Breaking News

ಹಳ್ಳಕ್ಕೆ ಉರುಳಿದ ಖಾಸಗಿ ಬಸ್

Spread the love

ಕಾರವಾರ (ಉತ್ತರಕನ್ನಡ): ಬೆಳ್ಳಂಬೆಳಗ್ಗೆ ಖಾಸಗಿ ಬಸ್​ವೊಂದು ಹಳ್ಳಕ್ಕೆ ಬಿದ್ದು, ಓರ್ವ ಪ್ರಯಾಣಿಕ ಸಾವನ್ನಪ್ಪಿ, ಐವರು ಗಂಭೀರವಾಗಿ ಗಾಯಗೊಂಡ ಘಟನೆ ಜಿಲ್ಲೆಯ ಅಂಕೋಲಾ ತಾಲೂಕಿನಲ್ಲಿ ಸೋಮವಾರ ಸಂಭವಿಸಿದೆ.

ಸೇತುವೆಯಿಂದ ಹಳ್ಳಕ್ಕೆ ಅಡ್ಡಲಾಗಿ ಬಿದ್ದ ಬಸ್​ : ಅಂಕೋಲಾ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 63ರ ಅಗಸೂರು ಬಳಿ ಖಾಸಗಿ ಸ್ಲೀಪರ್ ಬಸ್​​ ಚಾಲಕ‌ನ ನಿಯಂತ್ರಣ ತಪ್ಪಿ, ಸೇತುವೆಯಿಂದ ಹಳ್ಳಕ್ಕೆ ಅಡ್ಡಲಾಗಿ ಬಿದ್ದಿದೆ. ಬಸ್​​ನಲ್ಲಿದ್ದ 18 ಮಂದಿ ಪ್ರಯಾಣಿಕರ ಪೈಕಿ ಓರ್ವ ಮೃತಪಟ್ಟಿದ್ದು, ಐವರಿಗೆ ಗಂಭೀರ ಗಾಯಗಳಾಗಿದೆ. ಗಾಯಾಳುಗಳಿಗೆ ಅಂಕೋಲಾ ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿದ್ದು, ಗಂಭೀರವಾಗಿ ಗಾಯಗೊಂಡವರನ್ನು ಮಂಗಳೂರು ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಬಸ್​​ನಲ್ಲಿ ಸಿಲುಕಿದ್ದ ಪ್ರಯಾಣಿಕ ಸಾವು : ಕ್ರೇನ್ ಮೂಲಕ ಬಸ್​ ಮೇಲಕ್ಕೆತ್ತಲು ಮುಂದಾಗಿದ್ದ ವೇಳೆ ಬಸ್ಸಿನಲ್ಲಿ ಸಿಲುಕಿದ್ದ ಓರ್ವ ಪ್ರಯಾಣಿಕ ಕೊನೆಯುಸಿರೆಳೆದಿರುವುದು ಕಂಡು ಬಂದಿದೆ. ಪ್ರಯಾಣಿಕನ ಶವವನ್ನು ಕ್ರೇನ್ ಮೂಲಕ ಮೇಲಕ್ಕೆತ್ತಲಾಗಿದ್ದು, ಆತ ಎಲ್ಲಿಯವನು ಎನ್ನುವ ಕುರಿತು ಮಾಹಿತಿ ಇನ್ನಷ್ಟೇ ತಿಳಿದು ಬರಬೇಕಿದೆ.


Spread the love

About Laxminews 24x7

Check Also

ಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್!

Spread the loveಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್! • ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ