Breaking News

ಧರ್ಮಸ್ಥಳ ಪ್ರಕರಣ ಎಸ್ ಐಟಿಗೆ: ಸರ್ಕಾರದ ನಿಲುವು ಉತ್ತಮ- ಶ್ರೀ ಕ್ಷೇತ್ರ ಧರ್ಮಸ್ಥಳ ಪ್ರಕಟಣೆ

Spread the love

ಮಂಗಳೂರು(ದಕ್ಷಿಣ ಕನ್ನಡ): ಧರ್ಮಸ್ಥಳ ಗ್ರಾಮದಲ್ಲಿ “ಹಲವಾರು ಶವಗಳನ್ನು ಹೂತಿದ್ದೆ” ಎಂಬ ವ್ಯಕ್ತಿಯೊಬ್ಬರು ನೀಡಿರುವ ದೂರಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಈ ಪ್ರಕರಣವನ್ನು ರಾಜ್ಯ ಸರಕಾರ ಎಸ್ ಐಟಿಗೆ ನೀಡಿರುವ ಸಂಬಂಧ ಇಂದು ಪ್ರಕಟಣೆ ನೀಡಿರುವ ಶ್ರೀ ಕ್ಷೇತ್ರ ಧರ್ಮಸ್ಥಳದ ವಕ್ತಾರರು, ಸರ್ಕಾರದ ಈ ನಿಲುವು ಉತ್ತಮವಾಗಿದೆ ಎಂದು ತಿಳಿಸಿದ್ದಾರೆ.

ಶ್ರೀ ಕ್ಷೇತ್ರ ಧರ್ಮಸ್ಥಳ ವಕ್ತಾರ ಕೆ.ಪಾರ್ಶ್ವನಾಥ್ ಜೈನ್ ಅವರು ಈ ಬಗ್ಗೆ ಪ್ರಕಟಣೆ ನೀಡಿದ್ದು, ಧರ್ಮಸ್ಥಳ ಗ್ರಾಮದ ಪೊಲೀಸ್ ಠಾಣೆಯಲ್ಲಿ ದಾಖಲಿಸಿರುವ “ಹಲವಾರು ಶವಗಳನ್ನು ಹೂತಿದ್ದೆ” ಎಂಬ ದೂರು ಪ್ರಕರಣವು ಇತ್ತೀಚಿನ ದಿನಗಳಲ್ಲಿ ರಾಷ್ಟ್ರೀಯ ಮಟ್ಟದಲ್ಲಿ ಹಲವಾರು ತರ್ಕವಾತರ್ಕಗಳು, ಊಹಾಪೋಹಗಳು ಹಾಗೂ ಗೊಂದಲಗಳನ್ನು ಹುಟ್ಟುಹಾಕಿದೆ.

ಈ ಘಟನೆಗೆ ಸಂಬಂಧಿಸಿದಂತೆ ಪ್ರಾಮಾಣಿಕವಾಗಿ ತನಿಖೆ ನಡೆಯಬೇಕೆಂಬ ನಮ್ಮ ಹಾಗೂ ಸಾರ್ವಜನಿಕರ ನಿರೀಕ್ಷೆಯ ಹಿನ್ನೆಲೆಯಲ್ಲಿ, ಈ ಪ್ರಕರಣವನ್ನು ವಿಶೇಷ ತನಿಖಾ ತಂಡ (ಎಸ್.ಐ.ಟಿ.)ಗೆ ರಾಜ್ಯ ಸರ್ಕಾರ ಹಸ್ತಾಂತರಿಸಿದೆ ಎಂಬುದು ತಿಳಿದು ಬಂದಿದೆ. ಸರ್ಕಾರದ ಈ ನಿಲುವು ಉತ್ತಮವಾಗಿದೆ. ಸಮಾಜದ ನೈತಿಕತೆ ಹಾಗೂ ಶ್ರದ್ಧೆಗೆ ನಿಲುಕುವ ಬಲವಾದ ಆಧಾರವೆಂದರೆ “ಸತ್ಯ”. ಆದ್ದರಿಂದ, ಈ ಪ್ರಕರಣದಲ್ಲಿ ಎಸ್.ಐ.ಟಿ. ತನಿಖಾ ತಂಡ ಸತ್ಯಾಂಶವನ್ನು ಅತಿ ಶೀಘ್ರವಾಗಿ ಪ್ರಾಮಾಣಿಕ ತನಿಖೆ ನಡೆಸಿ ಸಾರ್ವಜನಿಕರ ಮುಂದೆ ಬಹಿರಂಗಪಡಿಸಬೇಕು ಎಂಬುದು ನಮ್ಮ ಆಶಯ ಎಂದು ತಿಳಿಸಿದ್ದಾರೆ.


Spread the love

About Laxminews 24x7

Check Also

ಇ-ಸ್ವತ್ತು ಹಾಗೂ ಹಕ್ಕು ಪತ್ರ ವಿತರಣಾ ಸಮಾರಂಭಕ್ಕೆ ಡಿಕೆಶಿ ಅವರಿಂದ ಚಾಲನೆ

Spread the loveಹೊಸಕೋಟೆ(ಬೆಂ. ಗ್ರಾಮಾಂತರ): “ಬೆಂಗಳೂರು ನಗರಕ್ಕೆ ಹೊಂದಿಕೊಂಡಿರುವ ಹೊಸಕೋಟೆಗೆ ಶೀಘ್ರ ಮೆಟ್ರೋ ಸಂಪರ್ಕ ಕಲ್ಪಿಸಲು ಅಗತ್ಯ ಯೋಜನೆ ಸಿದ್ಧಪಡಿಸಲಾಗುವುದು” …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ