Breaking News

ಸಿಂಹಾದ್ರಿಯ ಸಿಂಹ’ ಸಿನಿಮಾ ಪ್ರೇರಣೆ; ಭಿಕ್ಷುಕನನ್ನ ಚುನಾವಣಾ ಕಣಕ್ಕಿಳಿಸಿದ ಗ್ರಾಮಸ್ಥರು

Spread the love

ಮೈಸೂರು: ಡಾ. ವಿಷ್ಣುವರ್ಧನ್ ಅಭಿನಯದ ‘ಸಿಂಹಾದ್ರಿಯ ಸಿಂಹ’ ಸಿನಿಮಾದ ಪ್ರೇರಣೆಯಿಂದಾಗಿ ನಂಜನಗೂಡು ತಾಲ್ಲೂಕಿನ ಹುಳಿಮಾವು ಪಂಚಾಯ್ತಿ ವ್ಯಾಪ್ತಿಯ ಬೊಕ್ಕಹಳ್ಳಿ ಗ್ರಾಮದ ಯುವಕರೆಲ್ಲಾ ಸೇರಿ ಭಿಕ್ಷುಕರೊಬ್ಬರನ್ನು ಗ್ರಾಮ ಪಂಚಾಯ್ತಿ ಚುನಾವಣಾ ಅಖಾಡಕ್ಕಿಳಿಸಿದ್ದಾರೆ.

ಗ್ರಾಮದ ನಿವಾಸಿ ಅಂಕನಾಯಕ ಎಂಬುವರಿಂದ ನಾಮಪತ್ರ ಸಲ್ಲಿಕೆ ಮಾಡಿಸಲಾಗಿದೆ. ವಿಶೇಷ ಚೇತನರಾಗಿದ್ದ ಆಂಕನಾಯಕ ಊರೂರು ತಿರುಗುತ್ತಾ, ಒಂದೊತ್ತಿನ ಊಟಕ್ಕೂ ಅಲೆಯುತ್ತಿದ್ದರು. ಗ್ರಾಮದ ಬಸ್​ ನಿಲ್ದಾಣ ಮತ್ತು ಅಲ್ಲಲ್ಲಿ ವಾಸ ಮಾಡುತ್ತಾ ಭಿಕ್ಷೆ ಬೇಡಿಕೊಂಡು ಜೀವನ ಸಾಗಿಸುತ್ತಿದ್ದರು. ಕಳೆದ ಬಾರಿ ಆಯ್ಕೆಯಾದ ಗ್ರಾಮ ಪಂಚಾಯ್ತಿ ಸದಸ್ಯರು ಯಾವುದೇ ಕೆಲಸ ಮಾಡದ ಕಾರಣ ಈ ಬಾರಿ ಯುವಕರೆಲ್ಲಾ ಸೇರಿ ಅಂಕನಾಯಕರನ್ನ ಕರೆತಂದು ಚುನಾವಣೆಗೆ ನಿಲ್ಲಿಸಿದ್ದಾರೆ ಎನ್ನಲಾಗಿದೆ.
ಅಂಕನಾಯಕರಿಗೆ ಪ್ರತಿಸ್ಪರ್ಧಿಯಾಗಿ ಮತ್ತೊಬ್ಬರು ಸ್ಪರ್ಧೆ ಮಾಡಿದ್ದು, ಸಿನಿಮೀಯ ರೀತಿಯಲ್ಲೇ ಅಂಕನಾಯಕ ಅವರ ಜೊತೆ ಗ್ರಾಮದ ಯುವಕರು ಪ್ರಚಾರ ಮಾಡುತ್ತಿದ್ದಾರೆ.


Spread the love

About Laxminews 24x7

Check Also

ಬಿಜೆಪಿ ರಾಜ್ಯಾಧ್ಯಕ್ಷ ಬಿ. ವೈ. ವಿಜಯೇಂದ್ರ ಅವರು ಸಿಎಂ ಸಿದ್ದರಾಮಯ್ಯ ಕುರಿತು ವಾಗ್ದಾಳಿ

Spread the loveಮೈಸೂರು : ಸಿದ್ದರಾಮಯ್ಯ ಅವರು ಸಿಎಂ ಆಗಿ ಅಧಿಕಾರಕ್ಕೆ ಬಂದಾಗಿನಿಂದ ಕೇಂದ್ರದ ಜೊತೆ ಸಂಘರ್ಷದ ಹಾದಿ ತುಳಿದಿದ್ದಾರೆ ಎಂದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ