Breaking News

ಲಿಂಗಾಯತ ಮಠಾಧಿಪತಿಗಳ ಒಕ್ಕೂಟದಿಂದ ಸಿಎಂ ಭೇಟಿ

Spread the love

ಲಿಂಗಾಯತ ಮಠಾಧಿಪತಿಗಳ ಒಕ್ಕೂಟದಿಂದ ಸಿಎಂ ಭೇಟಿ
ಬಸವ ಸಂಸ್ಕೃತಿ ಅಭಿಯಾನದ ಸಮಾರೋಪ ಸಮಾರಂಭಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಆಹ್ವಾನ!!
ಲಿಂಗಾಯತ ಮಠಾಧಿಪತಿಗಳ ಒಕ್ಕೂಟದಿಂದ 5ನೇ ಅಕ್ಟೋಬರ್ 2025ರ ಭಾನುವಾರದಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆಯಲಿರುವ ಬಸವ ಸಂಸ್ಕೃತಿ ಅಭಿಯಾನದ ಸಮಾರೋಪ ಸಮಾರಂಭಕ್ಕೆ ಸಿಎಂ ಸಿದ್ದರಾಯ್ಯ ಅವರನ್ನು ಭೇಟಿಯಾಗಿ ಆಹ್ವಾನಿಸಲಾಯಿತು
ಲಿಂಗಾಯತ ಮಠಾಧಿಪತಿಗಳ ಒಕ್ಕೂಟದಿಂದ ರಾಜ್ಯಾದ್ಯಂತ ಸೆಪ್ಟೆಂಬರ್ 1ರಿಂದ ಅಕ್ಟೋಬರ್ 1ರವರೆಗೆ ಜರುಗಲಿರುವ ‘ಬಸವ ಸಂಸ್ಕೃತಿ ಅಭಿಯಾನದ ಸಮಾರೋಪ ಸಮಾರಂಭವು 5ನೇ ಅಕ್ಟೋಬರ್ 2025ರ ಭಾನುವಾರದಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆಯಲಿದೆ.
ಈ ಮಹತ್ವಪೂರ್ಣ ಕಾರ್ಯಕ್ರಮಕ್ಕೆ ನಾಡಿನ ಮಠಾಧಿಪತಿಗಳೊಡನೆ ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ಆತ್ಮೀಯವಾಗಿ ಆಹ್ವಾನಿಸಲಾಯಿತು. ಈ ಸಂದರ್ಭದಲ್ಲಿ ಬೆಳಗಾವಿ ನಾಗನೂರು ಮಠದ ಅಲ್ಲಮಪ್ರಭು ಮಹಾಸ್ವಾಮೀಜಿ, ಅಥಣಿ ಮೊಟಗಿ ಮಠದ ಚೆನ್ನಬಸವ ಮಹಾಸ್ವಾಮೀಜಿ, ಶೇಗುಣಶಿಯ ಮಹಾಂತ ಮಹಾಸ್ವಾಮೀಜಿ, ನೆಲಮಂಗಲ ಬಸವಣ್ಣ ದೇವರ ಮಠದ ಸ್ವಾಮೀಜಿ,
ಬೆಂಗಳೂರು ನಿಜಗುಣ ಸ್ವಾಮೀಜಿ, ಮಾತೆ ಗಂಗಾಂಬಿಕಾ, ನೆಲಮಂಗಲದ ಪವಾಡ ಮಠ ಸಿದ್ದಲಿಂಗ ಸ್ವಾಮೀಜಿ, ನಂಜುಂಡಿಯ ಗುರುದೇವರ ಮಠ ಸ್ವಾಮೀಜಿ, ಚಕ್ರಭಾವಿಯ ಸಿದ್ದಲಿಂಗ ಸ್ವಾಮೀಜಿ, ಕೆಂಚುಗಲ್ ಬಂಡೆ ಮಠದ ಮಹಾಲಿಂಗ ಸ್ವಾಮೀಜಿ, ಚನ್ನಪಟ್ಟಣದ ಬೇವೂರು ಮಠದ ಶ್ರೀಗಳು ಸೇರಿದಂತೆ ಸಚಿವ ಎಂ ಬಿ ಪಾಟೀಲ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

Spread the love

About Laxminews 24x7

Check Also

ಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್!

Spread the loveಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್! • ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ