Breaking News

20 ರೂಪಾಯಿಗಾಗಿ ಹೆತ್ತ ತಾಯಿಯನ್ನೇ ಕಡಿದು ಹತ್ಯೆಗೈದ ಮಗ

Spread the love

ಜುಲೈ 21: ಹಣ ಕೊಡಲಿಲ್ಲ ಎನ್ನವು ಕೋಪದಲ್ಲಿ ಮಗನೊಬ್ಬ ಹೆತ್ತ ತಾಯಿಯನ್ನೇ ಕಡಿದು ಕೊಲೆ(Murder) ಮಾಡಿರುವ ಘಟನೆ ಹರ್ಯಾಣದ ನೂಹ್​ನಲ್ಲಿ ನಡೆದಿದೆ. ಕೇವಲ 20 ರೂಪಾಯಿಗಾಗಿ 56 ವರ್ಷದ ತಾಯಿಯನ್ನು ಮಗ ಹತ್ಯೆ ಮಾಡಿದ್ದಾನೆ. ಜೈಸಿಂಗ್‌ಪುರ ಗ್ರಾಮದಲ್ಲಿ ಶನಿವಾರ ಈ ಆಘಾತಕಾರಿ ಘಟನೆ ನಡೆದಿದೆ. ಪೊಲೀಸರ ಪ್ರಕಾರ, ಮಗ ಮಾದಕ ವ್ಯಸನಿಯಾಗಿದ್ದು, ಬಹಳ ದಿನಗಳಿಂದ ಗಾಂಜಾ ಮತ್ತು ಅಫೀಮು ಸೇವಿಸುತ್ತಿದ್ದಾನೆ ಎಂದು ತಿಳಿಸಿದ್ದಾರೆ.

ಕೊಲೆ ಮಾಡಿದ ಬಳಿಕ ರಕ್ತ ಸಿಕ್ತ ಸ್ಥಿತಿಯಲ್ಲಿದ್ದ ತಾಯಿ ಜತೆಯೇ ಒಂದೇ ಮನೆಯಲ್ಲಿ ಆತ ಇಡೀ ರಾತ್ರಿ ಕಳೆದಿದ್ದಾನೆ. ಶನಿವಾರ ರಾತ್ರಿ ಜೆಮ್ಶೆಡ್ ಎಂಬಾತ ತಾಯಿ ರಜಿಯಾ ಬಳಿ 20 ರೂ. ಕೊಡುವಂತೆ ಕೇಳಿದ್ದ. ಆದರೆ ಅವರು ನಿರಾಕರಿಸಿದ್ದರು. ಅದಕ್ಕೆ ಕೋಪಗೊಂಡ ಮಗ ತಾಯಿಯನ್ನು ಕೊಡಲಿಯಿಂದ ಕಡಿದು ಹತ್ಯೆ ಮಾಡಿದ್ದಾನೆ.

ಎಫ್​ಐಆರ್ ದಾಖಲಿಸಲಾಗಿದೆ, ಮರಣೋತ್ತರ ಪರೀಕ್ಷೆಯ ನಂತರ ರಾಜಿಯಾ ಅವರ ಶವವನ್ನು ಕುಟುಂಬಕ್ಕೆ ಹಸ್ತಾಂತರಿಸಲಾಗಿದೆ. ರಾಜಿಯಾ ಅವರ ಪತಿ ಮುಬಾರಕ್ ಕೇವಲ ನಾಲ್ಕು ತಿಂಗಳ ಹಿಂದೆ ನಿಧನರಾಗಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ