Breaking News

ಸೆಪ್ಟಂಬರ್ 22 ರಿಂದ ಅಕ್ಟೋಬರ್ 7 ರ ವರೆಗೆ ಜಾತಿಗಣತಿ ಸಮೀಕ್ಷೆ…

Spread the love

ಸೆಪ್ಟಂಬರ್ 22 ರಿಂದ ಅಕ್ಟೋಬರ್ 7 ರ ವರೆಗೆ ಜಾತಿಗಣತಿ ಸಮೀಕ್ಷೆ…
ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ವಿಶೇಷ ಸಭೆ
ರಾಜ್ಯದ ಎಲ್ಲಾ 7 ಕೋಟಿ ಜನರ ಸಮೀಕ್ಷೆ ನಡೆಸಲಾಗುವುದು. ಜಾತಿ ತಾರತಮ್ಯ ನಿವಾರಣೆ ಮಾಡುವುದು ಗಣತಿಯ ಮುಖ್ಯ ಉದ್ದೇಶ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಜಾತಿ ಜನಗಣತಿ ಮರು ಸಮೀಕ್ಷೆ ಹಿನ್ನೆಲೆಯಲ್ಲಿ, ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಇಂದು ಕಾವೇರಿ ನಿವಾಸದಲ್ಲಿ ಮಹತ್ವದ ಸಭೆ ನಡೆಯಿತು. ಸಭೆಯಲ್ಲಿ ಮಾತನಾಡಿದ ಸಿಎಂ, ಹಿಂದುಳಿದ ವರ್ಗಗಳ ಆಯೋಗ, ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ನಡೆಸುವ ಕುರಿತಾಗಿ ಸರ್ಕಾರಕ್ಕೆ ಪ್ರಸ್ತಾವನೆಯನ್ನು ಸಲ್ಲಿಸಿದೆ. ಇದರಂತೆ, ರಾಜ್ಯದ ಪ್ರತಿಯೊಬ್ಬರ ಆರ್ಥಿಕ ಪರಿಸ್ಥಿತಿ, ಜಮೀನು ಇದೆಯೇ,
ಇಲ್ಲವೇ? ಸೇರಿದಂತೆ ಸಮಗ್ರ ಸಮೀಕ್ಷೆ ನಡೆಯಬೇಕು. ಈ ಸಮೀಕ್ಷೆ ವರದಿ ಮುಂದಿನ ಬಜೆಟ್ ಸಿದ್ಧಪಡಿಸುವ ಸಂದರ್ಭದಲ್ಲಿ ಆಧಾರವಾಗಲಿದೆ.
ಈ ಬಾರಿಯ ಸಮೀಕ್ಷೆ ದೇಶದಲ್ಲೇ ಮಾದರಿ ಸಮೀಕ್ಷೆಯಾಗಬೇಕು ಎಂದು ತಿಳಿಸಿದರು. ಸೆಪ್ಟಂಬರ್ 22ರಿಂದ ಅಕ್ಟೋಬರ್ 7 ರ ವರೆಗೆ 15 ದಿನಗಳ ಕಾಲ ಸಮೀಕ್ಷೆ ನಡೆಸುವ ನಿರ್ಧಾರ ಮಾಡಲಾಗಿದೆ. ಅಕ್ಟೋಬರ್ ಕೊನೆಯ ಒಳಗಾಗಿ ಸಮೀಕ್ಷೆ ವರದಿಯನ್ನು ಸಲ್ಲಿಸಬೇಕು. ತರಬೇತಿ ಸೇರಿದಂತೆ ಸಮೀಕ್ಷೆಗೆ ಪೂರ್ವಭಾವಿ ಸಿದ್ಧತೆಗಳನ್ನು ಈಗಲೇ ಆರಂಭಿಸಲು ಸೂಚನೆ ನೀಡಲಾಗಿದೆ. ಸಮೀಕ್ಷೆ ಅತ್ಯಂತ ಸಮರ್ಪಕವಾಗಿ ನಡೆಯಬೇಕು.
ಸಮೀಕ್ಷೆ ಕುರಿತು ಯಾವುದೇ ದೂರುಗಳಿಗೆ ಆಸ್ಪದವಾಗದಂತೆ ಮುನ್ನೆಚ್ಚರಿಕೆ ವಹಿಸಬೇಕು. ಸಮೀಕ್ಷೆಯಿಂದ ಯಾರೂ ಹೊರಗುಳಿಯದಂತೆ ಖಾತ್ರಿಪಡಿಸಬೇಕು ಎಂದರು. ಕಾಂತರಾಜು ಆಯೋಗ 54 ಪ್ರಶ್ನೆಗಳನ್ನು ಸಿದ್ದಪಡಿಸಿ, manual ಆಗಿ ಈ ಹಿಂದೆ ಸಮೀಕ್ಷೆ ನಡೆಸಿತ್ತು. ಈ ಬಾರಿಯ ಸಮೀಕ್ಷೆಯಲ್ಲಿ ಇನ್ನಷ್ಟು ಅಂಶಗಳನ್ನು ಸೇರಿಸುವ ಕುರಿತು ಪರಿಶೀಲಿಸಲಾಗುವುದು. ಈ ಬಾರಿ ಮೊಬೈಲ್ ಆ್ಯಪ್ ಬಳಸಿಕೊಂಡು ಸಮೀಕ್ಷೆ ನಡೆಸಲಾಗುವುದು ಎಂದು ಸಭೆಯಲ್ಲಿ ಸಿಎಂ ತಿಳಿಸಿದರು.
ಸಭೆಯಲ್ಲಿ ಕನ್ನಡ ಮತ್ತು ಸಂಸ್ಕೃತಿ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಶಿವರಾಜ್ ತಂಗಡಗಿ, ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಮಧುಸೂಧನ್ ಆರ್. ನಾಯ್ಕ್, ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್, ಮುಖ್ಯಮಂತ್ರಿಯವರ ಕಾನೂನು ಸಲಹೆಗಾರ ಪೊನ್ನಣ್ಣ ಹಾಗೂ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.

Spread the love

About Laxminews 24x7

Check Also

ಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್!

Spread the loveಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್! • ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ