ಚಿತ್ರದುರ್ಗ ನಗರದಲ್ಲಿ ನೂತನವಾಗಿ ನಿರ್ಮಾಣಗೊಳ್ಳುತ್ತಿರುವ ಜಿಲ್ಲಾಧಿಕಾರಿ ಕಚೇರಿ ಕಟ್ಟಡದ ಕಾಮಗಾರಿ ಪ್ರಗತಿಯನ್ನು ಇಂದು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಲಾಯಿತು.
ಈ ಸಂದರ್ಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀ ಡಿ. ಸುಧಾಕರ್, ಶಾಸಕರಾದ ಶ್ರೀ ಟಿ. ರಘುಮೂರ್ತಿ ಹಾಗೂ ಶ್ರೀ ಕೆ.ಸಿ. ವೀರೇಂದ್ರ ಅವರ ಜೊತೆಗೂಡಿ, ಕಾಮಗಾರಿ ಕುರಿತು ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿ, ಅಗತ್ಯ ಸಲಹೆಗಳು ಹಾಗೂ ಸೂಕ್ತ ಸೂಚನೆಗಳನ್ನು ನೀಡಲಾಯಿತು.
ನಗರಕ್ಕೆ ಆಗಮಿಸಿದ ಸಂದರ್ಭದಲ್ಲಿ ಜನಪ್ರತಿನಿಧಿಗಳು ಹಾಗೂ ಸ್ಥಳೀಯ ಮುಖಂಡರು ಆತ್ಮೀಯವಾಗಿ ಸನ್ಮಾನಿಸಿ ಸ್ವಾಗತಿಸಿದರು.