Breaking News

ಸಾವಳಗಿ ಪೊಲೀಸರ ಭರ್ಜರಿ ಕಾರ್ಯಾಚರಣೆ

Spread the love

ಸಾವಳಗಿ ಪೊಲೀಸರ ಭರ್ಜರಿ ಕಾರ್ಯಾಚರಣೆ
₹5.55 ಲಕ್ಷ ಮೌಲ್ಯದ 11 ದ್ವಿಚಕ್ರ ವಾಹನಗಳೊಂದಿಗೆ 4 ಜನ ಕಳ್ಳರ ಬಂಧನ
ಬಾಗಲಕೋಟೆ ಜಿಲ್ಲೆಯ ಸಾವಳಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಭರ್ಜರಿ ಕಾರ್ಯಾಚರಣೆ ನಡೆಸಿದ್ದಾರೆ.
4 ಜನ ಬೈಕ್ ಕಳ್ಳರನ್ನು ಬಂಧಿಸಿದ ಪೊಲೀಸರು ಒಟ್ಟು ₹5.55 ಲಕ್ಷ ಮೌಲ್ಯದ 11 ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಂಡಿದ್ದಾರೆ.
ಬಾಗಲಕೋಟೆ ಜಿಲ್ಲೆಯ ಎಸ್ಪಿ ಅಮರನಾಥರೆಡ್ಡಿ ಅವರ ಮಾರ್ಗದರ್ಶನದಲ್ಲಿ ಜಮಖಂಡಿ ಡಿವೈಎಸ್ಪಿ ಸೈಯದ್ ರೋಷ್ ಮತ್ತು ಸಿಪಿಐ ಮಲ್ಲಪ್ಪ ಮಡ್ಡಿ ನೇತೃತ್ವದ ಪೊಲೀಸ್ ತಂಡವು ಈ ಕಾರ್ಯಾಚರಣೆಯನ್ನು ಯಶಸ್ವಿಯಾಗಿ ನಡೆಸಿದ್ದು, ಪೊಲೀಸರು 2 ಪ್ರತ್ಯೇಕ ಪ್ರಕರಣಗಳಲ್ಲಿ ಒಟ್ಟು 4 ಜನರನ್ನು ಬಂಧಿಸಿದ್ದಾರೆ.
ಹಿರೇಪಡಸಲಗಿ ಗ್ರಾಮದ ಪರಸಪ್ಪ ಎಂಬ ಆರೋಪಿಯಿಂದ ಒಟ್ಟು ₹5.55 ಲಕ್ಷ ಮೌಲ್ಯದ 11 ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಂಡಿದ್ದಾರೆ.
ಮತ್ತೊಂದು ಪ್ರಕರಣದಲ್ಲಿ ಮೇಕೆ ಹಾಗೂ ಪಂಪಸೆಟ್ ಕಳವು ಮಾಡಿದ್ದ 3 ಆರೋಪಿಗಳನ್ನು ಬಂಧಿಸಲಾಗಿದೆ. ಬಂಧಿತರು ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಸುಟ್ಟಟ್ಟಿ ಗ್ರಾಮದವರಾಗಿದ್ದು, ಇವರನ್ನು ಹನಮಂತ, ಪರಶುರಾಮ ಮತ್ತು ಸುನೀಲ್ ಎಂದು ಗುರುತಿಸಲಾಗಿದೆ.
ಈ ಕುರಿತು ಸಾವಳಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ. ಸ್ಥಳೀಯ ನಾಗರಿಕರು ಪೋಲಿಸರ ಈ ಕಾರ್ಯಾಚರಣೆಗೆ ಶ್ಲಾಘನೆ ವ್ಯಕ್ತಪಡಿಸಿದ್ದಾರೆ.

Spread the love

About Laxminews 24x7

Check Also

ಬಿಜೆಪಿಯ ಒಂದು ಗುಂಪಿಂದ ಧರ್ಮಸ್ಥಳದ ವಿರುದ್ಧ ಅಪಪ್ರಚಾರ: ಸಚಿವ ಸತೀಶ್ ಜಾರಕಿಹೊಳಿ

Spread the loveಚಿಕ್ಕೋಡಿ: ಬಿಜೆಪಿಯಲ್ಲಿ ಎರಡು ಗುಂಪುಗಳಿವೆ. ಅವರಲ್ಲಿಯೇ ಧರ್ಮಸ್ಥಳದ ವಿರುದ್ಧ ಪರ- ವಿರೋಧವಿದೆ. ಇದರಿಂದಾಗಿ, ಧರ್ಮಸ್ಥಳ ಕ್ಷೇತ್ರದ ಬಗ್ಗೆ ಅಪಪ್ರಚಾರ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ