ರಾಷ್ಟ್ರೀಯ ಲೋಕ್ ಅದಾಲತ್: 11,674 ಪ್ರಕರಣಗಳು ಇತ್ಯರ್ಥ, ಮತ್ತೆ ಒಂದಾದ 44 ದಂಪತಿಗಳು
ಮೈಸೂರು: ರಾಷ್ಟ್ರೀಯ ಲೋಕ್ ಅದಾಲತ್ ನಲ್ಲಿ 11,674 ಪ್ರಕರಣಗಳನ್ನು ಇತ್ಯರ್ಥ ಮಾಡಲಾಗಿದೆ. ನವದೆಹಲಿಯ ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರ ಮತ್ತು ಬೆಂಗಳೂರಿನ ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ನಿರ್ದೇಶನದಂತೆ ಶನಿವಾರ ಮೈಸೂರು ಜಿಲ್ಲೆಯನ್ನೊಳಗೊಂಡಂತೆ ರಾಜ್ಯಾದ್ಯಂತ ಎಲ್ಲಾ ನ್ಯಾಯಾಲಯಗಳಲ್ಲಿ ಬಾಕಿಯಿರುವ ಪ್ರಕರಣಗಳಲ್ಲಿ ಕಾನೂನಿನ ಪ್ರಕಾರ ರಾಜಿಯಾಗಬಹುದಾದ ಪ್ರಕರಣಗಳನ್ನು ಮತ್ತು ವಾಜ್ಯ ಪೂರ್ವ ಪ್ರಕರಣಗಳನ್ನು ರಾಜಿ ಸಂಧಾನದ ಮೂಲಕ ಇತ್ಯರ್ಥಪಡಿಸುವ ಉದ್ದೇಶದಿಂದ ರಾಷ್ಟ್ರೀಯ ಲೋಕ್ ಅದಾಲತ್‌ನ್ನು ಹಮ್ಮಿಕೊಳ್ಳಲಾಗಿತ್ತು.
ಮೈಸೂರು ನಗರ ಮತ್ತು ತಾಲೂಕುಗಳಲ್ಲಿನ ನ್ಯಾಯಾಲಯಗಳಲ್ಲಿ ಒಟ್ಟು 1,27,153 ಪ್ರಕರಣಗಳು ವಿಚಾರಣೆಗೆ ಬಾಕಿಯಿದ್ದು, ಅವುಗಳ ಪೈಕಿ 61,193 ಸಿವಿಲ್ ಪ್ರಕರಣಗಳು ಹಾಗೂ 60,932 ಕ್ರಿಮಿನಲ್ ಪ್ರಕರಣಗಳಿವೆ. ಪ್ರಸ್ತುತ ಸದರಿ ಪ್ರಕರಣಗಳಲ್ಲಿ 39,640 ಪ್ರಕರಣಗಳು ರಾಜಿಯಾಗಬಹುದಾದ ಕೇಸ್ಗಳಾಗಿದ್ದು, ಅವುಗಳ ಪೈಕಿ 22,161 ಕೇಸ್ಗಳನ್ನು ರಾಜಿ ಸಂಧಾನಕ್ಕಾಗಿ ತೆಗೆದುಕೊಳ್ಳಲಾಗಿತ್ತು. ರಾಜಿ ಸಂಧಾನಕ್ಕಾಗಿ ತೆಗೆದುಕೊಂಡ ಪ್ರಕರಣಗಳಲ್ಲಿ (ನ್ಯಾಯಾಲಯದಲ್ಲಿ ಬಾಕಿ ಇರುವ) 11,674 ಪ್ರಕರಣಗಳನ್ನು ರಾಷ್ಟ್ರೀಯ ಲೋಕ್ ಅದಾಲತ್‌ನಲ್ಲಿ ಇತ್ಯರ್ಥಪಡಿಸಲಾಗಿದೆ.
Laxmi News 24×7