ಕಿತ್ತೂರು ಶಾಸಕ ಬಾಬಾಸಾಹೇಬ್ ಪಾಟೀಲ್ ಅವರು ಬಿಜೆಪಿ ಕಾರ್ಯಕರ್ತರನ್ನು ಅವಹೇಳನ ಮಾಡಿದ್ದಾರೆಂದು ಆರೋಪಿಸಿ ಇಂದು ಕೈ ಶಾಸಕರ ಗೃಹ ಕಚೇರಿಗೆ ಬಿಜೆಪಿ ಕಾರ್ಯಕರ್ತರು ಮುತ್ತಿಗೆ ಹಾಕಲು ಯತ್ನಿಸಿದರು. ಕೈ ಶಾಸಕರು ಬಹಿರಂಗವಾಗಿ ಕ್ಷಮೆ ಯಾಚಿಸಬೇಕೆಂದು ಒತ್ತಾಯಿಸಿದರು.
ಕಿತ್ತೂರು ಶಾಸಕ ಬಾಬಾಸಾಹೇಬ್ ಪಾಟೀಲ್ ಅವರು ಬಿಜೆಪಿ ಕಾರ್ಯಕರ್ತರನ್ನು ಅವಹೇಳನ ಮಾಡಿದ್ದಾರೆಂದು ಆರೋಪಿಸಿ ಇಂದು ಶಾಸಕರ ಗೃಹ ಕಚೇರಿಗೆ ಮುತ್ತಿಗೆ ಹಾಕಲು ಬಿಜೆಪಿ ಕಾರ್ಯಕರ್ತರು ಮುಂದಾಗಿದ್ದಾರೆ. ಈ ಕುರಿತು ಮಾತನಾಡಿದ ಮಾಜಿ ಶಾಸಕ ಮಹಾಂತೇಶ್ ದೊಡ್ಡಗೌಡರ ಅವರು, ಜುಲೈ 14 ರಂದು ನಡೆದ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಕಿತ್ತೂರು ಶಾಸಕ ಬಾಬಾಸಾಹೇಬ್ ಪಾಟೀಲ್ ಅವರು ಬಿಜೆಪಿ ಮಕ್ಕಳು ಎಂದು ಪದ ಬಳಕೆ ಮಾಡಿ ಬಿಜೆಪಿಯನ್ನು ಅವಹೇಳನ ಮಾಡಿದ್ದಾರೆ.
ಪಾದಯಾತ್ರೆ ಮೂಲಕ ಹೋಗಿ ಕೈ ಶಾಸಕರ ನಿವಾಸದ ಎದುರು ಪ್ರತಿಭಟಿಸಿ ತಕ್ಕ ಉತ್ತರ ನೀಡುತ್ತೇವೆ. ಈಗಾಗಲೇ, ಬಿಜೆಪಿಯ ಮಂಡಳ ಅಧ್ಯಕ್ಷರು ಕಿತ್ತೂರು ಠಾಣೆಗೆ ದೂರು ನೀಡಿದ್ದಾರೆ. ಕಿತ್ತೂರು ಶಾಸಕ ಬಾಬಾಸಾಹೇಬ್ ಪಾಟೀಲ್ ಅವರು ಮೊದಲೂ ಕ್ಷಮೆ ಕೇಳಬೇಕು. ಪಕ್ಷವನ್ನು ನಾವು ತಾಯಿಯ ಸಮಾನ ಕಾಣುತ್ತೇವೆ. ಆದರೇ, ಪಕ್ಷದ ಬಗ್ಗೆ ಹಗುರವಾಗಿ ಮಾತನಾಡಿರುವುದು ಕೈ ನಾಯಕರ ಸಂಸ್ಕೃತಿಯನ್ನು ತಿಳಿಸುತ್ತದೆ ಎಂದರು.
ಇನ್ನು ಬಿಜೆಪಿ ಮಂಡಳ ಅಧ್ಯಕ್ಷರು ಮಾತನಾಡಿ ಪಕ್ಷವನ್ನು ಮಾತೃ ಸ್ಥಾನದಲ್ಲಿಟ್ಟು ಬಿಜೆಪಿ ಗೌರವಿಸುತ್ತದೆ. ಆದರೇ, ಕಿತ್ತೂರು ಶಾಸಕ ಬಾಬಾಸಾಹೇಬ್ ಪಾಟೀಲ್ ಅವರು ಅವಹೇಳನ ಮಾಡಿದ್ದನ್ನು ಸಹಿಸುವುದಿಲ್ಲ ಎಂದರು. ಕೈ ಶಾಸಕರು ಬಹಿರಂಗವನ್ನು ಕ್ಷಮೆಯನ್ನು ಕೇಳಬೇಕು ಎಂದರು.
ಈ ಸಂದರ್ಭದಲ್ಲಿ ನೂರಾರು ಸಂಖ್ಯೆಯಲ್ಲಿ ಬಿಜೆಪಿ ಪದಾಧಿಕಾರಿಗಳು ಮತ್ತು ಕಾರ್ಯಕರ್ತರು ಭಾಗಿಯಾಗಿದ್ಧರು.