Breaking News

ಗ್ರಾಮಾಂತರ ಜಿಲ್ಲಾ ಕಾಂಗ್ರೆಸ್ ಸಮಿತಿಗೆ ಮುಖ್ತಾರ ನೇಮಕ

Spread the love

ಗ್ರಾಮಾಂತರ ಜಿಲ್ಲಾ ಕಾಂಗ್ರೆಸ್ ಸಮಿತಿಗೆ ಮುಖ್ತಾರ ನೇಮಕ
ಬೆಳಗಾವಿ ಗ್ರಾಮಾಂತರ ಜಿಲ್ಲಾ ಕಾಂಗ್ರೆಸ್ ಸಮಿತಿಗೆ ಮುಖ್ತಾರ ಇನಾಮದಾರ ಅವರು ಕಾರ್ಯದರ್ಶಿಯಾಗಿ ನೇಮಕ ಮಾಡಿ ಪ್ರದೇಶ ಕಾಂಗ್ರೇಸ್ ಕಮಿಟಿ ಆದೇಶ ಪತ್ರ ಹೊರಡಿಸಿದೆ.
ಕೆಪಿಸಿಸಿ ಅಧ್ಯಕ್ಷರಾದ ಡಿ. ಕೆ. ಶಿವಕುಮಾರ್ ಹಾಗೂ ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಜಿ.ಸಿ ಚಂದ್ರಶೇಖರ್ ಅವರ ಅನುಮೋದನೆಯ ಮೇರೆಗೆ ಇಲ್ಲಿನ ಗಾಂಧಿ ನಗರದ ಮುಖ್ತಾರ ಇನಾಮದಾರ ಅವರನ್ನು “ಬೆಳಗಾವಿ ಗ್ರಾಮಾಂತರ ಜಿಲ್ಲಾ ಕಾರ್ಯದರ್ಶಿ” ಯನ್ನಾಗಿ ನೇಮಕ ಮಾಡಲಾಗಿದೆ.
ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಶನಿವಾರ ಬೆಳಗಾವಿ ಗ್ರಾಮಾಂತರ ಜಿಲ್ಲಾಧ್ಯಕ್ಷರಾದ ವಿನಯ ನಾವಲಗಟ್ಟಿ ಅವರು ನೇಮಕಾತಿ ಆದೇಶ ಪ್ರತಿಯನ್ನು ಇನಾಮದಾರಗೆ ಹಸ್ತಾಂತರಿಸಿದರು.
ಪಕ್ಷ ಜವಾಬ್ದಾರಿಯುತ ಸ್ಥಾನ ನೀಡಿದೆ. ಹಿರಿಯ ನಾಯಕರ ಮಾರ್ಗದರ್ಶನ ಮತ್ತು ಸ್ಥಳೀಯ ಮುಖಂಡರ ಸಹಕಾರದೊಂದಿಗೆ ಕಾಂಗ್ರೆಸ್ ಪಕ್ಷದ ತತ್ವ, ಸಿದ್ಧಾಂತ ಮತ್ತು ಕಾರ್ಯಕ್ರಮಗಳ ಅನುಷ್ಠಾನದಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡು ಪಕ್ಷದ ಸಂಘಟನೆ ಮತ್ತು ಬಲವರ್ಧನೆಗೆ ಜಿಲ್ಲಾ ಮತ್ತು ಬ್ಲಾಕ್ ಕಾಂಗ್ರೆಸ್ ಸಮಿತಿಗಳೊಂದಿಗೆ ಸಹಕರಿಸಿಕೊಂಡು ಕಾರ್ಯನಿರ್ವಹಿಸಬೇಕೆಂದು ಜಿಲ್ಲಾಧ್ಯಕ್ಷರು ತಿಳಿಸಿದರು.

Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ