Breaking News

ಬೆಂಗಳೂರು-ಮೈಸೂರು ಎಕ್ಸ್​ಪ್ರೆಸ್​ವೇಯಲ್ಲಿ ಭೀಕರ ಕಾರು ಅಪಘಾತ; ಮೂವರು ಸಾವು

Spread the love

ರಾಮನಗರ: ವೇಗವಾಗಿ ಬಂದ ಕಾರೊಂದು ನಿಯಂತ್ರಣ ತಪ್ಪಿ, ತಡೆಗೋಡೆಗೆ ಡಿಕ್ಕಿ ಹೊಡೆದ ಪರಿಣಾಮ ಮೂವರು ಮೃತಪಟ್ಟು, ಓರ್ವನಿಗೆ ತೀವ್ರ ಗಾಯಗಳಾದ ಘಟನೆ ಬೆಂಗಳೂರು-ಮೈಸೂರು ಎಕ್ಸ್​ಪ್ರೆಸ್​ವೇಯಲ್ಲಿ ಭಾನುವಾರ ಮುಂಜಾನೆ ಸಂಭವಿಸಿದೆ.

ಬೆಂಗಳೂರು-ಮೈಸೂರು ಹೆದ್ದಾರಿಯ ಜಯಪುರ ಬ್ರಿಡ್ಜ್​ ಬಳಿ ಅಪಘಾತ ಸಂಭವಿಸಿದೆ. ಡಿಕ್ಕಿ ರಭಸಕ್ಕೆ ಸ್ಥಳದಲ್ಲೇ ಮೂವರು ಸಾವನ್ನಪ್ಪಿದ್ದರೆ, ಗಂಭೀರ ಗಾಯಗೊಂಡ ಮತ್ತೋರ್ವನಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಮೃತರೆಲ್ಲರೂ ಮಂಡ್ಯ ಜಿಲ್ಲೆಯ ಕೆ.ಆರ್​. ಪೇಟೆ ಮೂಲದವರಾಗಿದ್ದಾರೆ. ಮೃತರನ್ನು ಮುತ್ತುರಾಜು (55), ತಮ್ಮನಗೌಡ (27), ಹಾಗೂ ಕಾರು ಚಾಲಕ‌ ಸಚಿನ್‌ (27) ಎಂದು ಗುರುತಿಸಲಾಗಿದೆ. ಸಂಜು (28) ಎಂಬಾತನಿಗೆ ಚಿಕಿತ್ಸೆ ಮುಂದುವರೆದಿದೆ. ಸ್ವಿಫ್ಟ್ ಕಾರು ಮೈಸೂರಿನಿಂದ ಬೆಂಗಳೂರು ಕಡೆ ಹೋಗುತ್ತಿತ್ತು.

ಕಾರು ಗುದ್ದಿದ ರಭಸಕ್ಕೆ ಸಂಪೂರ್ಣ ನಜ್ಜುಗುಜ್ಜಾಗಿದೆ. ನಿದ್ದೆ ಮಂಪರಿನಲ್ಲಿದ್ದ ಚಾಲಕ ನಿಯಂತ್ರಣ ಕಳೆದುಕೊಂಡು ತಡೆಗೋಡೆಗೆ ಡಿಕ್ಕಿ ಹೊಡೆದಿದ್ದಾನೆ ಎನ್ನಲಾಗುತ್ತಿದೆ. ಸ್ಥಳಕ್ಕೆ ರಾಮನಗರ ಸಂಚಾರ ಠಾಣೆ ಪೊಲೀಸರು ಭೇಟಿ ನೀಡಿ, ಪರಿಶೀಲನೆ ಕೈಗೊಂಡಿದ್ದಾರೆ.


Spread the love

About Laxminews 24x7

Check Also

ಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್!

Spread the loveಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್! • ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ