Breaking News
Home / ಜಿಲ್ಲೆ / ಬೆಳಗಾವಿ / ಲೆಸ್ಟ್‌ ಪ್ರೈ ಲಿ. ಹುಬ್ಬಳ್ಳಿ-ಧಾರವಾಡದಲ್ಲಿ ಎಲೆಕ್ಟ್ರಿಕ್‌ ವಾಹನ ಉತ್ಪಾದನೆ ಘಟಕ ಆರಂಭಿಸಲು, 14255 ಕೋಟಿ ರೂ. ಹೂಡಿಕೆ

ಲೆಸ್ಟ್‌ ಪ್ರೈ ಲಿ. ಹುಬ್ಬಳ್ಳಿ-ಧಾರವಾಡದಲ್ಲಿ ಎಲೆಕ್ಟ್ರಿಕ್‌ ವಾಹನ ಉತ್ಪಾದನೆ ಘಟಕ ಆರಂಭಿಸಲು, 14255 ಕೋಟಿ ರೂ. ಹೂಡಿಕೆ

Spread the love

ಬೆಳಗಾವಿ – ವಿಧಾನಸೌಧದಲ್ಲಿ ಸೋಮವಾರ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಅಧ್ಯಕ್ಷತೆಯಲ್ಲಿ ನಡೆದ 55ನೇ ರಾಜ್ಯ ಉನ್ನತ ಮಟ್ಟದ ಒಪ್ಪಿಗೆ ನೀಡಿಕೆ ಸಮಿತಿಯಲ್ಲಿ ಒಟ್ಟು 26,659 ಕೋಟಿ ರೂ. ಹೂಡಿಕೆಯ 5 ಪ್ರಸ್ತಾವನೆಗಳಿಗೆ ಅನುಮತಿ ದೊರೆತಿದ್ದು, ಇದರಿಂದ ಒಟ್ಟು 13,341 ಉದ್ಯೋಗ ಸೃಷ್ಟಿ ನಿರೀಕ್ಷೆ ಇದೆ.

*ಎಲೆಸ್ಟ್‌ ಪ್ರೈ ಲಿ. ಹುಬ್ಬಳ್ಳಿ-ಧಾರವಾಡದಲ್ಲಿ ಎಲೆಕ್ಟ್ರಿಕ್‌ ವಾಹನ ಉತ್ಪಾದನೆ ಘಟಕ ಆರಂಭಿಸಲು, 14255 ಕೋಟಿ ರೂ. ಹೂಡಿಕೆ ಮಾಡಲಿದ್ದು, ಇದರಿಂದ 867 ಉದ್ಯೋಗ ಸೃಷ್ಟಿ ನಿರೀಕ್ಷೆ ಇದೆ.

*ಎಲೆಸ್ಟ್‌ ಪ್ರೈ. ಲಿ. ಹುಬ್ಬಳ್ಳಿ-ಧಾರವಾಡದಲ್ಲಿ 6339 ಕೋಟಿ ರೂ. ಹೂಡಿಕೆಯೊಂದಿಗೆ ಎಲೆಕ್ಟ್ರಿಕ್‌ ವಾಹನ ತಯಾರಿಕೆಗೆ ಅಗತ್ಯ ಇರುವ ಲಿಥಿಯಂ ಅಯಾನ್‌ ಸೆಲ್‌ ಮತ್ತು ಬ್ಯಾಟರಿ ಉತ್ಪಾದನೆ ಘಟಕ ಸ್ಥಾಪಿಸಲಿದ್ದು, ಇದರಿಂದ 1804 ಉದ್ಯೋಗ ಸೃಷ್ಟಿಯ ನಿರೀಕ್ಷೆ ಇದೆ.

*ಹ್ಯುನೆಟ್‌ ಪ್ರೈ. ಲಿ. ಚಿಕ್ಕಬಳ್ಳಾಪುರದಲ್ಲಿ ಎಲೆಕ್ಟ್ರಿಕ್‌ ವಾಹನ ತಯಾರಿಕೆ, ಲಿಥಿಯಂ ಬ್ಯಾಟರಿ ಉತ್ಪಾದನಾ ಘಟಕ ಆರಂಭಕ್ಕೆ 1825 ಕೋಟಿ ರೂ. ಹೂಡಿಕೆ ಮಾಡಲಿದ್ದು, ಇದರಿಂದ 2210 ಉದ್ಯೋಗ ಸೃಷ್ಟಿ ನಿರೀಕ್ಷೆ ಇದೆ.

*ಮಿರಾಕ್ಯುಲಮ್‌ ಗ್ರೀನ್‌ ಪವರ್‌ ಪ್ರೈ.ಲಿ. ಜಗಳೂರಿನಲ್ಲಿ ಪವನ, ಸೌರ ವಿದ್ಯುತ್‌ ಯೋಜನೆಗೆ 1290 ಕೋಟಿ ರೂ. ಹೂಡಿಕೆ ಮಾಡಲಿದ್ದು, ಇದರಿಂದ 2820 ಉದ್ಯೋಗ ಸೃಷ್ಟಿ ನಿರೀಕ್ಷೆ ಇದೆ.
*ಸನಾಲಿ ಪವರ್‌ ಪ್ರೈ.ಲಿ. ಜಗಳೂರಿನಲ್ಲಿ ಪವನ, ಸೌರ ವಿದ್ಯುತ್‌ ಯೋಜನೆಗೆ 2,950 ಕೋಟಿ ರೂ. ಹೂಡಿಕೆ ಮಾಡಲಿದ್ದು, ಇದರಿಂದ 5640 ಉದ್ಯೋಗ ಸೃಷ್ಟಿ ನಿರೀಕ್ಷೆ ಇದೆ.

ಕೈಗಾರಿಕಾ ಸಚಿವ ಜಗದೀಶ್‌ ಶೆಟ್ಟರ್‌, ಮುಖ್ಯ ಕಾರ್ಯದರ್ಶಿ ಟಿ.ಎಂ ವಿಜಯಭಾಸ್ಕರ್‌, ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆಯ ಪ್ರಧಾನ ಕಾರ್ಯದರ್ಶಿ ಗೌರವ್ ಗುಪ್ತ, ಕೈಗಾರಿಕಾಭಿವೃದ್ದಿ ಆಯುಕ್ತೆ ಗುಂಜನ್ ಕೃಷ್ಣ, ಕರ್ನಾಟಕ ಉದ್ಯೋಗ ಮಿತ್ರದ ವ್ಯವಸ್ಥಾಪಕ ನಿರ್ದೇಶಕ ಹೆಚ್‌.ಎಂ ರೇವಣ್ಣಗೌಡ ಉಪಸ್ಥಿತರಿದ್ದರು.


Spread the love

About Laxminews 24x7

Check Also

ದೇಶದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರುವುದಕ್ಕೆ ಚಾನ್ಸೇ ಇಲ್ಲ

Spread the love ಹಾವೇರಿ : ಲೋಕಸಭೆ ಚುನಾವಣೆ ಸಮೀಪಿಸುತ್ತಿದ್ದಂತೆ ರಾಜ್ಯ ರಾಜಕಾರಣದಲ್ಲಿ ಎಲ್ಲಾ ಪಕ್ಷದ ನಾಯಕರುಗಳು ಅಭ್ಯರ್ಥಿಗಳು ಪರಸ್ಪರ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ