Breaking News

ಮಂಗಳೂರು ನಗರ ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ

Spread the love

ಮಂಗಳೂರು: ಮಂಗಳೂರಿನ ಜೈಲಿನಲ್ಲಿ ವಿಚಾರಣಾಧೀನ ಕೈದಿಯಿಂದ 20 ಸಾವಿರ ರೂ. ಸುಲಿಗೆ ಮಾಡಿದ ಆರೋಪ ಪ್ರಕರಣದಲ್ಲಿ ಇತರ ನಾಲ್ವರು ವಿಚಾರಣಾಧೀನ ಕೈದಿಗಳ ವಿರುದ್ಧ ಕರ್ನಾಟಕ ಸಂಘಟಿತ ಅಪರಾಧ ನಿಯಂತ್ರಣ ಕಾಯ್ದೆ (KCOCA)ಯ ವಿವಿಧ ಸೆಕ್ಷನ್​ಗಳನ್ನು ಜಾರಿಗೊಳಿಸಲಾಗಿದೆ ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ತಿಳಿಸಿದ್ದಾರೆ.

ಬರ್ಕೆ ಪೊಲೀಸ್ ಠಾಣೆಯಲ್ಲಿ ದಾಖಲಾದ ಸುಲಿಗೆ ಪ್ರಕರಣದಲ್ಲಿ ಭಾಗಿಯಾದ ಆರೋಪಿಗಳ ವಿರುದ್ಧ ಈ ಕಾಯ್ದೆ ಜಾರಿಗೊಳಿಸಲಾಗಿದೆ. ಧನುಷ್ ಭಂಡಾರಿ, ದಿಲೇಶ್ ಬಂಗೇರ, ಲಾಯ್ ವೇಗಾಸ್ ಹಾಗೂ ಸಚಿನ್ ತಲಪಾಡಿ ಎಂಬವರ ವಿರುದ್ದ ಈ ಕ್ರಮ ಕೈಗೊಳ್ಳಲಾಗಿದೆ. ಈ ಆರೋಪಿಗಳ ವಿರುದ್ಧ ಭಾರತೀಯ ನ್ಯಾಯ ಸಂಹಿತೆ (BNS) ಸೆಕ್ಷನ್ 308(4) ಮತ್ತು 3(5) ಅಡಿಯಲ್ಲಿ ಜೈಲಿನಲ್ಲಿರುವ ಸಹ ಕೈದಿಯೊಬ್ಬರಿಂದ ಸುಲಿಗೆ ಮಾಡಿದ ಆರೋಪವಿದೆ. ಆರೋಪಿಗಳು ಸಹ ಕೈದಿಯ ಮೇಲೆ ದಾಳಿ ಮಾಡಿ, ಅವನಿಂದ 20,000 ರೂ.ಗಳನ್ನು ಸುಲಿಗೆ ಮಾಡಿದ್ದಾರೆ. ಈ ಹಣವನ್ನು ಆರೋಪಿಗಳು ನೀಡಿದ ಖಾತೆಗೆ ಕೈದಿಯ ಪತ್ನಿಯಿಂದ ಜಮಾ ಮಾಡಲಾಗಿದೆ ಎಂದು ಆಯುಕ್ತರು ಮಾಹಿತಿ ನೀಡಿದ್ದಾರೆ.

ಕೆಸಿಒಸಿಎ ಕ್ರಮ: ಆರೋಪಿಗಳ ವಿರುದ್ಧ ಈಗಾಗಲೇ ಒಂದಕ್ಕಿಂತ ಹೆಚ್ಚು ಪ್ರಕರಣಗಳು ಕೋರ್ಟ್​ನಲ್ಲಿ ವಿಚಾರಣೆಯಲ್ಲಿದ್ದು, ಈ ಪ್ರಕರಣಗಳಲ್ಲಿ 3 ವರ್ಷಗಳಿಗಿಂತ ಹೆಚ್ಚಿನ ಶಿಕ್ಷೆ ವಿಧಿಸಲಾಗುತ್ತದೆ. ಇದು ಕೆಸಿಒಸಿಎ ಅಡಿ ಬರುತ್ತದೆ. ಕೆಸಿಒಸಿಎ ಅಡಿ ಶಿಕ್ಷೆಯು ಕನಿಷ್ಠ 5 ವರ್ಷಗಳ ಜೈಲು ಶಿಕ್ಷೆಯಿಂದ ಜೀವಾವಧಿ ಶಿಕ್ಷೆಯವರೆಗೆ ಇರಬಹುದು. ಒಂದು ವೇಳೆ ಆರೋಪಿಗಳ ಕೃತ್ಯದಿಂದ ಯಾವುದೇ ವ್ಯಕ್ತಿಯ ಸಾವು ಸಂಭವಿಸಿದರೆ, ಜೀವಾವಧಿ ಶಿಕ್ಷೆ ಅಥವಾ ಮರಣದಂಡನೆ ವಿಧಿಸಬಹುದಾಗಿದೆ. ಸಂಘಟಿತ ಅಪರಾಧ ಹೊಂದಿರುವ ಯಾವುದೇ ವ್ಯಕ್ತಿಯು, ಅವನ ವಿರುದ್ಧ ಹಿಂದಿನ ಪ್ರಕರಣಗಳಿಲ್ಲದಿದ್ದರೂ, ಕನಿಷ್ಠ 5 ವರ್ಷಗಳಿಂದ ಜೀವಾವಧಿ ಶಿಕ್ಷೆಗೆ ಒಳಪಡಬಹುದು ಎಂದು ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ತಿಳಿಸಿದ್ದಾರೆ.

ಕೆಸಿಒಸಿಎ ಪ್ರಕಾರ, ಈ ಪ್ರಕರಣವನ್ನು ಡಿಎಸ್​​ಪಿ ಶ್ರೇಣಿಯ ಅಧಿಕಾರಿಯು ತನಿಖೆ ನಡೆಸಬೇಕು. ಈ ಸಂಬಂಧ ಎಸಿಪಿ ಉತ್ತರ ವಿಭಾಗದ ಶ್ರೀಕಾಂತ್ ಅವರನ್ನು ತನಿಖಾಧಿಕಾರಿಯಾಗಿ ನೇಮಿಸಲಾಗಿದೆ ಎಂದು ಆಯುಕ್ತರು ಹೇಳಿದ್ದಾರೆ.


Spread the love

About Laxminews 24x7

Check Also

ವೈದ್ಯಕೀಯ ಔಷಧ, ಉಪಕರಣಗಳ ಸುಂಕ ಕಡಿತ ಸಾಧ್ಯತೆ

Spread the loveಆರೋಗ್ಯ ವಲಯಕ್ಕೆ ಬಜೆಟ್‌ನಲ್ಲಿ ಹೆಚ್ಚಿನ ಒತ್ತು ರೇಡಿಯೋ ಥೆರಪಿಯಂಥಹ ಸುಧಾರಿತ ಉಪಕರಣ ಮೇಲಿನ ಸೀಮಾ ಸುಂಕ ಕಡಿಮೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ