈಜಲು ಹೋಗಿದ್ದ ಮೂವರು ಯುವಕರು ನಾಪತ್ತೆಯಾಗಿರುವ ಘಟನೆ ಶನಿವಾರ ನಡೆದಿದೆ. ಯುವಕರನ್ನು ಹಾಸನ ಮೂಲದ ಅಜಿತ್ (20), ಸಚಿನ್ (20) ಹಾಗೂ ಪ್ರಮೋದ್​ (19) ಎಂದು ಗುರುತಿಸಲಾಗಿದೆ.

ಶ್ರೀ ರಾಘವೇಂದ್ರ ಸ್ವಾಮಿ ಮಠಕ್ಕೆ ರಾಯರ ದರ್ಶನಕ್ಕಾಗಿ ಹಾಸನದಿಂದ 7 ಜನ ಯುವಕರ ತಂಡ ಬಂದಿತ್ತು. ಯುವಕರು ಸ್ನಾನಘಟ್ಟದ ಬಳಿ ತುಂಬಿ ಹರಿಯುತ್ತಿರುವ ತುಂಗಭದ್ರಾ ನದಿಯಲ್ಲಿ ಈಜಲು ಹೋಗಿದ್ದರು. ಆಗ ನದಿಗೆ ಹೆಚ್ಚಿನ ನೀರು ಹರಿಬಿಟ್ಟಿರುವುದ್ದರಿಂದ, ನೀರಿನ ಸೆಳೆತಕ್ಕೆ ಸಿಲುಕಿ ಕೊಚ್ಚಿಕೊಂಡು ಹೋಗಿ ನಾಪತ್ತೆಯಾಗಿದ್ದಾರೆ ಎಂದು ಪೊಲೀಸ್​ ಮೂಲಗಳು ತಿಳಿಸಿವೆ.

ನದಿಯಲ್ಲಿ ನೀರಿನ ರಭಸ ಕಂಡು ಬೇಡವೆಂದು ಹೇಳಿದರೂ ಈಜಲು ಹೋಗಿದ್ದಾರೆ ಎಂದು ಸ್ಥಳೀಯರು ಹೇಳುತ್ತಿದ್ದಾರೆ. ಮಂತ್ರಾಲಯ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಜರುಗಿದ್ದು, ಪೊಲೀಸರು ಹಾಗೂ ಈಜುಗಾರರ ತಂಡದಿಂದ ಯುವಕರ ಶೋಧ ಕಾರ್ಯ ನಡೆದಿದೆ. ರಾತ್ರಿಯಾಗಿದ್ದರಿಂದ ಶೋಧ ಕಾರ್ಯಾಚರಣೆ ನಿಲ್ಲಿಸಿದ್ದು, ಭಾನುವಾರ ಬೆಳಗ್ಗೆ ಪುನರಾರಂಭಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.


Spread the love

About Laxminews 24x7

Check Also

ಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್!

Spread the loveಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್! • ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ