Breaking News

ಧರ್ಮಸ್ಥಳ ಪ್ರಕರಣ ಎಸ್ ಐಟಿಗೆ: ಸರ್ಕಾರದ ನಿಲುವು ಉತ್ತಮ- ಶ್ರೀ ಕ್ಷೇತ್ರ ಧರ್ಮಸ್ಥಳ ಪ್ರಕಟಣೆ

Spread the love

ಮಂಗಳೂರು(ದಕ್ಷಿಣ ಕನ್ನಡ): ಧರ್ಮಸ್ಥಳ ಗ್ರಾಮದಲ್ಲಿ “ಹಲವಾರು ಶವಗಳನ್ನು ಹೂತಿದ್ದೆ” ಎಂಬ ವ್ಯಕ್ತಿಯೊಬ್ಬರು ನೀಡಿರುವ ದೂರಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಈ ಪ್ರಕರಣವನ್ನು ರಾಜ್ಯ ಸರಕಾರ ಎಸ್ ಐಟಿಗೆ ನೀಡಿರುವ ಸಂಬಂಧ ಇಂದು ಪ್ರಕಟಣೆ ನೀಡಿರುವ ಶ್ರೀ ಕ್ಷೇತ್ರ ಧರ್ಮಸ್ಥಳದ ವಕ್ತಾರರು, ಸರ್ಕಾರದ ಈ ನಿಲುವು ಉತ್ತಮವಾಗಿದೆ ಎಂದು ತಿಳಿಸಿದ್ದಾರೆ.

ಶ್ರೀ ಕ್ಷೇತ್ರ ಧರ್ಮಸ್ಥಳ ವಕ್ತಾರ ಕೆ.ಪಾರ್ಶ್ವನಾಥ್ ಜೈನ್ ಅವರು ಈ ಬಗ್ಗೆ ಪ್ರಕಟಣೆ ನೀಡಿದ್ದು, ಧರ್ಮಸ್ಥಳ ಗ್ರಾಮದ ಪೊಲೀಸ್ ಠಾಣೆಯಲ್ಲಿ ದಾಖಲಿಸಿರುವ “ಹಲವಾರು ಶವಗಳನ್ನು ಹೂತಿದ್ದೆ” ಎಂಬ ದೂರು ಪ್ರಕರಣವು ಇತ್ತೀಚಿನ ದಿನಗಳಲ್ಲಿ ರಾಷ್ಟ್ರೀಯ ಮಟ್ಟದಲ್ಲಿ ಹಲವಾರು ತರ್ಕವಾತರ್ಕಗಳು, ಊಹಾಪೋಹಗಳು ಹಾಗೂ ಗೊಂದಲಗಳನ್ನು ಹುಟ್ಟುಹಾಕಿದೆ.

ಈ ಘಟನೆಗೆ ಸಂಬಂಧಿಸಿದಂತೆ ಪ್ರಾಮಾಣಿಕವಾಗಿ ತನಿಖೆ ನಡೆಯಬೇಕೆಂಬ ನಮ್ಮ ಹಾಗೂ ಸಾರ್ವಜನಿಕರ ನಿರೀಕ್ಷೆಯ ಹಿನ್ನೆಲೆಯಲ್ಲಿ, ಈ ಪ್ರಕರಣವನ್ನು ವಿಶೇಷ ತನಿಖಾ ತಂಡ (ಎಸ್.ಐ.ಟಿ.)ಗೆ ರಾಜ್ಯ ಸರ್ಕಾರ ಹಸ್ತಾಂತರಿಸಿದೆ ಎಂಬುದು ತಿಳಿದು ಬಂದಿದೆ. ಸರ್ಕಾರದ ಈ ನಿಲುವು ಉತ್ತಮವಾಗಿದೆ. ಸಮಾಜದ ನೈತಿಕತೆ ಹಾಗೂ ಶ್ರದ್ಧೆಗೆ ನಿಲುಕುವ ಬಲವಾದ ಆಧಾರವೆಂದರೆ “ಸತ್ಯ”. ಆದ್ದರಿಂದ, ಈ ಪ್ರಕರಣದಲ್ಲಿ ಎಸ್.ಐ.ಟಿ. ತನಿಖಾ ತಂಡ ಸತ್ಯಾಂಶವನ್ನು ಅತಿ ಶೀಘ್ರವಾಗಿ ಪ್ರಾಮಾಣಿಕ ತನಿಖೆ ನಡೆಸಿ ಸಾರ್ವಜನಿಕರ ಮುಂದೆ ಬಹಿರಂಗಪಡಿಸಬೇಕು ಎಂಬುದು ನಮ್ಮ ಆಶಯ ಎಂದು ತಿಳಿಸಿದ್ದಾರೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ