ಯರಗಟ್ಟಿ : 2024-25ನೇ ಸಾಲಿನ ಜಿಲ್ಲಾ ಖನಿಜ ಪ್ರತಿಷ್ಠಾನ ನಿಧಿ (ಡಿ.ಎಂ.ಎಫ್) ಯೋಜನೆಯಡಿಯಲ್ಲಿ ವಿಧಾನ ಪರಿಷತ್ ಸದಸ್ಯರಾದ ಚನ್ನರಾಜ ಹಟ್ಟಿಹೊಳಿ ಅವರ ಸೂಚನೆಯಂತೆ, ಯರಗಟ್ಟಿಯ ಶ್ರೀ ಬಸವೇಶ್ವರ ಪ್ರೌಢಶಾಲೆಗೆ ಹೊಸ ಕೊಠಡಿ ಮಂಜೂರಾಗಿದ್ದು, ನಿರ್ಮಾಣದ ಕಾಮಗಾರಿಗೆ ಮಂಗಳವಾರ ಚನ್ನರಾಜ ಹಟ್ಟಿಹೊಳಿ ಮತ್ತು ಶಾಸಕ ವಿಶ್ವಾಸ ವೈದ್ಯ ಭೂಮಿ ಪೂಜೆ ನೆರವೇರಿಸಿ, ಚಾಲನೆ ನೀಡಿದರು.
ವಿಧಾನ ಪರಿಷತ್ ಸದಸ್ಯರ ನಿಧಿಯಲ್ಲದೆ ಬೇರೆ ಬೇರೆ ಯೋಜನೆಗಳ ಅಡಿಯಲ್ಲಿ ಜಿಲ್ಲಾದ್ಯಂತ ವಿವಿಧ ಅಭಿವೃದ್ದಿ ಕಾಮಗಾರಿ ನಡೆಸಲಾಗುತ್ತಿದೆ. ಸವದತ್ತಿ ತಾಲೂಕಿನಲ್ಲಿ ಸಹ ಶಾಸಕರ ಜೊತೆಗೆ ಅಭಿವೃದ್ಧಿ ಕಾಮಗಾರಿಗೆ ಕೈಜೋಡಿಸಿದ್ದೇನೆ ಎಂದು ಚನ್ನರಾಜ ಹಟ್ಟಿಹೊಳಿ ತಿಳಿಸಿದರು.
ಈ ವೇಳೆ ನೀಲಕಂಠ ಸಿದ್ದಬಸವಣ್ಣವರ, ಮಂಜು ತಡಸಲೂರ್, ಪಿ.ಎಚ್.ಪಾಟೀಲ, ವಿ.ಜಿ.ದೇವರೆಡ್ಡಿ, ಕಾಶೀಮ್ ಹೊರಟ್ಟಿ, ಸಲೀಂ ಜಮಾದಾರ, ಹನಮಂತ ಹಾರುಗೊಪ್ಪ ಸೇರಿದಂತೆ ಅನೇಕರು ಉಪಸ್ಥಿತರಿದ್ದರು