Breaking News

ಗಾಂಜಾ ಮಾರಾಟ: ಪ.ಬಂಗಾಳದ ಐವರಿಗೆ 4 ವರ್ಷ ಜೈಲು ಶಿಕ್ಷೆ ವಿಧಿಸಿದ ಶಿವಮೊಗ್ಗ ಕೋರ್ಟ್

Spread the love

ಶಿವಮೊಗ್ಗ: ತೀರ್ಥಹಳ್ಳಿ ಪೊಲೀಸ್​​​​ ಠಾಣಾ ವ್ಯಾಪ್ತಿಯಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಐವರು ಅಪರಾಧಿಗಳಿಗೆ ಇಲ್ಲಿನ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು 4 ವರ್ಷ ಕಠಿಣ ಕಾರಾಗೃಹ ಶಿಕ್ಷೆ ಹಾಗೂ 25 ಸಾವಿರ ರೂ. ದಂಡ ವಿಧಿಸಿ ಆದೇಶಿದೆ.

ಪಶ್ಚಿಮ ಬಂಗಾಳದ ಅಲೋಕ್ (34), ಶ್ರೀವಾಷ್ ಸರ್ಕಾರ್ (20), ಅಮ್ರಿತ್ ಮಂಡಲ್ (27) ಹಾಗೂ ಸಂಕರ್ ಬ್ಯಾಪಾರಿ (28) ಹಾಗೂ ಹರಧನ್ ಮಂಡಲ್ ಶಿಕ್ಷೆಗೊಳಗಾದ ಅಪರಾಧಿಗಳು. ಕಟ್ಟಡ ಸೆಂಟ್ರಿಂಗ್ ಕೆಲಸಕ್ಕೆಂದು ತೀರ್ಥಹಳ್ಳಿಗೆ ಈ ಐವರು ಬಂದಿದ್ದರು.

1.564 ಕೆ.ಜಿ ಗಾಂಜಾ ಪತ್ತೆ : ಅಪರಾಧಿಗಳು ತೀರ್ಥಹಳ್ಳಿಯ ವಿಠಲ ನಗರದಲ್ಲಿ ನೂತನವಾಗಿ ನಿರ್ಮಾಣವಾಗುತ್ತಿದ್ದ ಕಟ್ಟಡದ ಬಳಿಯೇ ಗಾಂಜಾವನ್ನು ಮಾರಾಟ ಮಾಡುತ್ತಿದ್ದರು. ಇದರ ಬಗ್ಗೆ ಖಚಿತ ಮಾಹಿತಿ ಮೇರೆಗೆ ತೀರ್ಥಹಳ್ಳಿ ಪೊಲೀಸರು ದಾಳಿ ನಡೆಸಿದ್ದರು. ದಾಳಿಯ ವೇಳೆ ಐವರಿಂದ 1.564 ಕೆ.ಜಿ ಗಾಂಜಾ ವಶಕ್ಕೆ ಪಡೆದುಕೊಂಡು, ಇವರ ವಿರುದ್ಧ ಎನ್​ಡಿಪಿಎಸ್​​ ಕಾಯ್ದೆಯಂತೆ ಪ್ರಕರಣ ದಾಖಲಿಸಲಾಗಿತ್ತು. ಪ್ರಕರಣ ತನಿಖೆ ನಡೆಸಿದ್ದ ತನಿಖಾಧಿಕಾರಿ ಅಶ್ವಥ್ ಗೌಡ ಅವರು ನ್ಯಾಯಾಲಯಕ್ಕೆ ದೋಷಾರೋಪಣ ಪಟ್ಟಿ ಸಲ್ಲಿಸಿದ್ದರು.

ದಂಡ ಕಟ್ಟಲು ವಿಫಲವಾದರೆ, ಹೆಚ್ಚುವರಿ ಶಿಕ್ಷೆ : ಪ್ರಕರಣ ವಿಚಾರಣೆ ನಡೆಸಿದ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶರಾದ ಮಂಜುನಾಥ್ ನಾಯಕ್, ಐವರ ವಿರುದ್ಧ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ, ನಾಲ್ಕು ವರ್ಷ ಕಠಿಣ ಕಾರಾಗೃಹ ಶಿಕ್ಷೆ, ತಲಾ 25 ಸಾವಿರ ರೂ ದಂಡ ವಿಧಿಸಿ ಆದೇಶ ಹೊರಡಿಸಿದ್ದಾರೆ. ದಂಡ ಕಟ್ಟಲು ವಿಫಲವಾದರೆ, ಹೆಚ್ಚುವರಿ 6 ತಿಂಗಳು ಸಾದಾ ಕಾರಾಗೃಹ ಶಿಕ್ಷೆ ವಿಧಿಸಿ ಆದೇಶಿಸಲಾಗಿದೆ. ಪ್ರಕರಣದಲ್ಲಿ, ಸರ್ಕಾರಿ ವಕೀಲ ಸುರೇಶ್ ಕುಮಾರ್​ ಎ.ಎಂ. ವಾದ ಮಂಡಿಸಿದ್ದರು.


Spread the love

About Laxminews 24x7

Check Also

ಬಂಗಾರ ಪ್ರಿಯರಿಗೆ ಗುಡ್‌ ನ್ಯೂಸ್‌ – 10 ಗ್ರಾಂ ಚಿನ್ನದ ಬೆಲೆ 2,900 ರೂ. ಇಳಿಕೆ

Spread the loveಬೆಂಗಳೂರು: ಕೊಲ್ಲಿ ರಾಷ್ಟ್ರಗಳ ಯುದ್ಧದ ಬಿಸಿ ನಡುವೆಯೂ ಬಂಗಾರ ಪ್ರಿಯರಿಗೆ ಗುಡ್‌ನ್ಯೂಸ್‌ ಸಿಕ್ಕಿದೆ. ಸತತ ಏರುಗತಿಯಲ್ಲಿ ಸಾಗುತ್ತಿದ್ದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ