ಬೆಂಗಳೂರು (ಡಿ. 22): ಕರ್ನಾಟಕದಲ್ಲಿ ಇಂದಿನಿಂದ ಮೊದಲ ಹಂತದ ಗ್ರಾಮ ಪಂಚಾಯಿತಿ ಚುನಾವಣೆ ನಡೆಯಲಿದೆ. ರಾಜ್ಯದ 30 ಜಿಲ್ಲೆಗಳಲ್ಲಿಯೂ ಆಯ್ದ ತಾಲೂಕುಗಳಲ್ಲಿ ಇಂದು ಮತದಾನ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಮತದಾನ ಮಾಡಲು ಬೆಂಗಳೂರಿನಲ್ಲಿ ನೆಲೆಸಿರುವ ಬಹುತೇಕ ಜನರು ತಮ್ಮ ಊರುಗಳತ್ತ ಹೊರಟಿದ್ದಾರೆ. ಇಂದು ಬೆಳ್ಳಂಬೆಳಗ್ಗೆ ಮೆಜೆಸ್ಟಿಕ್ ಕೆಎಸ್ಆರ್ಟಿಸಿ ಬಸ್ ನಿಲ್ದಾಣದಲ್ಲಿ ನೆರೆದ ಪ್ರಯಾಣಿಕರು ತಮ್ಮ ತಮ್ಮ ಊರುಗಳಿಗೆ ಹೊರಡಲು ಬಸ್ಗಳಿಗೆ ಕಾಯುತ್ತಿದ್ದ ದೃಶ್ಯ ಕಂಡುಬಂದಿತು. ಮಧ್ಯಾಹ್ನದ ವೇಳೆಗೆ ಊರುಗಳಿಗೆ ತೆರಳಿ ಮತದಾನ ಮಾಡಲು ಮುಂದಾಗಿರುವ ಜನರು ಬೆಳಗ್ಗೆಯೇ ಬೆಂಗಳೂರಿನಿಂದ ಹೊರಟಿದ್ದಾರೆ. ಇನ್ನು ಅನೇಕರು ನಿನ್ನೆ ರಾತ್ರಿ ಬಸ್ಗೇ ಊರಿಗೆ ತೆರಳಿದ್ದಾರೆ. ಹೀಗಾಗಿ, ಬಸ್ಗಳು ಪ್ರಯಾಣಿಕರಿಂದ ತುಂಬಿ ತುಳುಕುತ್ತಿದ್ದವು.
ಇಂದು ಬೆಳಗ್ಗೆಯೇ ಬೆಂಗಳೂರಿನಿಂದ ಹೊರಟರೆ ಮಧ್ಯಾಹ್ನದ ವೇಳೆಗೆ ಊರು ತಲುಪಬಹುದು ಎಂದು ಜನರು ಪ್ರಯಾಣ ಮಾಡುತ್ತಿದ್ದಾರೆ. ಶಿವಮೊಗ್ಗ, ಕಡೂರು, ಪಾವಗಡ, ಭದ್ರಾವತಿ ಕಡೆಗೆ ತೆರಳುವ ಬಸ್ಗಳು ಪೂರ್ತಿ ರಷ್ ಆಗಿವೆ. ಇಂದು ಮೊದಲ ಹಂತದ ಗ್ರಾಮ ಪಂಚಾಯತ್ ಚುನಾವಣೆ ನಡೆಯುತ್ತಿರುವುದರಿಂದ ಜನರು ಬೆಂಗಳೂರಿನಿಂದ ತಮ್ಮ ಊರುಗಳತ್ತ ಹೊರಟಿದ್ದಾರೆ. ತಡರಾತ್ರಿವರೆಗೆ ಕೆಎಸ್ಆರ್ಟಿಸಿ ಬಸ್ ಗಳಲ್ಲಿ ಊರುಗಳತ್ತ ಮುಖ ಮಾಡಿದ ಜನರು ಗ್ರಾಮ ಪಂಚಾಯತಿ ಚುನಾವಣೆಯಲ್ಲಿ ಮತದಾನ ಮಾಡುವ ಸಲುವಾಗಿ ಊರುಗಳಿಗೆ ಪಯಣ ಬೆಳೆಸಿದ್ದಾರೆ.
Laxmi News 24×7