ಬೆಂಗಳೂರು: ತಮ್ಮ ವಿರುದ್ಧದ ಪ್ರಕರಣ ಕೈ ಬಿಟ್ಟ ಖುಷಿಯಲ್ಲಿದ್ದ ರಾಜಕಾರಣಿಗಳಿಗೆ ಶಾಕ್ ಹೈಕೋರ್ಟ್ ಶಾಕ್ ನೀಡಿದ್ದು, ಸರ್ಕಾರದ ಆದೇಶ ಅನುಷ್ಟಾನಗೊಳಿಸದಂತೆ ಹೈಕೋರ್ಟ್ ನಿರ್ಬಂಧ ಹೇರಿದೆ.
ಆಗಸ್ಟ್ 31 ರಂದು ಶಾಸಕರು, ಸಂಸದರ ಸೇರಿದಂತೆ ಜನಪ್ರತಿನಿಧಿಗಳ ವಿರುದ್ಧದ 62 ಪ್ರಕರಣಗಳನ್ನು ಕೈಬಿಟ್ಟ ಹಿನ್ನೆಲೆಯಲ್ಲಿ ಪೀಪಲ್ ಯೂನಿಯನ್ ಫಾರ್ ಸಿವಿಲ್ ಲಿಬರ್ಟೀಸ್ ಸಂಸ್ಥೆಯೂ ಹೈಕೋರ್ಟ್ನಲ್ಲಿ ಸಾರ್ವಜನಿಕರ ಹಿತಾಸಕ್ತಿ ಅರ್ಜಿ (ಪಿಐಎಲ್) ಸಲ್ಲಿಕೆ ಮಾಡಿತ್ತು. ಅರ್ಜಿಯಲ್ಲಿ ಸರ್ಕಾರ ನಿಯಮಬಾಹಿರವಾಗಿ, ಅಭಿಯೋಜಕರ ಅಭಿಪ್ರಾಯವಿಲ್ಲದೇ ನಿರ್ಧಾರ ಕೈಗೊಂಡಿದೆ ಎಂದು ತಿಳಿಸಿತ್ತು.
ಸದ್ಯ ಪಿಐಎಲ್ ಸ್ವೀಕರಿಸುವ ಹೈಕೋರ್ಟ್ ಸರ್ಕಾರದ ಕ್ರಮಕ್ಕೆ ನಿರ್ಬಂಧ ವಿಧಿಸಿ ಅರ್ಜಿಯ ವಿಚಾರಣೆಯನ್ನು ಮುಂದೂಡಿದೆ. ಅಲ್ಲದೇ ರಾಜ್ಯ ಸರ್ಕಾರಕ್ಕೆ 2021ರ ಜನವರಿ 22ರೊಳಗೆ ಆಕ್ಷೇಪಣೆ ಸಲ್ಲಿಸಲು ನಿರ್ದೇಶನ ನೀಡಿದೆ.
Laxmi News 24×7