Breaking News
Home / ರಾಜಕೀಯ / ಬೆಳ್ಳಂದೂರು ಡಿನೋಟಿಫಿಕೇಷನ್ ಪ್ರಕರಣ ರದ್ದುಪಡಿಸಲು ಹೈಕೋರ್ಟ್​ ನಕಾರ; ಸಿಎಂ ಬಿಎಸ್​ವೈಗೆ ಸಂಕಷ್ಟ

ಬೆಳ್ಳಂದೂರು ಡಿನೋಟಿಫಿಕೇಷನ್ ಪ್ರಕರಣ ರದ್ದುಪಡಿಸಲು ಹೈಕೋರ್ಟ್​ ನಕಾರ; ಸಿಎಂ ಬಿಎಸ್​ವೈಗೆ ಸಂಕಷ್ಟ

Spread the love

ಬೆಂಗಳೂರು (ಡಿ. 22):  ಬೆಳ್ಳಂದೂರು ಭೂ ಡಿನೋಟಿಫಿಕೇಷನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಬಿಎಸ್​ ಯಡಿಯೂರಪ್ಪಗೆ  ಸಂಕಷ್ಟ ಎದುರಾಗಿದೆ. ಪ್ರಕರಣ ರದ್ದುಪಡಿಸುವಂತೆ ಕೋರಿ ಸಲ್ಲಿಸಲಾದ ಅರ್ಜಿಯನ್ನು ಹೈ ಕೋರ್ಟ್​ ನಿರಾಕರಿಸಿದೆ. ಪ್ರಕರಣ ಕುರಿತು ವಿಚಾರಣೆ ನಡೆಸಿದ ನ್ಯಾ. ಜಾನ್ ಮೈಕೆಲ್ ಕುನ್ಹಾ ನೇತೃತ್ವದ  ಪೀಠ ಅರ್ಜಿ ವಜಾಗೊಳಿಸಿದೆ. ಅರ್ಜಿಯೊಂದಿಗೆ ಸಲ್ಲಿಸಿದ್ದ ಪೂರಕ ದಾಖಲೆಗಳು ಸೂಕ್ತವಾಗಿಲ್ಲ ಎಂದು ತಿಳಿಸಿ ಹೈಕೋರ್ಟ್​​ ಏಕ ಸದಸ್ಯ ನ್ಯಾಯಪೀಠ ಅರ್ಜಿಯನ್ನು ವಜಾಗೊಳಿಸಿದೆ‌. ಇದರಿಂದ ಮುಖ್ಯಮಂತ್ರಿಗಳು ಮತ್ತೊಮ್ಮೆ ತೊಂದರೆಗೆ ಸಿಲುಕಿದ್ದಾರೆ.  ಬೆಳ್ಳಂದೂರು ಡಿನೋಟಿಫಿಕೇಷನ್​ ಸಂಬಂಧ 2013ರಲ್ಲಿ ವಾಸುದೇವರೆಡ್ಡಿ ಎಂಬುವವರು ಈ ಕುರಿತು ಖಾಸಗಿ ದೂರು ದಾಖಲಿಸಿದ್ದರು. ಕೆಐಎಡಿಬಿ ಬೆಳ್ಳಂದೂರಿನಲ್ಲಿ ಭೂಸ್ವಾಧೀನ ಮಾಡಿದೆ ಎಂದು ಅವರು ಆರೋಪಿಸಿದರು. ಈ ಪ್ರಕರಣವನ್ನು ಲೋಕಾಯುಕ್ತ ವಿಶೇಷ ಕೋರ್ಟ್​ ತನಿಖೆಗೆ ಆದೇಶಿಸಿತ್ತು. 2015 ರಲ್ಲಿ ಲೋಕಾಯುಕ್ತ ಪೊಲೀಸರು ಎಫ್ಐಆರ್ ದಾಖಲಿಸಿದ್ದರು. ಆರ್.ವಿ ದೇಶಪಾಂಡೆ ವಿರುದ್ಧದ ಕೇಸ್ ಹೈಕೋರ್ಟ್ ರದ್ದುಪಡಿಸಿತ್ತು. ಸುಪ್ರೀಂ ಕೋರ್ಟ್ ಕೂಡಾ ಆದೇಶ ಎತ್ತಿಹಿಡಿದಿತ್ತು.

2007-08ರಲ್ಲಿ ಯಡಿಯೂರಪ್ಪ ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಬೆಳ್ಳಂದೂರುಮ ವೈಟ್​ಫೀಲ್ಡ್​ನಲ್ಲಿ 14 ಎಕರೆ ಭೂಮಿಯನ್ನು ಡಿನೋಟಿಫಿಕೇಷನ್​ ಮಾಡಿದ್ದಾರ ಎಂದು ದೂರು ಸಲ್ಲಿಸಲಾಗಿತ್ತು. ಈ ಪ್ರಕರಣ ರದ್ದು ಕೋರಿ ಬಿಎಸ್​ವೈ ಹೈ ಕೋರ್ಟ್​ ಮೆಟ್ಟಿಲೇರಿದ್ದರು.


Spread the love

About Laxminews 24x7

Check Also

ಮಾಜಿ ಪ್ರಧಾನಿಗಳ ಮೊಮ್ಮಗ, ಸಂಸದ ದೇಶ ಬಿಟ್ಟು ಪರಾರಿಯಾಗಿರುವುದು ನಾಚಿಕೆಗೇಡು : ಡಿಕೆಶಿ

Spread the loveಬೆಂಗಳೂರು,ಏ.28- ತಲೆ ತಗ್ಗಿಸುವ ಕೆಲಸ ಮಾಡಿ ಮಾಜಿ ಪ್ರಧಾನಿಗಳ ಮೊಮ್ಮಗ ಹಾಗೂ ಸಂಸದ ದೇಶ ಬಿಟ್ಟು ಪರಾರಿಯಾಗಿರುವುದು ನಾಚಿಕೆಗೇಡಿನ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ