ಬಾಗಲಕೋಟೆ ಜಿಲ್ಲೆಯ ಬಾಡಗಂಡಿಯಲ್ಲಿ ಇಂದು ಶ್ರೀ ಎಸ್.ಆರ್. ಪಾಟೀಲ ಸಮೂಹ ಸಂಸ್ಥೆಗಳು ಮತ್ತು ಬಾಡಗಂಡಿ ಶಾಖೆಯ ಬೀಳಗಿ ಪಟ್ಟಣ ಸಹಕಾರಿ ಬ್ಯಾಂಕ್ ನಿಯಮಿತ ಸಂಸ್ಥೆಯ ರಜತ ಮಹೋತ್ಸವದ
ಅಂಗವಾಗಿ, ಬ್ಯಾಂಕಿನ ನವೀಕೃತ ಕಟ್ಟಡ, ನೂತನ ಶಾಖಾ ಕಟ್ಟಡ ಹಾಗೂ ಎಸ್.ಆರ್. ಪಾಟೀಲ ಶಿಕ್ಷಣ ಪ್ರತಿಷ್ಠಾನದ ವಿವಿಧ ಕಟ್ಟಡಗಳ ಉದ್ಘಾಟನೆ ಮತ್ತು ಶಿಲಾನ್ಯಾಸ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದೆ.
ಈ ಸಂದರ್ಭದಲ್ಲಿ ಹಿರಿಯ ನಾಯಕ ಶ್ರೀ ಎಸ್.ಆರ್. ಪಾಟೀಲ ಅವರು ಬಾಗಲಕೋಟೆ ಜಿಲ್ಲೆಗೆ ನೀಡಿರುವ ಅಮೂಲ್ಯ ಕೊಡುಗೆಗಳನ್ನು ಶ್ಲಾಘಿಸಲಾಯಿತು ಹಾಗೂ ಅವರಿಗೆ ಹೃತ್ಪೂರ್ವಕ ಅಭಿನಂದನೆ ಸಲ್ಲಿಸಲಾಯಿತು.
ಕಾರ್ಯಕ್ರಮದಲ್ಲಿ ವಿವಿಧ ಮಠಾಧೀಶರು, ಸಂಪುಟ ಸಹೋದ್ಯೋಗಿಗಳು, ಸಂಸದರು, ಶಾಸಕರು ಹಾಗೂ ಹಲವಾರು ಗಣ್ಯರು ಉಪಸ್ಥಿತರಿದ್ದರು.