Breaking News

ಭಾಗ್ಯ ಲಕ್ಷ್ಮಿ ಯೋಜನೆ ಕುರಿತು ಚರ್ಚಿಸಲು ಅಧಿಕಾರಿಗಳಿಗೆ ಸಿಎಂ ಸೂಚನೆ

Spread the love

ಬೆಂಗಳೂರು : ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಭಾಗ್ಯ ಲಕ್ಷ್ಮಿ ಯೋಜನೆಯಡಿ ಎಲ್ ಐ ಸಿ ಯವರು ನೀಡಬಹುದಾದ ಅತ್ಯುತ್ತಮ ಕೊಡುಗೆಯ ಕುರಿತು ಪರಿಶೀಲಿಸಿ, ಆರ್ಥಿಕ ಇಲಾಖೆಯ ಅಧಿಕಾರಿಗಳೊಂದಿಗೆ ಚರ್ಚಿಸುವಂತೆ ತಮ್ಮನ್ನು ಭೇಟಿಯಾದ ಆರ್ಥಿಕ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದರು.

ಎಲ್ ಐ ಸಿ ವಲಯ ವ್ಯವಸ್ಥಾಪಕಿ ಮಿನಿ ಇಪೆ ಅವರ ನೇತೃತ್ವದ ಎಲ್ ಐಸಿ ಅಧಿಕಾರಿಗಳ ನಿಯೋಗವು ಮುಖ್ಯಮಂತ್ರಿಗಳನ್ನು ಭೇಟಿಯಾಗಿ ಭಾಗ್ಯ ಲಕ್ಷ್ಮಿ ಯೋಜನೆಯನ್ನು ಎಲ್ ಐ ಸಿ ಮೂಲಕವೇ ಜಾರಿಗೊಳಿಸುವ ಕುರಿತು ಮತ್ತೊಮ್ಮೆ ಪರಿಶೀಲಿಸುವಂತೆ ಮನವಿ ಮಾಡಿತು.

ಇದಕ್ಕೆ ಉತ್ತರಿಸಿದ ಮುಖ್ಯಮಂತ್ರಿಗಳು, ಭಾಗ್ಯ ಲಕ್ಷ್ಮಿ ಯೋಜನೆಯಡಿ ನೀವು ನೀಡಬಹುದಾದ ಕೊಡುಗೆಗಳ ಕುರಿತು ಆರ್ಥಿಕ ಇಲಾಖೆಯ ಅಧಿಕಾರಿಗಳೊಂದಿಗೆ ಚರ್ಚಿಸಿದ ನಂತರ ಪರಿಶೀಲಿಸುವುದಾಗಿ ತಿಳಿಸಿದರು.

ಭಾಗ್ಯ ಲಕ್ಷ್ಮಿ ಯೋಜನೆಯಡಿ ರಾಜ್ಯ ಸರ್ಕಾರ ಪಾವತಿಸುತ್ತಿರುವ ಪ್ರಿಮಿಯಂ ಮೊತ್ತಕ್ಕೆ 1 ವರ್ಷದ ವೇಳೆಗೆ 1 ಲಕ್ಷ ರೂ. ನೀಡಲು ಎಲ್ ಐ ಸಿಯು ಅಸಹಾಯಕತೆ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ಭಾರತೀಯ ಅಂಚೆಯ ಸುಕನ್ಯಾ ಸಮೃದ್ಧಿ ಮೂಲಕ ಭಾಗ್ಯ ಲಕ್ಷ್ಮಿ ಯೋಜನೆ ಜಾರಿಗೊಳಿಸಲು ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿತ್ತು.ಸರ್ಕಾರದ ಮುಖ್ಯ ಕಾರ್ಯದರ್ಶಿ ಟಿ.ಎಂ. ವಿಜಯಭಾಸ್ಕರ್, ಮುಖ್ಯಮಂತ್ರಿಯವರ ಅಪರ ಮುಖ್ಯ ಕಾರ್ಯದರ್ಶಿ ಡಾ. ಇ.ವಿ. ರಮಣರೆಡ್ಡಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಡಾ. ನಾಗಲಾಂಬಿಕಾ ದೇವಿ ಮೊದಲಾದವರು ಸಭೆಯಲ್ಲಿ ಪಾಲ್ಗೊಂಡಿದ್ದರು.


Spread the love

About Laxminews 24x7

Check Also

ಕರ್ನಾಟಕದಲ್ಲಿ ಈ ಬಾರಿ ಮುಂಗಾರು ಕೊರತೆ – ಕುಡಿಯುವ ನೀರಿಗೆ ತೊಂದರೆ ಆಗದಂತೆ ಕ್ರಮ ಕೈಗೊಳ್ಳಲು ಸಿಎಂ ಸೂಚನೆ

Spread the loveಬೆಂಗಳೂರು: ರಾಜ್ಯಕ್ಕೆ ಈ ಬಾರಿ ಮುಂಗಾರು ಆತಂಕ ದೊಡ್ಡ ಮಟ್ಟದಲ್ಲಿ ತಟ್ಟಲಿದೆ. ವಾಡಿಕೆಗಿಂತ ಈ ಬಾರಿ ಮಳೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ